ಚಿಕ್ಕನಾಯಕನಹಳ್ಳಿ | ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು : ಗ್ರಾಮಸ್ಥರಿಂದ ಪ್ರತಿಭಟನೆ

Date:

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಯಳನಾಡು ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯೊಳಗೇ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು.ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ತುಮಕೂರು ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸಂಜೆ 5 ಗಂಟೆಗೆ ಆರು ಮಂದಿಯನ್ನು ಕರೆತರಲಾಗಿತ್ತು. ರಾತ್ರಿ 8:30ಕ್ಕೆ ವಿಚಾರಣೆ ಮುಗಿಸಿ ಕಳುಹಿಸಿದ ಬಳಿಕ ಕಾಂತರಾಜು ಅವರು ಠಾಣೆಯಿಂದ ಹೊರಬಂದ ಮೇಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದ್ದು, ಮೃತರ ಕುಟುಂಬಸ್ಥರಿಂದ ದೂರು ಪಡೆಯುವ ಪ್ರಕ್ರಿಯೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.ಪೊಲೀಸರು ವಿಚಾರಣೆ ನಡೆಸುವ ವೇಳೆ ಕಾಂತರಾಜು ಅವರ ಮೇಲೆ ಹಲ್ಲೆ ಮಾಡಿದ್ದಾರೆ, ಇದರಿಂದ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂಬುದು ಮೃತನ ಗೆಳೆಯರು ಮತ್ತು ಗ್ರಾಮಸ್ಥರ ಗಂಭೀರ ಆರೋಪವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಂತರ್ಜಾತಿ ವಿವಾಹವಾಗಿರುವ ದಂಪತಿಯ ಕೊಲೆ ಯತ್ನ: ರಕ್ಷಣೆ ಕೋರಿ ಎಸ್‌ಪಿಗೆ ದೂರು

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಾತ್ರಿಕೆ ಹಾಲ್ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿರುವ...

ತುಮಕೂರು | ಚಿಕ್ಕನಾಯಕನಹಳ್ಳಿಯಲ್ಲಿ ಗ್ಯಾಂಗ್ ರೇಪ್; ಮೂವರು ಕಾಮುಕರ ಬಂಧನ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಯುವತಿಯೊಬ್ಬಳನ್ನು ಗ್ಯಾಂಗ್ ರೇಪ್ ಮಾಡಿರುವ ಆರೋಪದಲ್ಲಿ...

ಚಿಕ್ಕನಾಯಕನಹಳ್ಳಿ | ತಲ್ಲಣಗಳನ್ನು ನಿರುದ್ವಿಗ್ನತೆಯಲ್ಲಿ ದಾಖಲಿಸುವ ಬರಹಗಾರ, ಗುರುಪ್ರಸಾದ್ ; ಅಗ್ರಹಾರ ಕೃಷ್ಣಮೂರ್ತಿ

ತನ್ನ ಪರಂಪರೆಗಳಿಗೆ ಮತ್ತೆಮತ್ತೆ ಹಿಂದಿರುಗುವ ಬರಹಗಾರ, ಗುರುಪ್ರಸಾದ್ ; ಡಾ  ರವಿಕುಮಾರ್...