ಗುಬ್ಬಿ | ಸಮಾನತೆ ಸ್ವಾಭಿಮಾನದ ಪ್ರತೀಕಾರ ಭೀಮಾ ಕೋರೆಂಗವ್ ಯುದ್ಧ : ಬಸವರಾಜ್

Date:

 ಎರಡು ಶತಮಾನದ ಹಿಂದೆ ನಡೆದ ಕೊರೆಂಗವ್ ಯುದ್ಧ ಕೇವಲ ಸೈನಿಕರ ವಿಜಯದ ಸಂಕೇತವಾಗಿರಲಿಲ್ಲ. ಶತಮಾನದ ಅನ್ಯಾಯ ಮತ್ತು ಅವಮಾನಗಳ ವಿರುದ್ಧ ಹೋರಾಡಿದ ಸಮಾನತೆ ಮತ್ತು ಸ್ವಾಭಿಮಾನದ ಪ್ರತಿಕಾರ ಎಂದು ಡಾಕ್ಟರ್ ಬಾಬು ಜಗಜೀವನ್ ರಾಮ್ ಆದಿ ಜಾಂಬವ ಅಭಿವೃದ್ಧಿ ಸೇವಾ ಟ್ರಸ್ಟ್ ಅಧ್ಯಕ್ಷ ಗುಬ್ಬಿ ಬಸವರಾಜ್ ತಿಳಿಸಿದರು. 

ಗುಬ್ಬಿ ತಾಲೂಕಿನ ಚೇಳೂರು ಹೋಬಳಿ ಶೇಷೇನಹಳ್ಳಿ ಗ್ರಾಮದಲ್ಲಿ ನಡೆದ 208 ನೇ ಭೀಮ ಕೊರೆಂಗವ್ ವಿಜಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿ 1818 ಜನವರಿ 1 ರಂದು ನಡೆದ ಕೊರೆಂಗವ್ ಯುದ್ಧದ ಪರಿಣಾಮ ಎಂದಿಗೂ ಚಾಲ್ತಿಯಲ್ಲಿರಬೇಕು ಎಂದರು.

ತಾಲೂಕಿನ ಗಡಿ ಭಾಗದಲ್ಲಿ ಕಾರ್ಯಕ್ರಮ ಮಾಡಬೇಕೆಂಬ ಒತ್ತಾಸೆಯಿಂದ ಆಯೋಜನೆ ಮಾಡಿದ ಪರಿಣಾಮ ನೂರಾರು ಮಹಿಳೆಯರು ಆಗಮಿಸಿದ್ದೀರಿ. ಅದೇ ರೀತಿ ಹೆಚ್ಚು ಸ್ವಸಹಾಯ ಸಂಘಗಳು ರಚನೆಯಾಗಿ ಆರ್ಥಿಕ ಸ್ವಾವಲಂಬನೆ ಎಲ್ಲರಿಗೂ ಸಿಕ್ಕು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲಿ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾಕ್ಟರ್ ಬಾಬು ಜಗಜೀವನ್ ರಾಮ್ ಆದಿ ಜಾಂಬವ ಅಭಿವೃದ್ಧಿ ಸೇವಾ ಟ್ರಸ್ಟ್ ಉಪಾಧ್ಯಕ್ಷ ಹೊಸಕೆರೆ ಬಸವರಾಜ್ ಮಾತನಾಡಿ ಸಮುದಾಯದ ಜನರು ಅಂಬೇಡ್ಕರ್ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳ ಭವಿಷ್ಯ ರೂಪಿಸಲು ಉನ್ನತ ವ್ಯಾಸಂಗಕ್ಕೆ ಒತ್ತು ನೀಡಬೇಕು. ಈ ಹಿಂದೆ ಅನುಭವಿಸಿದ್ದ ಕಷ್ಟಕಾರ್ಪಣ್ಯ ದೂರ ಮಾಡಲು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಟ್ರಸ್ಟ್ ಮಹಿಳಾ ಪ್ರತಿನಿಧಿ ಶಿವಲಿಂಗಮ್ಮ ಮಾತನಾಡಿ ಜನಾಂಗದ ಅಭಿವೃದ್ಧಿಗೆ ಪೂರಕವಾಗಿ ಸ್ವಸಹಾಯ ಸಂಘಗಳು ರಚನೆಯಾಗಬೇಕು. ಪ್ರತಿ ತಾಲೂಕಿನಲ್ಲೂ ಒಕ್ಕೂಟ ರಚನೆಯಾಗಬೇಕು. ಆರ್ಥಿಕ ಸ್ಥಿತಿ ಉತ್ತಮ ಪಡಿಸಿಕೊಳ್ಳುವ ಜೊತೆಗೆ ನಮ್ಮ ಸಮುದಾಯ ಒಗ್ಗೂಡಿ ಮುಂದೆ ಸಾಗುವ ಕೆಲಸ ನಿರಂತರ ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯೆ ರೂಪ, ಪದಾಧಿಕಾರಿಗಳಾದ ಶಿವರಾಜು, ಮುದ್ದಣ್ಣ, ಗೋವಿಂದಪ್ಪ, ಜಯರಾಮಯ್ಯ, ಗಂಗಣ್ಣ, ರಂಗಸ್ವಾಮಯ್ಯ, ಪವಿತ್ರ, ಭಾಗ್ಯಮ್ಮ, ರೇಖಾ, ಸೇರಿದಂತೆ ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...