ಗುಬ್ಬಿ | ಬೈಕ್ ನಿಲ್ಲಿಸಿದ್ದ ವಿಚಾರಕ್ಕೆ ಗಲಾಟೆ : ಆರು ಜನರ ತಲೆಗೆ ಗಂಭೀರ ಪೆಟ್ಟು

Date:

  ರಸ್ತೆ ಬದಿ ಬೈಕ್ ನಿಲ್ಲಿಸಿದ್ದ ವಿಚಾರವನ್ನು ಮುಂದಿಟ್ಟು ಒಂದೇ ಕುಟುಂಬದ ಆರು ಮಂದಿಯ ಮೇಲೆ ಮತ್ತೊಂದು ಕುಟುಂಬದ ಎಂಟು ಮಂದಿ ಏಕಾಏಕಿ ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್ ಮಾಡಿ ಆರು ಜನರ ತಲೆಗೆ ಹೊಡೆದು ರಕ್ತದ ಕೋಡಿ ಹರಿದ ಭೀಕರ ಘಟನೆ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮದಲ್ಲಿ ನಡೆದಿದೆ.

ಅಮ್ಮನಘಟ್ಟ ಗ್ರಾಮದ ಮಾರುತಿನಗರ ಬಡಾವಣೆಯ ನಿವಾಸಿಗಳಾದ ಹನುಮಂತಯ್ಯ, ದಿಲೀಪ್, ಜಯಮ್ಮ, ವೆಂಕಟೇಶ್, ಜಯಮ್ಮ ಮತ್ತು ಪದ್ಮ ಈ ಆರು ಮಂದಿ ತೀವ್ರ ರಕ್ತಸ್ರಾವದಿಂದ ಗುಬ್ಬಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ದಿಲೀಪ್ ಅವರ ಕೈ ಮೂಳೆ ಮುರಿತವಾಗಿದೆ. ಉಳಿದ ಐದು ಮಂದಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಜೆ ವೇಳೆ ದಿಲೀಪ್ ತನ್ನ ಬೈಕ್ ನಲ್ಲಿ ಗುಬ್ಬಿಯಿಂದ ಬಂದು ಮನೆ ಮುಂದೆ ನಿಲ್ಲಿಸಿದ್ದ ವಿಚಾರಕ್ಕೆ ಏಕಾಏಕಿ ಅಶ್ಲೀಲ ಪದಗಳಿಂದ ಬೈಗುಳ ಆರಂಭಿಸಿ ಸ್ಥಳದಲ್ಲಿದ್ದ ದೊಣ್ಣೆ, ಗಳಗಳು, ಗುದ್ದಲಿ ಹಿಡಿದು ಅಟ್ಟ್ಯಾಕ್ ಮಾಡಿದ್ದರು. ಬೈಕ್ ತೆಗೆಯುವಷ್ಟರಲ್ಲಿ ಜಗಳ ತೆಗೆದು ಮಾರಣಾಂತಿಕವಾಗಿ ಹೊಡೆದಿದ್ದಾರೆ. ಹಳೇ ವೈಷಮ್ಯ ಹಿನ್ನಲೆ ಪೂರ್ವನಿಯೋಜಿತವಾಗಿ ಸಜ್ಜಾಗಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಗಾಯಾಳು ದಿಲೀಪ್ ನೇರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಗುಬ್ಬಿ ಪೊಲೀಸರು ಭೇಟಿ ನೀಡಿ ಮುಂದಿನ ತನಿಖೆ ನಡೆಸಿದ್ದಾರೆ. ಹಲ್ಲೆ ಮಾಡಿದ ಯುವರಾಜ್, ಸಂಜಯ್, ಮಂಜಮ್ಮ, ರವೀಶ್, ಹೇಮಂತ್, ಶಾಂತರಾಜು, ಲಕ್ಷ್ಮಮ್ಮ, ಮೂಡಲಗಿರಿ ಇವರ ಮೇಲೆ ಪ್ರಕರಣ ದಾಖಲಿಸಲು ಮುಂದಿನ ಕ್ರಮ ಕೈಗೊಂಡರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...