ಕೊರಟಗೆರೆ|ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವ ಪರಮೇಶ್ವರ್ ಭೇಟಿ : ಪರಿಶೀಲನೆ

Date:

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಆ.19ರಂದು ಸುರಿದ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕಳೆದ ಆಗಸ್ಟ್ 19ರಂದು ಮನೆಗಳಿಗೆ ಮಳೆ ನೀರು ನುಗ್ಗಿದ್ದ ಕೊರಟಗೆರೆ ಪಟ್ಟಣದ ಹೊಸ ಬಡಾವಣೆ ಪ್ರದೇಶ, ಮಳೆ ನೀರಿನಿಂದ ಹಾನಿಗೊಳಗಾದ ಪೈಪ್‌ಲೈನ್ ಕಾಮಗಾರಿ ವೀಕ್ಷಿಸಲು ಊರ್ಡಿಗೆರೆ ಕ್ರಾಸ್‌ಗೆ ಭೇಟಿ ನೀಡಿದರು.

ಚನ್ನಸಾಗರ ಗ್ರಾಮಕ್ಕೆ ಭೇಟಿ ನೀಡಿ ಜಯಮಂಗಲಿ ನದಿ ನೀರಿನ ಹರಿವನ್ನು ಪರಿಶೀಲಿಸಿದ ನಂತರ ತೂಬುಗಳಲ್ಲಿ ಕಟ್ಟಿಕೊಂಡಿರುವ ಕಸ-ಕಡ್ಡಿಗಳನ್ನು ಕೂಡಲೇ ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ದಾರಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 22 at 9.03.53 AM

ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಾಗ ಚನ್ನಸಾಗರ ಗ್ರಾಮಕ್ಕೆ ನೀರು ನುಗ್ಗುವುದರಿಂದ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದಾಗ ಸ್ಪಂದಿಸಿದ ಸಚಿವರು, ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಲು ಸರ್ಕಾರಿ ಜಮೀನನ್ನು ಗುರುತಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಯಿಂದ ಮನೆ ಹಾನಿಗೊಳಗಾದ ಸಂತ್ರಸ್ತರಾದ ಕೊರಟಗೆರೆ ತಾಲ್ಲೂಕು ಸಿ.ಎನ್.ದುರ್ಗ ಹೋಬಳಿ ಅಜ್ಜೀಹಳ್ಳಿ ಗ್ರಾಮದ ಶಂಕ್ರಮ್ಮ ಕೋಂ.ಲೇಟ್ ಸಾಕನರಸಯ್ಯ ಹಾಗೂ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮದ ಕೆಂಪಯ್ಯ ಬಿನ್ ದೊಡ್ಡ ಹನುಮಂತಯ್ಯ ಅವರಿಗೆ ತಲಾ 50 ಸಾವಿರ ರೂ.ಗಳ ಪರಿಹಾರವನ್ನು ಸಚಿವರು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ಮೌಢ್ಯಕ್ಕೆ ಸರ್ಕಾರಿ ಹಾಸ್ಟೆಲ್ ಬಲಿ; ‘ಮುಟ್ಟು’ ಮೈಲಿಗೆಯೆಂದು ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಬೀಗ

ಜಗತ್ತು ತಂತ್ರಜ್ಞಾನಗಳ ಹಿಂದೆ ಓಡುತ್ತಿದೆ. ಎಐ ಇಡೀ ಜಗತ್ತನ್ನೇ ಆಳುತ್ತಿದೆ. ಆದರೆ,...