ತುಮಕೂರು | ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವತಿ 12 ಗಂಟೆಯ ಬಳಿಕ ಜೀವಂತವಾಗಿ ಪತ್ತೆ!

Date:

ತುಮಕೂರು ತಾಲೂಕಿನ ಮೈದಾಳ ಕೆರೆಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕೊಚ್ಚಿ ಹೋಗಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಸತತ 12 ಕಾರ್ಯಾಚರಣೆಯ ಬಳಿಕ ರಕ್ಷಿಸಿದ್ದಾರೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ, ಜೀವಂತವಾಗಿ ಪತ್ತೆಯಾಗಿದ್ದಾರೆ.

ಸಾವನ್ನೇ ಗೆದ್ದು ಬಂದ ಯುವತಿಯನ್ನು ಹಂಸ (19) ಎಂದು ಗುರುತಿಸಲಾಗಿದ್ದು, ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಎಂಬುವವರ ಪುತ್ರಿ ಈಕೆ. ನಗರದ ಎಸ್‌ಐಟಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.

ವಿದ್ಯಾರ್ಥಿನಿ ಹಂಸ ಗೆಳತಿಯರ ಜತೆ ಮಂದಾರಗಿರಿ ಬೆಟ್ಟದ ವೀಕ್ಷಣೆಗೆ ನಿನ್ನೆ ಮಧ್ಯಾಹ್ನ ತೆರಳಿದ್ದು, ಅಲ್ಲೇ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ಬಳಿ ಹೋಗಿದ್ದಾರೆ. ಕೋಡಿ ನೀರು ಹರಿಯುವುದರಿಂದ ಖುಷಿಯಾದ ವಿದ್ಯಾರ್ಥಿನಿ ಕೋಡಿ ಬಳಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು, ಆ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಸಂಜೆ ಈ ಘಟನೆ ಸಂಭವಿಸಿದ್ದು, ಸುದ್ದಿ ತಿಳಿದ ಕೂಡಲೇ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಗಾಗಿ ತೀವ್ರ ಕಾರ್ಯಾಚರಣೆ ನಡೆಸಿದ್ದರು. ಇಂದು ಬೆಳಗ್ಗೆ ಮತ್ತೆ ರಕ್ಷಣಾ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕೈಗೊಂಡಾಗ ಕಲ್ಲಿನ ಪೊಟರೆಯಲ್ಲಿ ವಿದ್ಯಾರ್ಥಿನಿ ಸಿಲುಕಿಕೊಂಡಿರುವುದು ಪತ್ತೆಯಾಗಿದೆ. ಸದ್ಯ ವಿದ್ಯಾರ್ಥಿನಿ ಸ್ವಲ್ಪಮಟ್ಟಿಗೆ ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಸಂಜೆ ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಹಂಸ ಇಡೀ ರಾತ್ರಿ ಕಲ್ಲಿನ ಪೊಟರೆಯಲ್ಲಿ ಕಾಲ ಕಳೆದಿದ್ದು, ಪವಾಡ ಎಂಬಂತೆ ಜೀವಂತವಾಗಿ ಇರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ವಿದ್ಯಾರ್ಥಿ ಹಂಸ, ಜೀವಂತವಾಗಿರುವ ವಿಷಯ ತಿಳಿದ ಕೂಡಲೇ ಪೋಷಕರು, ಎಸ್‌ಐಟಿ ಕಾಲೇಜಿನ ಆಡಳಿತ ಮಂಡಳಿ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಮರಕುಂಬಿ ಪ್ರಕರಣ | ಊರಿಗೆ ಊರೇ ನೀರವ ಮೌನ; ಮಾತನಾಡಲೂ ಹೆದರುತ್ತಿರುವ ಗ್ರಾಮಸ್ಥರು

ಅಗ್ನಿಶಾಮಕ ದಳದ ಸತತ 12 ಗಂಟೆಗಳ ಕಾರ್ಯಾಚರಣೆಯ ಬಳಿಕ ಯುವತಿ ಬದುಕಿ ಉಳಿದಿದ್ದಾರೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಕೆರೆ ಕೋಡಿ ನೀರನ್ನು ಬೇರೆಡೆಗೆ ಡೈವರ್ಟ್ ಮಾಡಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಸತತ ಕಾರ್ಯಾಚರಣೆಯಿಂದ ಜೀವಂತವಾಗಿ ಯುವತಿ ಸಿಕ್ಕಿದ ಕೂಡಲೇ, ಪೋಷಕರು ಸೇರಿದಂತೆ ಅಧಿಕಾರಿಗಳೂ ಕೂಡ ನಿಟ್ಟುಸಿರು ಬಿಟ್ಟಿದ್ದಾರೆ. ಸತತ 12 ಗಂಟೆಗಳ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ಮುಖದಲ್ಲಿ ಮಂದಹಾಸ ಮೂಡಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...