ಗುಬ್ಬಿ | ಒಂದೇ ಗ್ರಾಮದಲ್ಲಿ ಹಲವು ಬಾರಿ ಕೇಬಲ್ ಕಳ್ಳತನ

Date:

 ತೋಟಗಳಲ್ಲಿನ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು ಒಂದು ವರ್ಷದಲ್ಲಿ ಮೂರ್ನಾಲ್ಕು ಬಾರಿ ಕದ್ದು ಪರಾರಿಯಾಗಿದ್ದ ಕಳ್ಳರ ಗುಂಪು ಮತ್ತೆ ಅಂತಹದ್ದೇ ಕೃತ್ಯಕ್ಕೆ ಮುಂದಾಗಿ ಕಳೆದ ಗುರುವಾರ ರಾತ್ರಿ ಮತ್ತೊಮ್ಮೆ ತೋಟಗಳ 20 ಕಡೆಗಳಲ್ಲಿ ಪಂಪ್ ಸೆಟ್ ಕೇಬಲ್ ವೈರ್ ಗಳನ್ನು ಕಟ್ ಮಾಡಿ ಆತಂಕ ಮೂಡಿಸಿದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎನ್.ನಂದಿಹಳ್ಳಿ ಗ್ರಾಮದಲ್ಲಿ ನಡೆದಿರುವ ಈ ಘಟನೆ ಸ್ಥಳೀಯ ರೈತರಲ್ಲಿ ಅಚ್ಚರಿ ಹಾಗೂ ಆತಂಕ ಒಟ್ಟಿಗೆ ಸೃಷ್ಟಿಯಾಗಿದೆ. ಒಮ್ಮೆ ಕಳ್ಳತನ ಮಾಡಿದ ಕಳ್ಳರು ಅಷ್ಟಕ್ಕೇ ಸುಮ್ಮನಾಗದೆ ರುಚಿ ಕಂಡವರಂತೆ ಮತ್ತೊಮ್ಮೆ ಅದೇ ತೋಟಗಳ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಿ ಪರಾರಿಯಾಗಿರುವುದು ಗಾಬರಿ ಉಂಟು ಮಾಡಿದೆ.

ಒಂದು ವರ್ಷದ ಅವಧಿಯಲ್ಲಿ ಅನೇಕ ಬಾರಿ ಕೇಬಲ್ ವೈರ್ ಕಟ್ ಮಾಡಿ ಕಳ್ಳತನ ಮಾಡಿದ್ದರ ಬಗ್ಗೆ ಗುಬ್ಬಿ ಠಾಣೆಗೆ ದೂರು ನೀಡಿದ್ದರೂ ಕೂಡ ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಕಳ್ಳರ ಕಾಟಕ್ಕೆ ಬೇಸತ್ತಿರುವ ನಾವುಗಳೇ ಖುದ್ದು ಕಾವಲು ಕಾಯುತ್ತೇವೆ ಎಂದು ಎನ್.ನಂದಿಹಳ್ಳಿ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...