ತುಮಕೂರು | ಸಾಮಗ್ರಿ ಖರೀದಿಯಲ್ಲಿ ಅಕ್ರಮ; ಪಿಡಿಒಗೆ ದಂಡ – ಸದಸ್ಯನ ಸದಸ್ಯತ್ವ ರದ್ದು

Date:

ತುಮಕೂರು ಜಿಲ್ಲೆಯ ಕೊರಗೆರೆ ಗ್ರಾಮ ಪಂಚಾಯತಿಯಲ್ಲಿ ಕೆಲವು ಸಾಮಗ್ರಿಗಳ ಖರೀದಿ ಹೆಸರಿನಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಗ್ರಾಮ ಪಂಚಾಯತಿ ಪಿಡಿಒಗೆ ದಂಡ ವಿಧಿಸುವಂತೆ ಮತ್ತು ಗ್ರಾಮ ಪಂಚಾಯತಿ ಸದಸ್ಯನ ಸದಸ್ವತ್ವ ರದ್ದುಗೊಳಿಸುವಂತೆ ಜಿಲ್ಲಾ ಪಂಚಾಯತಿ ಸಾರ್ವಜನಿಕ ಕುಂದುಕೊರತೆ ನಿವಾರಣಾ ಪ್ರಾಧಿಕಾರ ಆದೇಶಿಸಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಕೊರಗೆರೆ ಗ್ರಾಮ ಪಂಚಾಯತಿಯ ಇಂದಿನ ಕಾರ್ಯದರ್ಶಿ, ಹಿಂದಿನ ಪಿಡಿಒ ಟಿ.ಕೆಂಚಪ್ಪ ಅವರು ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪ ಸಾಬೀತಾಗಿದ್ದು ಅಕ್ರಮ ಎಸಗಿದ್ದ 32,000 ರೂ. ಹಣದ ಜೊತೆಗೆ 5,000 ರೂ. ದಂಡ ವಸೂಲಿ ಮಾಡುವಂತೆ ಪ್ರಾಧಿಕಾರ ಆದೇಶ ನೀಡಿದೆ.

ಟಿ.ಕೆಂಚಪ್ಪ ಅವರು ಪಿಡಿಒ ಆಗಿದ್ದ ಸಮಯದಲ್ಲಿ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ಅನುಮೋದನೆ ಪಡೆಯದೆ ಸಾಮಗ್ರಿ ಖರೀದಿಗಾಗಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಸ್.ದಿನೇಶ್ 32,000 ರೂ. ಚೆಕ್‌ ನೀಡಿದ್ದರು. ಈ ಬಗ್ಗೆ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಎಸ್.ಎಲ್.ಮಣಿಕಂಠ ಎಂಬವರು  ಪ್ರಾಧಿಕಾರಕ್ಕೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ದಾಖಲಿಸಿಕೊಂಡಿದ್ದ ಪ್ರಾಧಿಕಾರ, ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ನೀಡುವಂತೆ ಇಂದಿನ ಪಿಡಿಒ ಎನ್‌ ನಮೀನ್ ಕುಮಾರ್ ಅವರಿಗೆ ತಿಳಿಸಿತ್ತು. ಆದರೆ, ವಿತರಣೆಯಾಗಿರುವ ಚೆಕ್‌ಅನ್ನು ನಗದೀಕರಿಸಲಾಗಿಲ್ಲವೆಂದು ನವೀನ್ ಕುಮಾರ್ ತಪ್ಪು ಮಾಹಿತಿ ನೀಡಿದ್ದರು. ಚೆಕ್‌ಅನ್ನು ನಗದೀಕರಿಸಿ, ಹಣ ಪಾವತಿಯಾಗಿರುವ ಬಗ್ಗೆ ದೂರುದಾರರು ವಿವರಣೆ ಸಲ್ಲಿಸಿದ್ದರು.

ಇದೆಲ್ಲವನ್ನೂ ಗಮನಿಸಿದ ಪ್ರಾಧಿಕಾರ, ಅಕ್ರಮ ನಡೆದಿದೆ ಎಂಬುದನ್ನು ದೃಢಪಡಿಸಿದೆ. ಅಲ್ಲದೆ, ಗ್ರಾಮ ಪಂಚಾಯತಿ ಸದಸ್ಯರಿಗೆ ಗೌರವಧನವನ್ನು ಬಿಟ್ಟು ಬೇರಾವುದೇ ಹಣ ಪಾವತಿಸುವಂತಿಲ್ಲ. ಸದಸ್ಯರು ಗುತ್ತಿಗೆ ಸೇರಿದಂತೆ ಯಾವುದೇ ಕಾಮಗಾರಿಗಳನ್ನು ನಿರ್ವಹಿಸುವಂತಿಲ್ಲ ಎಂಬ ನಿಯಮಗಳಿವೆ. ಅದರೂ ಸದಸ್ಯನಿಗೆ ಚೆಕ್‌ ನೀಡಲಾಗಿದೆ ಎಂಬುದನ್ನು ಕೂಡ ಗಮನಿಸಿದೆ.

ಅಕ್ರಮ ಸಾಬೀತಾಗಿದ್ದು, ಪಂಚಾಯತಿ ಅಧಿಕಾರಿ ಟಿ ಕೆಂಚಪ್ಪ ಅವರಿಂದ ಅಕ್ರಮ ಎಸಗಲಾಗಿದ್ದ 32,000 ರೂ. ಹಣವನ್ನು ಮರಳಿ ಪಡೆಯಬೇಕು. ಪ್ರಾಧಿಕಾರಕ್ಕೆ ತಪ್ಪು ಮಾಹಿತಿ ನೀಡಿದ ಪಿಡಿಒ ನವೀನ್ ಕುಮಾರ್‌ಗೆ 5,000 ರೂ. ದಂಡ ವಿಧಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಗ್ರಾಮ ಪಂಚಾಯತಿ ಸದಸ್ಯ ಬಿ.ಎಸ್‌ ದಿನೇಶ್ ಅವರ ಸದಸ್ಯತ್ವವನ್ನು ರದ್ದು ಮಾಡಬೇಕು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಅಧಿನಿಯಮ-1993ರ ಸೆಕ್ಷನ್‌ 43–ಎ(4) ಅಡಿಯಲ್ಲಿ ಕ್ರಮ ಜರುಗಿಸಬೇಕು ಎಂದು ಪ್ರಾಧಿಕಾರವು ಜಿಲ್ಲಾ ಪಂಚಾಯತಿ ಸಿಒಒಗೆ ಶಿಫಾರಸ್ಸು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...