ಗುಬ್ಬಿ | ಜೀವನಕ್ಕೆ ಮಾರಕವಾದ ಅತಿಯಾದ ಮೊಬೈಲ್ ಬಳಕೆ : ಕೆ.ಶೋಭಾ

Date:

 ಇತ್ತೀಚಿಗೆ ವಿದ್ಯಾರ್ಥಿಗಳು ಹೆಚ್ಚು ಮೊಬೈಲ್ ಬಳಕೆಯಿಂದ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್ ಚಟ ಮಾರಕ ಎಂಬುದು ಹೇಳಬೇಕಾದವರು ಸಹ ಮೊಬೈಲ್ ಗೆ ಮಾರು ಹೋಗಿದ್ದಾರೆ ಎಂದು ಕಾನೂನು ಸೇವಾ ಪ್ರಾಧಿಕಾರದ ಸರಕಾರಿ ಅಭಿಯೋಜಕಿ ಕೆ.ಶೋಭಾ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಕೆ.ಜಿ.ಟೆಂಪಲ್ ನಾಗಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರಕಾರಿ ಅಭಿಯೋಜಕರ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸೈಬರ್ ಕೈಂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಸಾಕಷ್ಟು ದೊಡ್ಡ ಮಟ್ಟದಲ್ಲಿ ಎಲ್ಲೆಡೆ ಹಬ್ಬುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

 ಸೈಬರ್ ವಂಚಕರ ಆಮಿಷಕ್ಕೆ ಒಳಗಾಗಿ ಮೊಬೈಲ್ ಬಳಕೆದಾರರು ಮೋಸ ಹೋಗುತ್ತಿದ್ದಾರೆ. ಅದರೊಂದಿಗೆ ತಮ್ಮ ಜೀವನದಲ್ಲಿ ಹಲವಾರು ಸಮಸ್ಯೆಗಳಿಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಅದರಿಂದ ಕಾನೂನು ತೊಡಕುಗಳಿಗೆ ಹಾಗೂ ಮುಂದಿನ ಪೀಳಿಗೆಗೆ ದೊಡ್ಡ ಹೊಡೆತ ಬೀಳುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲರ ಸಂಘದ ಉಪಾಧ್ಯಕ್ಷ ಸಿ.ಕೆ.ರವೀಂದ್ರ ಮಾತನಾಡಿ, ಓದಿನ ಜತೆಯಲ್ಲಿ ಸಮಾಜದ ಆಗು ಹೋಗುಗಳ ಬಗ್ಗೆ ಮಾಹಿತಿ ಸಹ ಪಡೆಯುವಂತಹ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಾಸ್ತವ ಸತ್ಯ ಅರಿಯಬೇಕು. ಪೋಷಕರು ಅವಿದ್ಯಾವಂತರಾಗಿದ್ದಲ್ಲಿ ನೀವು ಸಮಾಜಕ್ಕೆ ದಾರಿಯಾಗಬೇಕಿದೆ. ಓದುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಮೊಬೈಲ್ ಬಳಸದೆ, ಚೆನ್ನಾಗಿ ಓದಿ ವಿದ್ಯಾವಂತರಾಗಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ವಸಂತ ಕುಮಾರಿ, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ರಂಗಸ್ವಾಮಯ್ಯ, ಪೊಲೀಸ್ ಇಲಾಖೆಯ ಗಂಗರಾಜು, ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...