ಗುಬ್ಬಿ | ಎಸ್ಸಿ, ಎಸ್ಟಿ ಹೆಚ್ಚಿನ ಮೀಸಲಾತಿಗೆ ಆಗ್ರಹಿಸಿ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ

Date:

ರಾಜ್ಯದ ಎಸ್ಸಿ ಎಸ್ಟಿ ಸಮುದಾಯದ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುಬ್ಬಿ ತಾಲ್ಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬೇಡಿಕೆ ಪತ್ರವನ್ನು ತಾಲ್ಲೂಕು ಆಡಳಿತ ಮೂಲಕ ಸಲ್ಲಿಸಿದರು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ತಲುಪಿದ ವಾಲ್ಮೀಕಿ ನಾಯಕ ಸಮಾಜದ ಬಂಧುಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 2022 ರಲ್ಲಿ ಎಸ್ಸಿ ಜನಾಂಗ ಶೇಕಡಾ 15 ರಿಂದ 17 ಕ್ಕೆ ಏರಿಕೆ ಮಾಡಿದ್ದು, ಎಸ್ಟಿ ಜನಾಂಗಕ್ಕೆ ಶೇಕಡಾ 3 ರಿಂದ 7 ಕ್ಕೆ ಹೆಚ್ಚಳ ಮಾಡಿದ್ದಾರೆ. ಆದರೆ ಎರಡೂ ಸರ್ಕಾರಗಳು ವಿಳಂಬ ನೀತಿ ಅನುಸರಿಸುತ್ತಿದೆ. ಸಂವಿಧಾನದ 9 ನೇ ಅನುಸೂಚಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಮುಖಂಡ ರಾಮಚಂದ್ರಪ್ಪ ಮಾತನಾಡಿ ಕಳೆದ 70 ವರ್ಷದಿಂದಲೂ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇದ್ದರೂ ಈಗ ಹೆಚ್ಚಳ ಮಾಡಿ ಮೂಗಿಗೆ ತುಪ್ಪ ಸವರಿದಂತೆ ಸರ್ಕಾರಗಳು ನಿರ್ಲಕ್ಷ್ಯ ತೋರಿದೆ. 57 ಸಾವಿರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮುಂದಾಗಿದೆ. ಹಳೆಯ ಮೀಸಲಾತಿ ಶೇಕಡಾ 3 ರಂತೆ 1600 ಹುದ್ದೆ ಮಾತ್ರ ದೊರೆಯಲಿದೆ. ಹೆಚ್ಚುವರಿ ಶೇಕಡಾ 7 ರಂತೆ ಭರ್ತಿ ಮಾಡಿದರೆ ಎಸ್ಟಿ ಜನಾಂಗಕ್ಕೆ 3 ಸಾವಿರಕ್ಕೂ ಅಧಿಕ ಹುದ್ದೆ ಸಿಗಲಿದೆ ಎಂದರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಲ್ಮೀಕಿ ನಾಯಕ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಸೌಭಾಗ್ಯಮ್ಮ ಮಾತನಾಡಿ ಎಸ್ ಸಿಪಿ ಹಾಗೂ ಟಿಎಸ್ ಯೋಜನೆಯಲ್ಲಿ ಮೀಸಲಿದ್ದ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗುತ್ತಿದೆ. ಸರ್ಕಾರ ನಮ್ಮ ಅಭಿವೃದ್ದಿಯ ಉದ್ದೇಶದ ಹಣ ನಮ್ಮಗಳ ಉದ್ದಾರಕ್ಕೆ ಮಾತ್ರ ಬಳಕೆಯಾಗಬೇಕು. ಜೊತೆಗೆ ಎಸ್ಸಿ ಎಸ್ಟಿ ಜಾತಿಗಳಿಗೆ ಶೇಕಡಾ 56 ರಷ್ಟು ಮೀಸಲಾತಿ ಪ್ರಮಾಣ ಹೆಚ್ಚುವವರೆಗೆ ನೇಮಕಾತಿ ಪ್ರಕ್ರಿಯೆ ಮಾಡಬಾರದು ಎಂದು ಒತ್ತಾಯಿಸಿದರು.

ವಾಲ್ಮೀಕಿ ನಾಯಕ ಸಮಾಜದ ಮುಖಂಡ ಜಿ.ಎಲ್.ರಂಗನಾಥ್ ಮಾತನಾಡಿ ರಾಜ್ಯ ಸರ್ಕಾರ 2022 ರಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಈಗ ಜಾರಿಗೆ ತರಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಸರ್ಕಾರಿ ಹುದ್ದೆ ಭರ್ತಿಗೆ ಮುಂದಾದ ಈ ವೇಳೆ ನಮ್ಮ ಮೀಸಲಾತಿ ಹಕ್ಕು ನಾವುಗಳು ಪ್ರತಿಪಾದಿಸಬೇಕಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಸ್ಸಿ ಎಸ್ಟಿ ಸಮಾಜದ ಬಗ್ಗೆ ಕಾಳಜಿ ವಹಿಸಿ ನಮ್ಮ ಹಕ್ಕೊತ್ತಾಯ ಈಡೇರಿಸಬೇಕು. ತಾಲ್ಲೂಕು ಆಡಳಿತ ಮೂಲಕ ಎರಡೂ ಸರ್ಕಾರಗಳಿಗೆ ಬೇಡಿಕೆ ಪತ್ರವನ್ನು ನೀಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಪಪಂ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಗೌರವಾಧ್ಯಕ್ಷ ನರಸಿಂಹಮೂರ್ತಿ, ಅಧ್ಯಕ್ಷ ಅಡವೀಶಯ್ಯ, ಮುಖಂಡರಾದ ಲಕ್ಷ್ಮೀರಂಗಯ್ಯ, ರಾಘವೇಂದ್ರ, ನಾಗರಾಜು, ಲಕ್ಷ್ಮಣಪ್ಪ, ರಮೇಶ್, ಹೊಸಹಳ್ಳಿ ರಂಗನಾಥ್, ರವೀಶ್, ಹೇರೂರು ನಾಗಣ್ಣ, ರಾಧಮಣಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...