ಗುಬ್ಬಿ | ಯುವನಿಧಿ, ಗ್ಯಾರಂಟಿ ಯೋಜನೆಯೇ ಗೆಲುವಿಗೆ ಸೋಪಾನ : ಶಶಿ ಹುಲಿಕುಂಟೆಮಠ್

Date:

 ಕಳೆದೆಲ್ಲಾ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಏನೇನು ಕೆಲಸ ಮಾಡಿದೆ ಎನ್ನುವುದು ಬುದ್ಧಿವಂತ ಮತದಾರರು ಗಮನಿಸಿದ್ದಾರೆ. ಕೆಲಸದ ಯಾವ ಸಾಕ್ಷಿಗುಡ್ಡೆ ಇಲ್ಲದ ಕಾರಣ ಪದವಿಗಾಗಿ ಅಲ್ಲ ಪರಿವರ್ತನೆಗಾಗಿ ಚುನಾವಣೆ ಎಂದು ಘೋಷಣೆಯಲ್ಲಿ ಮತಯಾಚನೆ ಆರಂಭಿಸಿದ್ದೇನೆ ಎಂದು ಆಗ್ನೇಯ ಪದವೀಧರ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ತಿಳಿಸಿದರು.

ಗುಬ್ಬಿ ಪಟ್ಟಣದ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಗುಬ್ಬಿಯಪ್ಪನ ಆಶೀರ್ವಾದ ಪಡೆದು ಶಾಸಕ ಎಸ್.ಆರ್.ಶ್ರೀನಿವಾಸ್ ಮಾರ್ಗದರ್ಶನದಲ್ಲಿ ಮೂರು ದಿನಗಳ ಕಾಲ ತಾಲ್ಲೂಕಿನಲ್ಲಿ ಪ್ರಚಾರ ಕಾರ್ಯದ ಪ್ರವಾಸ ಹಮ್ಮಿಕೊಂಡಿದ್ದೇವೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ನನ್ನ ಗೆಲುವಿಗೆ ಸೋಪಾನವಾಗಿದೆ. ಪ್ರತಿ ಗ್ರಾಮದಲ್ಲೂ ಪದವೀಧರರನ್ನು ಹುಡುಕಿ ನೋಂದಣಿ ಮಾಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಮೂರು ದಿನಗಳ ಕಾಲ ಎಲ್ಲಾ ಶಾಲಾ ಕಾಲೇಜು ಸೇರಿದಂತೆ ಇನ್ನಿತರ ಕ್ಷೇತ್ರದಲ್ಲಿನ ಪದವೀಧರ ಮತದಾರರನ್ನು ಭೇಟಿ ಮಾಡಿ ಮತಯಾಚನೆ ನಡೆಸುತ್ತೇವೆ ಎಂದ ಅವರು ಯುವನಿಧಿ ಗ್ಯಾರಂಟಿ ಯೋಜನೆ ಕೂಡಾ ಚುನಾವಣೆಯಲ್ಲಿ ನಮ್ಮ ಕೈ ಹಿಡಿಯಲಿದೆ. ಒಟ್ಟಾರೆ ಗ್ಯಾರಂಟಿ ಯೋಜನೆಗಳು ಸಹ ಪದವೀಧರ ಚುನಾವಣೆಯಲ್ಲಿ ಪ್ಲಸ್ ಆಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕರ ಸಮಸ್ಯೆ ಜೊತೆಗೆ ಪದವೀಧರರ ನಿರುದ್ಯೋಗ ನಿವಾರಣೆಗೆ ನನ್ನ ಹೋರಾಟ ನಿರಂತರ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸ್ವಯಂ ಉದ್ಯೋಗ ಯೋಜನೆಗಳು ಹಾಗೂ ಕೌಶಲ್ಯ ತರಬೇತಿ ಕೂಡಾ ನಮ್ಮ ಪದವೀಧರ ಯುವಕರಿಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದ ಅವರು ಗುಬ್ಬಿ ತಾಲ್ಲೂಕಿನಲ್ಲಿ 800 ಮತದಾರರ ನೋಂದಣಿ ಆಗುತ್ತಿತ್ತು. ಆದರೆ ಈ ಬಾರಿ ನಾಲ್ಕು ಸಾವಿರಕ್ಕೂ ಅಧಿಕ ಮತಗಳ ನೋಂದಣಿಯಾಗಿದೆ. ಈ ಕಾರ್ಯ ಮಾಡಿದ ನಮ್ಮ ಕಾಂಗ್ರೆಸ್ ಕಾರ್ಯಕರ್ತರೇ ಶಶಿ ಹುಲಿಕುಂಟೆ ಯಾಕೆ ಬೇಕಿದೆ ಎಂಬುದು ರುಜುವಾತು ಮಾಡಿದ್ದಾರೆ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ವೆಂಕಟೇಶ್, ಪಪಂ ಮಾಜಿ ಸದಸ್ಯ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಯತೀಶ್, ನಗರ ಘಟಕ ಅಧ್ಯಕ್ಷ ವಾಸುಗೌಡ, ಮುಖಂಡರಾದ ಪಟೇಲ್ ದೇವರಾಜ್, ಜಿ.ಸಿ.ಶಿವಕುಮಾರ್, ಪಣಗಾರ್ ವೆಂಕಟೇಶ್, ಹೊಸಹಳ್ಳಿ ರವೀಶ್, ಜಿ.ಎಲ್.ರಂಗನಾಥ್, ಲಕ್ಕೇನಹಳ್ಳಿ ನರಸಿಯಪ್ಪ, ಮಲ್ಲಿಕಾರ್ಜುನ್, ಅನಿಲ್, ಸಚಿನ್, ಮಧು ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...