ತುಮಕೂರು | ಪರಿಶಿಷ್ಟ ಸಂತ್ರಸ್ತರನ್ನು ಬೆದರಿಸುವ ಪೊಲೀಸರು; ಕ್ರಮಕ್ಕೆ ಆಗ್ರಹಿಸಿ ಜ.25ರಿಂದ ಧರಣಿ

Date:

ತುಮಕೂರು ಜಿಲ್ಲೆಯಲ್ಲಿ ಅನ್ಯಾಯಕ್ಕೊಳಗಾದ ಪರಿಶಿಷ್ಟರು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರು ನೀಡಿದರೆ, ಪ್ರಕರಣ ದಾಖಲಿಸಿಕೊಳ್ಳದೆ ಕೆಲ ಪೊಲೀಸ್ ಅಧಿಕಾರಿಗಳು ಸಂತ್ರಸ್ತರನ್ನೇ ಬೆದರಿಸುತ್ತಾರೆ. ಪ್ರಕರಣದ ಸೂಕ್ತ ತನಿಖೆ ನಡೆಸದೆ, ಆರೋಪಿಗಳನ್ನು ಬಂಧಿಸದೆ, ಸಂತ್ರಸ್ಥರನ್ನೇ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ದ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜನವರಿ 25ರಿಂದ 28ರವರೆಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಬಿ ರಾಜೇಶ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಾದಿಗ ಸಮಾಜ ಸಂಘಟನೆಯ ಪುನಶ್ಚೇತನ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು. “ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಡನಹಳ್ಳಿ ಸೇರಿದಂತೆ ಜಿಲ್ಲೆಯಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಪೊಲೀಸರು ಬಹಳ ಲಘುವಾಗಿ ಪರಿಗಣಿಸುತ್ತಿದ್ದಾರೆ. ಆರೋಪಿಗಳ ಪರವಾಗಿ ನಿಲ್ಲುತ್ತಿರುವುದು ಸಾಮಾನ್ಯವಾಗುತಿವೆ. ಹಾಗಾಗಿ, ಇತ್ತೀಚೆಗೆ ದಾಖಲಾಗಿರುವ ಎಲ್ಲ ಅಟ್ರಾಸಿಟಿ ಪ್ರಕರಣಗಳನ್ನು ಕೂಲಂಕಷ ತನಿಖೆ ನಡೆಸಿ, ತಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಒತ್ತಾಯ” ಎಂದು ಹೇಳಿದರು.

“ಅಂಡನಹಳ್ಳಿಯಲ್ಲಿ ಸವರ್ಣೀಯ ವ್ಯಕ್ತಿಯೊಬ್ಬರು ದಲಿತರೊಂದಿಗೆ ನಡೆಯುತ್ತಿದ್ದ ಜಮೀನು ವಿವಾದದಿಂದ ಕುಪಿತರಾಗಿ ದಲಿತರ ಕಾಲೋನಿಯ ಸುತ್ತ ಮಣ್ಣು ಸುರಿದಿದ್ದರು. ಪರಿಣಾಮ, 2019ರಲ್ಲಿ ಆದ ಭೀಕರ ಮಳೆಗೆ ಅಂಡನಹಳ್ಳಿ ದಲಿತ ಕಾಲೋನಿಯ ಸುಮಾರು 4 ಮನೆಗಳು ಮಳೆ ನೀರಿಗೆ ಕುಸಿದು ಸಂಪೂರ್ಣ ಹಾಳಾಗಿದ್ದವು. ಈ ಸಂಬಂಧ ಚೇಳೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಆ ಪ್ರಕರಣದ ವಿಚಾರಣೆ ನಡುತ್ತಿದೆ ಈ ನಡುವೆ, ಇತ್ತೀಚೆಗೆ, ಅಲ್ಲಿನ ದಲಿತ ಕಾಲೋನಿಯ ಕೊಳಚೆ ನೀರು ಹೊರ ಹೋಗಲು ತೆಗೆದಿದ್ದ ಚರಂಡಿಯನ್ನು ಮುಚ್ಚಲು ಆತ ಮುಂದಾಗಿದ್ದ. ಅದನ್ನು ಪ್ರಶ್ನಿಸಿದ ದಲಿತರ ಮೇಲೆ ಹಲ್ಲೆಗೆ ನಡೆಸಿದ್ದಾರೆ. ಆ ಬಗ್ಗೆ, 2024ರ ಜನವರಿ 10 ರಂದು ಚೇಳೂರು ಪೊಲೀಸ್ ಠಾಣೆಗೆ ಮತ್ತೊಂದು ದೂರು ನೀಡಲಾಗಿತ್ತು. ಆದರೆ, ಇದೂವರೆಗೆ ಎಫ್‌ಐಆರ್‌ ದಾಖಲಾಗಿಲ್ಲ” ಎಂದು ರಾಜೇಶ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿಯನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡದೆ, ವೃಥಾ ಕಾಲಾಹರಣ ಮಾಡುತ್ತಿದ್ದಾರೆ. ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬದಲಿಗೆ ದೂರು ನೀಡಿದವರನ್ನು ಬೇದರಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಹಾಗಾಗಿ ಜನವರಿ 25 ರಿಂದ 28ರವರಗೆ ನಡೆಯುವ ಪ್ರತಿಭಟನಾ ಧರಣಿಯ ವೇಳೆ ಪೊಲೀಸ್ ಅಧಿಕ್ಷಕರು ಸ್ಥಳಕ್ಕೆ ಬಂದು ನಮ್ಮ ಅಹವಾಲು ಸ್ವೀಕರಿಸುಬೇಕು. ತಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಾದಿಗ ಸಮಾಜ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗಿರೀಶ್.ಜಿ.ಆರ್, ಪ್ರಸನ್ನಕುಮಾರ್ ,ಗುಬ್ಬಿ ತಾಲೂಕು ಅಧ್ಯಕ್ಷ ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ಆಶೋಕ್, ತಿಪಟೂರು ವಿಭಾಗೀಯ ಅಧ್ಯಕ್ಷ ಗವಿರಂಗಪ್ಪ, ಗುಬ್ಬಿ ತಾಲೂಕು ಯುವಘಟಕದ ಅಧ್ಯಕ್ಷ ಅಮರ್, ವಿವಿಧ ತಾಲೂಕು ಅಧ್ಯಕ್ಷರಾದ ರಾಜು, ಮೂರ್ತಪ್ಪ, ಉದಯ್ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...