ಗುಬ್ಬಿ | ರಾಷ್ಟ್ರೀಯ ಆರ್ಚರಿ ಕ್ರೀಡಾಕೂಟ : ನಿಟ್ಟೂರಿನ ಸಾಯಿ ಸುಮುಖ್ ಗೆ ರಜತ ಕಂಚು ಪದಕ

Date:

ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಎನ್.ಪಿ.ಸುಮುಖ್ ರಾಷ್ಟ್ರೀಯ ಆರ್ಚರಿ ಕ್ರೀಡಾಕೂಟದಲ್ಲಿ 19 ವರ್ಷದೊಳಗಿನ ವಿಭಾಗದಲ್ಲಿ ರಜತ ಪದಕ ಹಾಗೂ 17 ವರ್ಷದೊಳಗಿನ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ ಗುಬ್ಬಿ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.

ನಿಟ್ಟೂರಿನ ಮೈಸೂರು ರಸ್ತೆಯಲ್ಲಿನ ಬಾಲಾಜಿ ಪೈಂಟ್ಸ್ ಅಂಡ್ ಹಾರ್ಡವೇರ್ ಮಾಲೀಕರಾದ ಎನ್.ಆರ್.ಪ್ರಶಾಂತ್ ಹಾಗೂ ರೇವತಿ ದಂಪತಿಯ ಸುಪುತ್ರನಾದ ಎನ್.ಪಿ.ಸಾಯಿ ಸುಮುಖ್ ಈಚೆಗೆ ಮಹಾರಾಷ್ಟ್ರದ ಆಲಿಬಾಗ್ ನಗರದಲ್ಲಿ ನಡೆದ ರಾಷ್ಟ್ರೀಯ ಒಳಾಂಗಣ ಆರ್ಚರಿ (ಬಿಲ್ಲುಗಾರಿಕೆ) ಸ್ಪರ್ಧೆಯಲ್ಲಿ ರಜತ ಮತ್ತು ಕಂಚು ಪದಕ ಗೆದ್ದಿದ್ದು ಈ ಹಿಂದೆ ರಾಜ್ಯ ಮಟ್ಟದಲ್ಲಿ ಚಿನ್ನದ ಪದಕ ಹಾಗೂ ಪೂನಾದಲ್ಲಿ ನಡೆದ ಸಿಬಿಎಸ್ಸಿ ಬೋರ್ಡ್ ಕ್ರೀಡಾಕೂಟದಲ್ಲಿ ರಜತ ಪದಕ ಗಳಿಸಿದ್ದು ಹೆಮ್ಮೆ ತಂದಿದೆ ಎನ್ನುತ್ತಾರೆ ನಿಟ್ಟೂರಿನ ಗ್ರಾಮಸ್ಥರು.

ಪ್ರಸ್ತುತ ದಾವಣಗೆರೆ ಪಿಎಸ್ಎಸ್ಇಆರ್ ಬೋರ್ಡಿಂಗ್ ಸ್ಕೂಲ್ ನಲ್ಲಿ ಒಂಬತ್ತನೇ ತರಗತಿ ಓದುತ್ತಿರುವ ಸಾಯಿ ಸುಮುಖ್ 14 ನೇ ವಯಸ್ಸಿನಲ್ಲಿಯೇ ಆರ್ಚರಿ ಬಿಲ್ಲು ವಿದ್ಯೆಯಲ್ಲಿ ವಯಸ್ಸು ಮೀರಿದ ಸಾಧನೆ ತೋರಿದ್ದಾನೆ. ತರಬೇತುದಾರ ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನ್ಯಾಷನಲ್ ಪದಕ ಗಳಿಸಿದ್ದು ಹೆಮ್ಮೆ ತಂದಿದೆ. ದೇಶದ ನಾನಾ ಭಾಗಗಳಿಂದ ನೂರಾರು ಮಂದಿ ಸ್ಪರ್ಧಿಗಳ ಮಧ್ಯೆ ಎರಡನೇ ಹಾಗೂ ಮೂರನೇ ಸ್ಥಾನ ಗಳಿಸುವುದು ಸುಲಭವಲ್ಲ. ಕಳೆದೆರಡು ವರ್ಷದಲ್ಲಿ ಈ ಮಟ್ಟದ ಸಾಧನೆ ಮುಂದಿನ ಭವಿಷ್ಯ ರೂಪಿಸುತ್ತಿದೆ ಎಂದು ಸಾಯಿ ಸುಮುಖನ ತಂದೆ ಎನ್.ಆರ್.ಪ್ರಶಾಂತ್, ತಾಯಿ ರೇವತಿ ತಮ್ಮ ಸಂತೋಷ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...