ಗುಬ್ಬಿ | ಮೇಯುತ್ತಿದ್ದ ಮೇಕೆಗಳ ಮೇಲೆ ಚಿರತೆ ದಾಳಿ : ಕೂದಲೆಳೆಯಲ್ಲಿ ಮಹಿಳೆ ಪಾರು

Date:

 ತೋಟದ ಸಾಲಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಹಠಾತ್ ದಾಳಿ ಮಾಡಿದ ಚಿರತೆ ಎರಡು ಮೇಕೆಗಳನ್ನು ಬಲಿ ತೆಗೆದುಕೊಂಡಿದೆ. ಮೇಕೆ ಕಾಯುತ್ತಿದ್ದ ಕುರಿಗಾಯಿ ಮಹಿಳೆ ಮೇಲೆರಗುವ ಮುನ್ನ ಸ್ಥಳದಿಂದ ಓಡಿಹೋಗಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಕಿಟ್ಟದಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ತಿಮ್ಮಕ್ಕ ಎಂಬ ಮಹಿಳೆ ತನ್ನ ಮೇಕೆ ಹಾಗೂ ಕುರಿಗಳನ್ನು ಮೇಯಿಸುವುದಕ್ಕಾಗಿ ತೋಟಕ್ಕೆ ಹೋದಾಗ ಹಾದ್ ಹಾಡುಹಗಲೇ ತೋಟದ ಅಂಚಿನ ಬೇಲಿ ಸಾಲಿನಿಂದ ಪ್ರತ್ಯಕ್ಷವಾದ ಚಿರತೆಯೊಂದು ಎರಡು ಮೇಕೆಯನ್ನು ಎಳೆದೊಯ್ದು ಅರೆಬರೆ ತಿಂದಿದೆ.

ಮಹಿಳೆಯು ತಕ್ಷಣ ಎಚ್ಚೆತ್ತು ಸ್ಥಳದಿಂದ ಓಡಿ ಹೋಗದಿದ್ದರೆ ಆಕೆಯ ಬಲಿ ಪಡೆಯುವ ಸಾಧ್ಯತೆ ಇತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಚಿರತೆಗಳ ಹಾವಳಿ ಕಿಟ್ಟದಕುಪ್ಪೆ ಭಾಗದಲ್ಲಿ ಮಿತಿಮೀರಿದ್ದು, ಈಗ ಗ್ರಾಮದೊಳಗೆ ಕಾಣಿಸಿಕೊಳ್ಳುತ್ತಿದೆ. ಕೂಡಲೇ ಅರಣ್ಯ ಇಲಾಖೆ ಚಿರತೆ ಹಾವಳಿಗೆ ಕಡಿವಾಣ ಹಾಕಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ತೋಟಕ್ಕೆ ತಗುಲಿದ ಬೆಂಕಿ : ತೆಂಗು, ಅಡಿಕೆ, ಬಾಳೆಗಿಡಗಳು ಭಸ್ಮ

ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿ ರಭಸಕ್ಕೆ ಪಕ್ಕದ ತೋಟಕ್ಕೆ ಹರಡಿ...

ಗುಬ್ಬಿ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

 ಮೀಸಲಾತಿ ಜಾರಿಗೆ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ...

ಗುಬ್ಬಿ | ಬೆಸ್ಕಾಂ ನಿಂದ ರೈತರ ಸಭೆ : ಸೂಕ್ತ ಪರಿಹಾರಕ್ಕೆ ರೈತ ಸಂಘ ಆಗ್ರಹ

 ಬೇಸಿಗೆ ಕಾಲದಲ್ಲಿ ವಿದ್ಯುತ್ ಕಡಿತ ರೈತರ ಕೃಷಿ ಚಟುವಟಿಕೆಗೆ ಸಾಕಷ್ಟು ಸಮಸ್ಯೆ...

ತುಮಕೂರು | ಪೌರಕಾರ್ಮಿಕ ಅಯ್ಯಪ್ಪನ ಮನೆ ಬೆಂಕಿಗೆ ಆಹುತಿ : ಪರಿಹಾರಕ್ಕೆ ಸಿಪಿಎಂ ಒತ್ತಾಯ

ತುಮಕೂರು ಮಹಾನಗರದಲ್ಲಿ ವಾಸವಾಗಿರುವ ಪೌರಕಾರ್ಮಿಕರಾದ ಅಯ್ಯಪ್ಪ ಅವರ ಮನೆಯಲ್ಲಿ ಸಂಭವಿಸಿದ ಅಗ್ನಿ...