ಪಾವಗಡ | ಸಮಾಜ ಕಲ್ಯಾಣ ಅಧಿಕಾರಿ ಆತ್ಮ *ತ್ಯೆ : ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್

Date:

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ (60) ಶುಕ್ರವಾರ ಪಟ್ಟಣದ ಆಪ್ ಬಂಡೆ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಮೀಟಿಂಗ್ ಹಾಲ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ತುಮಕೂರು ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ಜಂಟಿ‌ ನಿರ್ದೇಶಕ ಕೃಷ್ಣಪ್ಪ ಕಿರುಕುಳದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದೇನೆ ಎಂದು ವೀಡಿಯೋ ಮಾಡಿದ್ದಾರೆ.

ಅತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ, ಸಿಬ್ಬಂದಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಪತ್ನಿ ಪಾವಗಡ ಪೊಲೀಸ್ ಠಾಣೆಗೆ ಸಲ್ಲಿಸಿದ್ದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ 3 ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ. ಮೂಲತಃ ಪಾವಗಡ ತಾಲೂಕು ಗುಂಡರ್ಲಾಹಳ್ಳಿ ಗ್ರಾಮದವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸಿಗದ ಆ್ಯಂಬುಲೆನ್ಸ್ ಸೌಲಭ್ಯ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು!

ಮೃತಪಟ್ಟ ತಂದೆಯ ಶವ ಸಾಗಿಸಲು ಆ್ಯಂಬುಲೆನ್ಸ್ ವ್ಯವಸ್ಥೆ ಸಿಗದ ಕಾರಣ ಮಕ್ಕಳು...

ಪಾವಗಡ ಸೋಲಾರ್ ಪಾರ್ಕ್ ಗೆ ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಭೇಟಿ

ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ...

ಪಾವಗಡ | ವೆಂಕಟಮ್ಮನಹಳ್ಳಿ ಪೊಲೀಸ್‌ ಹತ್ಯಾಕಾಂಡ: 19 ವರ್ಷದ ಬಳಿಕ ಆರೋಪಿಯ ಬಂಧನ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿಯಲ್ಲಿ 2005ರಲ್ಲಿ ನಡೆದ...

ತುಮಕೂರು | ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿದ ಕೆಪಿಟಿಸಿಎಲ್‌ ಎಂಜಿನಿಯರ್‌ಗಳು

ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು...