ತುಮಕೂರು | ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಜಿಪಂ ಸಿಇಒ ಜಿ. ಪ್ರಭು ಸೂಚನೆ

Date:

 ಕೊರಟಗೆರೆ ತಾಲ್ಲೂಕಿನ ಹೂಲೀಕುಂಟೆ, ತುಂಬಾಡಿ ಹಾಗೂ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾದ ಶಾಲಾಭಿವೃದ್ದಿ ಕಾಮಗಾರಿಗಳು, ಬೂದು ನೀರು ನಿರ್ವಹಣಾ ಕಾಮಗಾರಿಗಳು ಹಾಗೂ ಜಲ ಜೀವನ್‌ ಮಿಷನ್‌ ಗ್ರಾಮೀಣ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ  ಪರಿಶೀಲಿಸಿದರು.      

 ಹೂಲೀಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಹಾಜರಾತಿ ಸೇರಿದಂತೆ ಅಡುಗೆಕೋಣೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ಬಳಿಕ ಜೆಜೆಎಂ ಕಾಮಗಾರಿಯನ್ನು ವೀಕ್ಷಿಸಿದರು. ಇದೇ ವೇಳೆ ಸ್ಥಳದಲ್ಲಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು. ಆನಂತರ ನರೇಗಾ ಯೋಜನೆಯಡಿ ಅನುಷ್ಟಾನಿಸಲಾದ ಸಿಸಿ ಚರಂಡಿ ಕಾಮಗಾರಿಯನ್ನು ವೀಕ್ಷಿಸಿದರು. ಕಾಮೇನಹಳ್ಳಿ ಮುಖ್ಯರಸ್ತೆಯಲ್ಲಿ ಸ್ವಚ್ಛ ಭಾರತ್‌ ಮಿಷನ್‌ ಗ್ರಾಮೀಣ ಯೋಜನೆಯಡಿ ಅನುಷ್ಟಾನಗೊಳಿಸಿದ ಬೂದು ನೀರು ನಿರ್ವಹಣಾ ಕಾಮಗಾರಿಯನ್ನು ಪರಿಶೀಲಿಸಿದರು.   

1001248282

ತುಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬದಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿದ ಶಾಲಾ ಕಾಂಪೌಂಡ್‌ ಕಾಮಗಾರಿಯನ್ನು ಪರಿಶೀಲಿಸಿ, ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಬಳಿಕ ಪಕೀರಪ್ಪನ ಪಾಳ್ಯ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಶೌಚಾಲಯ‌ ಕಾಮಗಾರಿ ಪರಿಶೀಲನೆ ನಡೆಸಿದರು. ಮುಗ್ಗೊಂಡನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಸಿಸಿ ರಸ್ತೆ ಹಾಗೂ ಸಿಸಿ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001248281

ತುಂಬಾಡಿ ಗ್ರಾಮದ ಹಳೇ ಕೆರೆ ಹಳ್ಳದ ಹೂಳೆತ್ತುವ ಕಾಮಗಾರಿ, ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಶಾಲಾ ಶೌಚಾಲಯ ಕಾಮಗಾರಿಯನ್ನು ಮುಖ್ಯ ಕಾರ್ಯನಿರ್ವಾಹಕ ಅದಿಕಾರಿಗಳು ಪರಿಶೀಲನೆ ನಡೆಸಿದರು.  

ಇದೇ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಪೂರ್ವ ಸಿ ಅನಂತರಾಮು, ಸಹಾಯಕ ನಿರ್ದೇಶಕ(ಗ್ರಾ.ಉ)ರಾದ ಗುರುಮೂರ್ತಿ ಎಂ.ಬಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕಾಂತರಾಜು, ಪಂಚಾಯತ್‌ ರಾಜ್‌ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದಯಾನಂದ್, ತುಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಟರಾಜ್‌, ತಾಂತ್ರಿಕ ಸಂಯೋಜಕರಾದ ಮಧು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...