ಗುಬ್ಬಿ | ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ ಸರಿಯಲ್ಲ : ಕಾಡಶೆಟ್ಟಿಹಳ್ಳಿ ಸತೀಶ್

Date:

 ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬೆಳೆಸಬೇಕಾದ ರಾಜ್ಯ ಸರ್ಕಾರ ಅಧಿಕಾರಶಾಹಿಗಳ ಜೊತೆ ಶಾಮೀಲಾಗಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಆಡಳಿತಶಾಹಿಗಳಿಗೆ ಅಧಿಕಾರ ನೀಡಲು ಮುಂದಾಗಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗುಬ್ಬಿ ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಕೊನೆಗೂ ಮುಂದೂಡಿರುವ ರಾಜ್ಯ ಸರ್ಕಾರ ಪಂಚಾಯತಿ ಕಾಯಿದೆ 8 ನೇ ಪ್ರಕರಣದ 2ಬಿ2 ಬಳಸಿ ಆಡಳಿತ ಅಧಿಕಾರಿಗಳ ನೇಮಕ ಮಾಡಿ ಆಡಳಿತಶಾಹಿಗಳಿಗೆ ಅಧಿಕಾರಿ ನೀಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಅದೇ 8 ನೇ ಪ್ರಕರಣದಲ್ಲಿನ ಉಪ ಪ್ರಕರಣ 1 ರಲ್ಲಿ ಜನಾಧಿಕಾರಕ್ಕೆ ಆದ್ಯತೆ ನೀಡಿ ಈಗಿರುವ ಚುನಾಯಿತ ಪ್ರತಿನಿಧಿಗಳ ಆಡಳಿತವನ್ನೇ ಮುಂದುವರೆಸಲು ಅವಕಾಶ ಇದ್ದರೂ ಕಾಯಿದೆ ದುರುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಈಗಿರುವ ಆಡಳಿತವನ್ನು ಮುಂದುವರಿಸಲು ಕಾಯ್ದೆಯಲ್ಲಿರುವ ಅವಕಾಶವನ್ನು ಕೈ ಬಿಟ್ಟು ಅಧಿಕಾರ ಶಾಹಿಗಳ ಪರ ಸರ್ಕಾರ ನಿಂತಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಉಳಿಸಲು ನಮ್ಮ ಮಹಾ ಒಕ್ಕೂಟ ಮುಂದಾಗಿದ್ದು ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಉಪಮುಖ್ಯಮಂತ್ರಿಗಳಿಗೆ , ಕಾನೂನು ಸಚಿವರು ಹಾಗೂ ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಿದ್ದು ಕಾಯ್ದೆಯಲ್ಲಿನ ಅವಕಾಶವನ್ನು ಬಳಸಿ ಮುಂದಿನ 6 ತಿಂಗಳು ಯಥಾಸ್ಥಿತಿ ಮುಂದುವರೆಯುವ ಜೊತೆಗೆ ಚುನಾವಣೆ ನಡೆಸಲು ಮುಂದಾಗಬೇಕು ಎಂದು ಮನವಿ ಮಾಡಿದ್ದೇವೆ. ಈ ಹಕ್ಕನ್ನು ಅಗ್ರಹಿಸಿ ಇದೇ ತಿಂಗಳ 27 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜನಾಧಿಕಾರ ಸಮಾವೇಶ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.

ಇನ್ನು ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಸದಸ್ಯರು ಸೇರಿದಂತೆ ಅಧ್ಯಕ್ಷರುಗಳು ಒಟ್ಟಾಗಿ ಸಮಾವೇಶದಲ್ಲಿ ಪಾಲ್ಗೊಂಡು ಒಗಟ್ಟು ಪ್ರದರ್ಶಿಸಿ ಪ್ರಜಾಪ್ರಭುತ್ವದ ಉಳಿವಿಗಾಗಿ ಕೈ ಜೋಡಿಸಬೇಕಾಗಿದೆ. ನಮ್ಮ ಹಕ್ಕು ಉಳಿಸಿಕೊಳ್ಳಲು ಸರ್ಕಾರ ಗಮನ ಸೆಳೆಯುವ ಹೋರಾಟ ದಿಟ್ಟತನವಾಗಿ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...