ತುಮಕೂರು | ವಿದ್ಯುತ್ ಖಾಸಗೀಕರಣ ವಿರೋಧಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

Date:

ವಿದ್ಯುತ್‌ಅನ್ನು ಖಾಸಗೀಕರಣಗೊಳಿಸುವ ವಿದ್ಯುತ್ ತಿದ್ದುಪಡಿ ಮಸೂದೆ-2022ನ್ನು ಹಿಂದಕ್ಕೆ ಪಡೆಯಬೇಕು ಎಂದು ವಿವಿಧ ಸಂಘಟನೆಗಳು ತುಮಕೂರು ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿವೆ.

ವಿದ್ಯುತ್ ಬಳಕೆದಾರರ ಹೋರಾಟ ಸಮಿತಿ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಉಮೇಶ್, “ನರೇಂದ್ರ ಮೋದಿ ಸರ್ಕಾರವು ʼರಾಷ್ಟ್ರೀಯ ನಗದೀಕರಣ, ಪೈಪ್ ಲೈನ್ ಯೋಜನೆʼಗಳನ್ನು ಕಾರ್ಪೋರೇಟ್ ಕಂಪನಿಗಳಿಗೆ ವಹಿಸುವ ಮೂಲಕ ವಿದ್ಯುತ್ ಬಳಕೆದಾರರ ರಕ್ತ ಹೀರಲು ಮುಂದಾಗಿದೆ” ಎಂದು ಆರೋಪಿಸಿದರು.

ವಿದ್ಯುತ್ ಪ್ರತಿಯೊಬ್ಬರ ಜೀವನದ ಅಗತ್ಯವಾಗಿದೆ. ವಿದ್ಯುತ್ ಇಲ್ಲದೆ ಜನರ ಬದುಕು, ವಿದ್ಯಾಬ್ಯಾಸ, ಆರೋಗ್ಯ ಕ್ಷೇತ್ರ, ವ್ಯಾಪಾರ-ವ್ಯವಹಾರ, ಕೈಗಾರಿಕಾ ಉತ್ಪಾದನೆ, ಕೃಷಿ-ವ್ಯವಸಾಯ ಇತ್ಯಾದಿಗಳು ಮುಂದೆ ಸಾಗುವುದೇ ಇಲ್ಲ. ಜೀವನದ ಅವಿಭಾಜ್ಯ ಅಂಗವಾಗಿರುವ ವಿದ್ಯುತ್, ಇನ್ನೂ ಸರ್ಕಾರದ ಒಡೆತನದಲ್ಲಿ ಇರುವುದರಿಂದ ಕ್ರಾಸ್ ಸಬ್ಸಿಡಿಯಿಂದ ಅಗ್ಗದ ಬೆಲೆಗೆ ವಿದ್ಯುತ್ ಲಭ್ಯವಾಗುತ್ತಿದೆ. ಹಾಗಾಗಿ ಅದು ಒಂದು ವ್ಯಾಪಾರವಾಗದೆ ಸೇವೆಯಾಗಿ ಉಳಿದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಮುಖಂಡ ಎನ್.ಕೆ.ಸುಬ್ರಮಣ್ಯ ಮಾತನಾಡಿ, ಐಎಂಎಫ್- ವಿಶ್ವ ಬ್ಯಾಂಕ್‌ಗಳ ಒತ್ತಡಕ್ಕೆ ಭಾರತ ಸರ್ಕಾರ ಮಣಿಯುತ್ತಿದೆ. ಹಲವು ದಶಕಗಳಿಂದ ಜನತೆಯ ದುಡ್ಡಿನಲ್ಲಿ ಕಟ್ಟಲಾಗಿರುವ ಈ ವಿದ್ಯುತ್ ಕ್ಷೇತ್ರದ ಖಾಸಗೀಕರಣವು ದೇಶದ ಜನತೆ, ರೈತರು, ಉದ್ಯಮದಾರರು ಸೇರಿದಂತೆ ಇಡೀ ಸಮಾಜಕ್ಕೇ ಮಾರಕವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂತಹ ನಿರ್ಧಾರಗಳ ವಿರುದ್ಧ ಧ್ವನಿ ಎತ್ತಿ ಇದನ್ನು ಸಾರ್ವಜನಿಕ ಕ್ಷೇತ್ರದಲ್ಲೇ ಉಳಿಸಲು ಒತ್ತಾಯಿಸಿ ರೈತರ ಪಂಪ್ ಸೆಟ್‌ಗಳಿಗೆ, ಹತ್ತು ಎಚ್‌ಪಿತನಕ ಸಿಗುತ್ತಿರುವ ಉಚಿತ ವಿದ್ಯುತ್ ನಿಲ್ಲಿಸದೆ ಮುಂದುವರಿಸಬೇಕು. ಆರ್. ಆರ್ ನಂಬರ್‌ಗಳಿಗೆ ಆಧಾರ್ ಜೋಡಣೆ ನಿಲ್ಲಿಸಬೇಕು. ವಿದ್ಯುತ್ ಉತ್ಪಾದನೆಯನ್ನು ಸಾರ್ವಜನಿಕ ಹೊಡಿಕೆ ಹೆಚ್ಚಳ, ಉತ್ಪಾದನೆ, ಸಾಗಣೆ ಮತ್ತು ವಿತರಣೆಯನ್ನು ಸರ್ಕಾರವೇ ನಿರ್ವಹಿಸಬೇಕು. ಪ್ರೀ ಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆ, ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ವಿದ್ಯುತ್ ದರ ನಿಗದಿ ಮಾಡುವ ನೀತಿ ಕೈಬೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸೈಯದ್ ಮುಜೀಬ್, ಕಲ್ಪನಾ, ಎ.ಲೋಕೆಶ್, ಲಕ್ಷ್ಮೀಕಾಂತ್, ಮಾರುತಿ, ಮುತ್ತುರಾಜು, ವಸೀಮ್, ರಾಮು, ಇರ್ಫಾನ್, ಟಿ.ಜಿ. ಶೀವಲಿಂಯ್ಯ, ಮಂಜು, ಸಿದ್ದರಾಜು, ಮಂಜುನಾಥ್, ದೂಡ್ಡಸಿದ್ದಯ್ಯ, ಗಂಗಾಧರ್, ವಿದ್ಯತ್‌ಬಳಕೆದಾರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...