ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

Date:

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು.

ತುಮಕೂರು ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

“ಮುದ್ದಹನುಮೇಗೌಡರನ್ನು ನಾನೊಬ್ಬನೇ ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಅವರೂ ಕೂಡ ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಬಂದಿದ್ದಾರೆ. ಮುದ್ದಹನುಮೇಗೌಡರನ್ನು ಯಾರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೋ ಅವರೇ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುತ್ತಾರೆ” ಎಂದು ಹೇಳುವ ಮೂಲಕ ಲೋಕಸಭಾ ಚುನಾವಣೆಯ ಟಿಕೆಟ್ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭಾ ಚುನಾವಣೆಗೆ ಟಿಕೆಟ್ ಕೇಳುವ ಹಕ್ಕು ಎಲ್ಲರಿಗೂ ಇದೆ. ಆದರೆ ಯಾರಿಗೆ ಟಿಕೆಟ್ ಕೊಡಬೇಕು ಎಂಬ ಬಗ್ಗೆ ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ” ಎಂದರು.

ಬಿಜೆಪಿಯಿಂದ ಮಾಜಿ ಸಚಿವ ವಿ ಸೋಮಣ್ಣನವರು ಸ್ಪರ್ಧೆ ಮಾಡುತ್ತಾರಂತೆ ಎಂಬ ಪತ್ರಕರ್ತರ ಪ್ರಶ್ನೆಗೆ ಸಚಿವ ರಾಜಣ್ಣನವರು ಪ್ರತಿಕ್ರಿಯಿಸಿದ್ದು, “ಆಕಾಶ ನೋಡೋಕೆ ನೂಕು ನುಗ್ಗಲಾ. ಸೋಮಣ್ಣ ಸ್ಪರ್ಧೆ ಮಾಡಲಿ ಬಿಡಿ. ನಾನು ಸೋಮಣ್ಣ ಒಳ್ಳೆಯ ಸ್ನೇಹಿತರು. ಅವರ ಸ್ಪರ್ಧೆಗೂ ನಮಗೂ ಯಾವುದೇ ಸಂಬಂಧ ಇಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಡಿವೈಎಫ್ಐ ಸಮ್ಮೇಳನ | ಕೋಮುವಾದ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ: ನ್ಯಾ. ನಾಗಮೋಹನ್ ದಾಸ್

ತುಮಕೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುರುಳೀಧರ ಹಾಲಪ್ಪ ಟಿಕೆಟ್ ರೇಸ್‌ನಲ್ಲಿದ್ದಾರಲ್ಲಾ ಎಂಬ ಪ್ರಶ್ನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, “ಹಾಲಪ್ಪ ಯಾರು? ಈವರೆಗೂ ಯಾರಿಗೆ ಎಷ್ಟು ಮತ ಹಾಕಿಸಿದ್ದಾರೆ” ಎಂದು ಪ್ರಶ್ನಿಸಿದರು.

“ನನ್ನ ಕ್ಷೇತ್ರದಲ್ಲಿ ಈವರೆಗೂ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಮತ ಹಾಕಿಸಿದ್ದಾರೆ ಎಂಬುದನ್ನು ಹೇಳಲಿ, ಮಾಧ್ಯಮದವರೇ ಅವರನ್ನು ಟಿಕೆಟ್ ರೇಸ್‌ಗೆ ತರುತ್ತೀರಾ ಎಂದ ಅವರು, ಮಾರ್ಚ್‌ 10ರೊಳಗೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಫೈನಲ್ ಆಗುವ ಸಾಧ್ಯತೆ ಇದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...