ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ ಬಾರಿ ಎಲ್ಲಾ ಕ್ಷೇತ್ರಕ್ಕೂ ಸಂದಿವೆ. ಜನಮನ್ನಣೆಯ ಬಜೆಟ್ ದಾಖಲೆಯಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ್ದಾರೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನಡೆದ 3 ಕೋಟಿ ರೂ ವೆಚ್ಚದ ವಿವಿಧ ಗ್ರಾಮದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ಶಾಸಕರು ಬಜೆಟ್ ಗಾಗಿ ಕ್ರಿಯಾಯೋಜನೆ ಸಿದ್ಧಪಡಿಸಿ ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಟ್ಟಿದ್ದೆವು. ಈ ವರ್ಷ ಮನ್ನಣೆಗೆ ಬಂದಿಲ್ಲ. ಮುಂದಿನ ವರ್ಷದ ಬಜೆಟ್ ನಲ್ಲಿ ಎಲ್ಲಾ ಯೋಜನೆಗೆ ಅಸ್ತು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗುಬ್ಬಿ ತಾಲ್ಲೂಕಿಗೆ ಜವಳಿ ಪಾರ್ಕ್ ನಿರ್ಮಾಣಕ್ಕೆ 20 ಎಕರೆ ಭೂಮಿಯನ್ನು ಹೊಸಹಳ್ಳಿ ಬಳಿ ಗುರುತಿಸಲಾಗಿತ್ತು. ಕಿರಿದಾದ ರಸ್ತೆ ಹಿನ್ನಲೆ ಈ ಬಾರಿ ಬಜೆಟ್ ನಲ್ಲಿ ಗಣನೆಗೆ ಸಿಕ್ಕಿಲ್ಲ. ರಸ್ತೆ ಅಗಲೀಕರಣ ಮಾಡಲು ಈಗಾಗಲೇ ಚರ್ಚಿಸಿದ್ದೇನೆ. ಮುಂದಿನ ಬಜೆಟ್ ನಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಅನುದಾನ ಬರಲಿದೆ. ಕಳೆದ ಬಜೆಟ್ ನಲ್ಲಿ ಬಂದ ಹಣದಲ್ಲಿ ಮಠದಹಳ್ಳ ಕೆರೆ ಕೆಲಸ ಹಾಗೂ ಹಾಗಲವಾಡಿ ಕೆರೆ ಮುಕ್ತಾಯ ಹಂತದಲ್ಲಿದೆ. ಬಿಕ್ಕೆಗುಡ್ಡ ಯೋಜನೆ ಸಹ ಚುರುಕಿನಿಂದ ಸಾಗಿದೆ ಎಂದ ಅವರು ವಸತಿ ಯೋಜನೆ ಕಳೆದ 7 ವರ್ಷದಿಂದಲೂ ಮನೆ ಮಂಜೂರು ಆಗಿಲ್ಲ. ಇದರ ಅವಶ್ಯಕತೆ ಇತ್ತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಬ್ಬಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಹೇರೂರು ಕೆರೆಯ ಪಕ್ಕದಲ್ಲಿ ದೊಡ್ಡ ಚರಂಡಿ ನಿರ್ಮಾಣಕ್ಕೆ 3 ಕೋಟಿ ಹಣ ಮಂಜೂರು ಆಗಿದೆ. ಕೆಲಸ ನಡೆಯಬೇಕಿದೆ. ಸ್ಥಳೀಯ ರೈತರು ಒಂದೆರೆಡು ಅಡಿಗಳ ಜಾಗ ಬಿಡುತ್ತಿಲ್ಲ. ಚರಂಡಿ ನಿರ್ಮಾಣಕ್ಕೆ ಕೆರೆ ಪಕ್ಕದ ರೈತರು ಸಹಕಾರ ನೀಡಬೇಕು. ಶೀಘ್ರದಲ್ಲಿ ಈ ಕಾಮಗಾರಿ ಮಾಡುತ್ತೇವೆ ಎಂದ ಅವರು ಪಟ್ಟಣದಲ್ಲಿ ಹಾದು ಹೋಗಿರುವ ಹೆದ್ದಾರಿಗೆ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆದಿದೆ. ಇದಕ್ಕೆ 24 ಕೋಟಿ ಹಣ ಬಂದಿದೆ. ಜೊತೆಗೆ ವಿದ್ಯುತ್ ಕಂಬ ಸ್ಥಳಾಂತರಕ್ಕೆ 2 ಕೋಟಿ ಹಾಗೂ ಚರಂಡಿ ನಿರ್ಮಾಣಕ್ಕೆ 6 ಕೋಟಿ ಬಂದಿದೆ. ರಸ್ತೆ ನಂತರ ಚರಂಡಿ ನಿರ್ಮಾಣ ಆಗಲಿದೆ ಎಂದು ಹೇಳಿದರು.

ಇರಾನ್ ಇಸ್ರೇಲ್ ಯುದ್ಧ ಮುಂದುವರೆದಲ್ಲಿ ಎಲ್ಲಾ ದೇಶಕ್ಕೂ ಆರ್ಥಿಕ ಹೊರೆ ಹೆಚ್ಚಾಗಲಿದೆ. ನಮ್ಮ ದೇಶಕ್ಕೂ ಅದರ ಬಿಸಿ ಈಗಾಗಲೇ ಅಡುಗೆ ಅನಿಲ ಮೂಲಕ ಕಾಣುತ್ತಿದೆ. ಕಚ್ಚಾ ತೈಲ ಪೂರೈಕೆಗೆ ಹೊಡೆತ ಬೀಳಲಿದೆ. ಜೊತೆಗೆ ಅರಬ್ ದೇಶದಲ್ಲಿರುವ ಶೇ.60 ರಷ್ಟು ಮಂದಿ ಬೇರೆ ದೇಶದವರು ಆಗಿದ್ದಾರೆ. ಹಾಗಾಗಿ ಎಲ್ಲಾ ದೇಶಕ್ಕೂ ತೊಂದರೆ ಕಟ್ಟಿಟ್ಟಬುತ್ತಿ ಎಂದ ಅವರು ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಎಸ್.ಕೊಡಗೀಹಳ್ಳಿ ಪಾಳ್ಯದಲ್ಲಿ 90 ಲಕ್ಷ ಹಾಗೂ 45 ಲಕ್ಷ, ಎಸ್.ಕೊಡಗಿಹಳ್ಳಿ ಗ್ರಾಮಕ್ಕೆ 50 ಲಕ್ಷ, ಹೊಸಪಾಳ್ಯ ಗ್ರಾಮಕ್ಕೆ 50 ಲಕ್ಷ ಮತ್ತು ಚಿಕ್ಕೋನಹಳ್ಳಿ ಗ್ರಾಮದಲ್ಲಿ 25 ಲಕ್ಷ ಸಿಸಿ ರಸ್ತೆಗೆ ಚಾಲನೆ ನೀಡಲಾಗಿದೆ. ಇನ್ನೂ ಬಾಕಿ ಇರುವ ನೂರು ಕೋಟಿ ಕಾಮಗಾರಿಗಳಿಗೆ ಪೂಜೆ ಶೀಘ್ರದಲ್ಲಿ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ರೈತ ಸಂಘದ ಗೋವಿಂದರಾಜು, ವೆಂಕಟೇಗೌಡ, ಮುಖಂಡರಾದ ಉಂಡೆ ರಾಮಣ್ಣ, ಗಿರೀಶ್, ರಾಮು, ಸೋಮಶೇಖರ್, ರಾಜಣ್ಣ, ದಿವಾಕರ್, ಗ್ರಾಮೀಣಾಭಿವೃದ್ಧಿ ಇಲಾಖೆಯ ಎಇಇ ಚಂದ್ರಶೇಖರ್, ಗುತ್ತಿಗೆದಾರರಾದ ಕೃಷ್ಣೇಗೌಡ, ರವಿ, ಸಂದೀಪ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...