ಗುಬ್ಬಿ ಮ್ಯಾರಥಾನ್, ವಾಕಥಾನ್-2026 ಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ

Date:

 ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಗುಬ್ಬಿ ಪಟ್ಟಣದ ವಿವೇಕಾನಂದ ಸ್ಪೋರ್ಟ್ಸ್ ಸ್ಕ್ವೇರ್ ಆಯೋಜಿಸಿದ್ದ ಗುಬ್ಬಿ ಮ್ಯಾರಥಾನ್ ವಾಕಥಾನ್-2026 ಕ್ರೀಡಾ ಕಾರ್ಯಕ್ರಮಕ್ಕೆ ಗೃಹಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಚಾಲನೆ ನೀಡಿದರು.

ಚಾಲನೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ ಇಂದಿನ ಯುವ ಪೀಳಿಗೆ ಹೆಚ್ಚು ಮಾದಕ ವ್ಯಸನಿಗಳಾಗುತ್ತಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಯುವ ಜನರ ದಿನಾಚರಣೆಯನ್ನು ಈ ಮಾದಕ ಜಾಲಗಳನ್ನು ಮಟ್ಟ ಹಾಕುವ ಮೂಲಕ ಯುವಕರನ್ನು ರಕ್ಷಿಸಲು ಸರ್ಕಾರ ಕಟ್ಟುನಿಟ್ಟಿನ ಕಾನೂನು ಜಾರಿ ಮಾಡಿದೆ. ಈಗಾಗಲೇ ಬಹಳಷ್ಟು ದಂಧೆಕೋರರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಕೋಟ್ಯಾಂತರ ರೂಗಳ ಮಾದಕ ವಸ್ತುಗಳನ್ನು ಸುಟ್ಟು ಹಾಕಲಾಗಿದೆ ಎಂದ ಅವರು ಅವರು ಪ್ರತಿವರ್ಷ ನಡೆಯುವ ರಾಜ್ಯ ಮಟ್ಟದ ಅಥ್ಲೆಟಿಕ್ ಈ ಬಾರಿ ತುಮಕೂರಿನಲ್ಲಿ ಇದೇ ತಿಂಗಳಲ್ಲಿ ಆಯೋಜನೆ ಮಾಡಲಾಗಿದೆ. ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ಡಿಸಿ, ಎಸ್ಪಿ, ತಹಶೀಲ್ದಾರ್ ಕಾಲೆಳೆದ ಗೃಹಮಂತ್ರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮ್ಯಾರಥಾನ್ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ ಮಾತಿನ ಮಧ್ಯೆ ಜಿಲ್ಲಾಧಿಕಾರಿಗಳು ಟ್ರ್ಯಾಕ್ ಸೂಟ್ ಧರಿಸಿದ್ದಾರೆ. ಆದರೆ ಅದು ಶೋಗಾಗಿ ಎಂದು ಹಾಸ್ಯ ಚಟಾಕಿ ಹಾರಿಸಿ ಎಸ್ಪಿ ಅವರು ಟ್ರ್ಯಾಕ್ ಸೂಟ್ ಧರಿಸಿದರೆ ಓಡಬೇಕಾಗುತ್ತೆ ಎಂದು ಸಮವಸ್ತ್ರ ಧರಿಸಿ ಬಂದಿದ್ದಾರೆ. ತಹಶೀಲ್ದಾರ್ ಅವರು ಮದುವೆ ಮನೆಗೆ ಹೊರಡಲು ಸಜ್ಜಾಗಿದ್ದಾರೆ ಎಂದು ಹಾಸ್ಯವಾಗಿಯೇ ಕಾಲೆಳೆಯುವ ಚಟಾಕಿ ಹಾರಿಸಿ ನೆರೆದಿದ್ದ ಸಾರ್ವಜನಿಕರಲ್ಲಿ ನಗು ಭರಿಸಿದರು.

ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ದೈಹಿಕ ಆರೋಗ್ಯಕ್ಕೆ ವ್ಯಾಯಾಮ ಅತ್ಯಗತ್ಯ. ದಿನ ಒಂದೆರೆಡು ಗಂಟೆ ವ್ಯಾಯಾಮ ಮಾಡುವುದು ಅಥವಾ ಯಾವುದಾದರೂ ಕ್ರೀಡೆಯಲ್ಲಿ ತೊಡಗುವುದು. ದೈಹಿಕ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಇಂದಿನ ಮ್ಯಾರಥಾನ್ ಓಟ ಪ್ರತಿ ವರ್ಷ ನಡೆಯುತ್ತಾ ನಿರಂತರ ಗುಬ್ಬಿ ಜನರ ಆರೋಗ್ಯ ಕಾಪಾಡಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಾಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಹಸೀಲ್ದಾರ್ ಬಿ.ಆರತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರು, ವಿವೇಕಾನಂದ ಸ್ಪೋರ್ಟ್ಸ್ ಸ್ಕ್ವೇರ್ ಮುಖ್ಯಸ್ಥರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...