ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

Date:

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ನಡೆದ ಬೆಳ್ಳಿ ಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಚಂದ್ರ ಗ್ರಹಣ ನಂತರ ರಾತ್ರಿ 7 ಗಂಟೆಗೆ ವಿಶೇಷ ಪೂಜೆ ನಡೆಸಿ ನಂತರ ಸ್ವಾಮಿ ಅವರಿಗೆ ಹಣ್ಣಿನ ಅಲಂಕಾರ ಮಾಡಲಾಯಿತು. ಸಾವಿರಾರು ಭಕ್ತರ ಕಣ್ಮನ ಸೆಳೆದ ಹಣ್ಣಿನ ಅಲಂಕಾರಕ್ಕೆ ಜೊತೆಯಾಗಿ ಮೆರೆಗು ನೀಡಿದ ಬೆಳ್ಳಿ ಪಲ್ಲಕ್ಕಿ ಉತ್ಸವ ದೇವಾಲಯ ಆವರಣದಲ್ಲಿ ಆಯೋಜಿಸಲಾಗಿತ್ತು.

ಬೆಳ್ಳಿ ಪಲ್ಲಕ್ಕಿಗೆ ಹೂವು ಹಾಗೂ ವಿದ್ಯುದ್ದೀಪಳಿಂದ ಅಲಂಕಾರ ಮಾಡಲಾಗಿತ್ತು. ರಾತ್ರಿ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂಡಿಸಿ ಇಡೀ ರಾತ್ರಿ ಉತ್ಸವ ನಡೆಸಲಾಯಿತು. ಉತ್ಸವದ ಅಲಂಕಾರ ಕಣ್ಣು ತುಂಬಿಸಿಕೊಂಡ ಸಾವಿರಾರು ಭಕ್ತರು ಜಾತ್ರೆಯ ಸಂಭ್ರಮವನ್ನು ಸವಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವಾಲಯ ಸೇರಿದಂತೆ ಸುತ್ತಲಿನ ಆವರಣ ದೀಪಾಲಂಕಾರ ಎಲ್ಲರನ್ನೂ ಸೆಳೆದಿತ್ತು. ಮಕ್ಕಳ ಆಟಿಕೆ, ವಿವಿಧ ತಿಂಡಿ ತಿನಿಸು, ಸ್ಥಳೀಯ ಕಲಾವಿದರಿಂದ ನಾಟಕ ಪ್ರದರ್ಶನ ಜೊತೆಗೆ ಯಳವಯ್ಯ ತೋಟದ ಯುವಕರು ಆಯೋಜಿಸಿದ್ದ ಗುಬ್ಬಿ ಉತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಭಕ್ತರು ಬೆಳ್ಳಿ ಪಲ್ಲಕ್ಕಿ ಉತ್ಸವ ಹಾಗೂ ಜಾತ್ರೆಯ ವೈಭವ ಕಂಡು ಪುಳುಕಿತರಾದರು. ಇಡೀ ರಾತ್ರಿ ನಡೆಯುವ ಉತ್ಸವಕ್ಕೆ ಬಂದ ಭಕ್ತರಿಗೆ ದಾಸೋಹ ವ್ಯವಸ್ಥೆ ಅಲ್ಲಿನ ದಾಸೋಹ ಸಮಿತಿ ಸ್ವಯಂ ಸೇವಕರನ್ನು ಬಳಸಿ ಆಯೋಜಿಸಿದ್ದರು.

ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಎಲ್ಲಾ ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಹದಿನೆಂಟು ಕೋಮಿನ ಮುಖಂಡರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಭಕ್ತರು ನೆರೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...