ಗುಬ್ಬಿ | ಮೆದುಳು ಕ್ಯಾನ್ಸರ್ ಪೀಡಿತ ಮಗುವಿನ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ ಶಾಸಕ ಶ್ರೀನಿವಾಸ್

Date:

ಗುಬ್ಬಿ ತಾಲ್ಲೂಕಿನ ಜಿ. ಹರಿವೇಸಂದ್ರ ಗ್ರಾಮದಲ್ಲಿ ಮೆದುಳು ಕ್ಯಾನ್ಸರ್ ಗೆ ತುತ್ತಾದ ಯೋಗಿತಾ ಎಂಬ ಬಾಲಕಿ ಮನೆಗೆ ಭೇಟಿ ನೀಡಿದ ಶಾಸಕ ಎಸ್.ಆರ್.ಶ್ರೀನಿವಾಸ್ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಅನುದಾನ ಕೊಡಿಸುವ ಜೊತೆಗೆ ಆರೋಗ್ಯ ಸಚಿವರ ಬಳಿ ಮಾತನಾಡಿ ಚಿಕಿತ್ಸೆಗೆ ಅನುಕೂಲ ಮಾಡುವ ಭರವಸೆ ನೀಡಿದರು.

ಗುಬ್ಬಿ ಪಟ್ಟಣ ಸಮೀಪದ ಜಿ.ಹರಿವೇಸಂದ್ರ ಗ್ರಾಮದ ಮಂಜುನಾಥ್ ಎಂಬುವರ ಮಗಳು ಹತ್ತು ವರ್ಷದ ಯೋಗಿತಾ ಹಾಗೂ ಪೋಷಕರನ್ನು ಭೇಟಿ ನೀಡಿದ ಗುಬ್ಬಿ ಶಾಸಕ ಶಾಸಕರು ಮಗುವಿನ ಆರೋಗ್ಯ ವಿಚಾರಿಸಿ ನಂತರ ಕುಟುಂಬಸ್ಥರನ್ನು ಸಂತೈಸಿದರು. ಮಗುವಿನ ದುಸ್ಥಿತಿ ಕಂಡು ಮರುಗಿ, ಭಾವುಕಾರಾಗಿ ಹೆದರಬೇಡ ನಾನಿದ್ದೇನೆ. ನಿನಗೆ ಒಳ್ಳೆಯ ಚಿಕಿತ್ಸೆ ಕೊಡಿಸುವ ಕೆಲಸ ಮಾಡುತ್ತೇನೆ ಎಂದು ಮಗುವಿಗೆ ಭರವಸೆ ನೀಡಿದರು.

ಕಳೆದ ಒಂದು ತಿಂಗಳ ಹಿಂದೆ ಕ್ಯಾನ್ಸರ್ ಪೀಡಿತ ಮಗುವಿನ ಪರಿಸ್ಥಿತಿ ಮತ್ತು ಆಕೆಯ ಆಧಾರ್ ಕಾರ್ಡ್ ಸಮಸ್ಯೆ ಸೇರಿದಂತೆ ರೇಷನ್ ಕಾರ್ಡ್ ನಲ್ಲಿ ಬಾಲಕಿಯ ಹೆಸರು ಇಲ್ಲದಿರುವ ಬಗ್ಗೆ ಮಾಧ್ಯಮದಲ್ಲಿ ಸುದ್ದಿ ಪ್ರಚಾರ ಮಾಡಲಾಗಿತ್ತು. ಸುದ್ದಿಗೆ ಸ್ಪಂದಿಸಿದ ಜಿಲ್ಲಾಡಳಿತ ಮಗುವಿನ ಮನೆಗೆ ಧಾವಿಸಿ ಎರಡೇ ದಿನದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಮೂಲಕ ಆಧಾರ್ ಮತ್ತು ರೇಷನ್ ಕಾರ್ಡ್ ವಿತರಣೆ ಮಾಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೆಲ್ಲವನ್ನು ಸರಿಪಡಿಸಿ ಜೊತೆಗೆ ಮಗುವಿನ ಸ್ಥಿತಿ ಕಂಡು ಸಹಾಯಕ್ಕೆ ಮುಂದಾದ ಗುಬ್ಬಿ ತಾಲ್ಲೂಕು ಆಡಳಿತ ಚಿಕಿತ್ಸೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾವೇ ಸ್ವತಃ 1 ಲಕ್ಷ ಹಣವನ್ನು ಸಹಾಯವಾಗಿ ನೀಡಿ ಮಾನವೀಯತೆ ಮೆರೆದರು. ಮಗುವಿನ 6 ತಿಂಗಳ ಮೆಡಿಸನ್ ವೆಚ್ಚ 9 ಲಕ್ಷ ಹಣದ ಅವಶ್ಯಕತೆ ತಿಳಿದುಕೊಂಡ ಶಾಸಕರು ಅಷ್ಟೊಂದು ಹಣ ಎಲ್ಲಿಂದ ಭರಿಸುತ್ತಿಯಾ ಎಂದು ಕೇಳಿ ಮರುಗಿದರು. ಸ್ಥಳದಲ್ಲಿಯೇ ತಹಸೀಲ್ದಾರ್ ಗೆ ಮಗುವಿನ ಸಹಾಯಕ್ಕೆ ಅಧಿಕಾರಿ ವರ್ಗ ತಮ್ಮ ಕೈಲಾದ ಸಹಾಯಕ್ಕೆ ಮುಂದಾಗುವಂತೆ ತಿಳಿಸಿದರು.

ಗುಬ್ಬಿ ತಾಲೂಕಿನ 34 ಗ್ರಾಮ ಪಂಚಾಯಿತಿಗಳಲ್ಲಿ ಇರುವ ಪರಿಶಿಷ್ಟರ ಅನುದಾನ ಬಳಕೆ ಮಾಡಿಕೊಂಡು ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಸೂಚಿಸಿದ ಅವರು ವಾರಕ್ಕೆ ಒಮ್ಮೆ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಲು ವಾಹನ ವ್ಯವಸ್ಥೆ ಮಾಡುವ ಜೊತೆಗೆ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರ ಜೊತೆ ಮಾತನಾಡಿ ಚಿಕಿತ್ಸೆಗೆ ಸ್ಪಂದಿಸುವ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಆರತಿ.ಬಿ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಚೇಳೂರು ಉಪ ತಹಶೀಲ್ದಾರ್ ಆರ್.ಜಿ.ನಾಗಭೂಷಣ್, ಕಂದಾಯ ನಿರೀಕ್ಷಕ ಗುರುಪ್ರಸಾದ್, ಕೆಎಂಎಫ್ ವ್ಯವಸ್ಥಾಪಕ ಗಿರೀಶ್ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...