ಶಿರಾ | ಒಳಮೀಸಲಾತಿಯಡಿ ನೇಮಕಾತಿ ಪರಿಗಣಿಸಿ : ಪಿ.ಬಿ.ನರಸಿಂಹಯ್ಯ

Date:

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ನೀಡಬೇಕೆಂದು ಒತ್ತಾಯಿಸಿ ಸರಕಾರಕ್ಕೆ ಶಿಫಾರಸ್ಸು ಮಾಡಲು ಕೋರಿ ಶಿರಾ ತಾಲೂಕು ಮಾದಿಗ ಮಹಾಸಭಾದ ವತಿಯಿಂದ ತಹಶೀಲ್ದಾರ್ ಆನಂದ್ ಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ಶಿರಾ ತಾಲೂಕು ಮಾದಿಗ ಮಹಾಸಭಾದ ಅಧ್ಯಕ್ಷ ಪಿ.ಬಿ ನರಸಿಂಹಯ್ಯ, ಸುಮಾರು 35 ವರ್ಷಗಳಿಂದ ಪರಿಶಿಷ್ಟ ಜಾತಿಯಲ್ಲಿ ಇರುವ 101 ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಮಾದಿಗ ಸಮುದಾಯದಿಂದ ಹೋರಾಟ ನಡೆಯುತ್ತಿದೆ. ಇದರ ಹಿನ್ನೆಯಲೆಯಲ್ಲಿ ಸುಪ್ರೀಂ ಕೋರ್ಟ್ 2024ರ ಆ. 1 ರಂದು ಸ್ಪಷ್ಟ ಆದೇಶ ನೀಡಿ, ಆಯಾ ರಾಜ್ಯ ಸರಕಾರಗಳೇ ಪರಿಶಿಷ್ಟ ಜಾತಿಯಲ್ಲಿನ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ದತ್ತಾಂಶಗಳನ್ನು ಕ್ರೂಢೀಕರಣ ಮಾಡಿ ಅದರ ಆಧಾರದ ಮೇಲೆ ಒಳಮೀಸಲಾತಿ ಕಲ್ಪಿಸುವಂತೆ ತಿಳಿಸಿದೆ. ಇದರ ಸಂಬಂಧವಾಗಿ ಸರಕಾರ ಜಸ್ಟೀಸ್ ನಾಗಮೋಹನ್‌ದಾಸ್ ರವರ ಆಯೋಗ ರಚನೆ ಮಾಡಿ ಅವರಿಂದ ಪಡೆದ ದತ್ತಾಂಶದ ವರದಿಯ ಆಧಾರದ ಮೇಲೆ ಮಾದಿಗ ಸಂಬಂಧಿತ ಜಾತಿಗಳಿಗೆ-06, ಹೊಲೆಯ ಸಂಬಂಧಿತ ಜಾತಿಗಳಿಗೆ-06 ಮತ್ತು ಸ್ಪರ್ಶ ಜಾತಿಗಳೊಂದಿಗೆ ಅಲೆಮಾರಿ ಜನಾಂಗಗಳನ್ನು ಸೇರಿಸಿ -05ರ ಅನುಪಾತದಲ್ಲಿ ಒಳಮೀಸಲಾತಿ ಜಾರಿ ಮಾಡಲು ತೀರ್ಮಾನ ಮಾಡಿತ್ತು. ಆದರೆ ತದನಂತರ ಮೀಸಲಾತಿ ಪ್ರಮಾಣ ಶೇಕಡ 50 ಕ್ಕಿಂತ ಜಾಸ್ತಿಯಾಗದಂತೆ ಉದ್ಯೋಗ ನೇಮಕಾತಿ ಮಾಡಬೇಕೆಂದು ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿರುವುದರಿಂದ ಅದರಂತೆಯೇ ಶೇ. 50 ರಡಿಯಲ್ಲಿ ಪರಿಶಿಷ್ಟ ಜಾತಿಗಳಿಗೆ ಶೇಕಡ 15 ರ ಮೀಸಲಾತಿಯಲ್ಲಿಯೇ ಒಳಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿದರು.  

ಸರಕಾರ ಒಳಮೀಸಲಾತಿ ಜಾರಿಯನ್ನು ಕೈಬಿಟ್ಟು 56432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿರುವುದರಿಂದ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವಾಗುತ್ತಿದೆ. ಅದರಲ್ಲೂ ಮಾದಿಗ ಸಮುದಾಯಕ್ಕೆ ತೀವ್ರತರವಾದ ಅನ್ಯಾಯವಾಗುತ್ತಿದೆ. ಆದ್ದರಿಂದ ಈ ಅನ್ಯಾಯವನ್ನು ಸರಿಪಡಿಸಿ 56432 ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಮಾಡಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಶಿರಾ ತಾಲೂಕು ಮಾದಿಗ ಮಹಾಸಭಾದ ಕಾರ್ಯದರ್ಶಿ ನರಸಿಂಹಮೂರ್ತಿ, ಡಾ.ದ್ವಾರನಕುಂಟೆ ಲಕ್ಷö್ಮಣ, ಶಾಸಮರು ಮೂರ್ತಿ, ಜಯರಾಮಕೃಷ್ಣ, ಟಿ.ಲೋಕೇಶ್, ಬೀರನಹಳ್ಳಿ ಹನುಮಂತರಾಯಪ್ಪ, ಕರೆಯಾಗಲಹಳ್ಳಿ ಮೂರ್ತಿ, ಹನುಮಂತರಾಯಪ್ಪ, ಹೊನ್ನೇನಹಳ್ಳಿ ಚಂದ್ರಶೇಖರ್, ಶಿವಣ್ಣ ಸೇರಿದಂತೆ ಹಲವರು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ರಾಜಣ್ಣರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಿ: ಜಿ ಎನ್‌ ಮೂರ್ತಿ

ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನೆಲುಬಾದ ಹಾಗೂ ಅವರ ವಿರುದ್ಧ...

ಶಿರಾ | ನ್ಯಾಯಗೆರೆ ಕೆರೆ ಏರಿ ಮೇಲೆ ವಿಜಯ ನಗರ ಅರಸರ ಕಾಲದ ಶಾಸನ ಪತ್ತೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯ  ಕಾಲದ...

ಶಿರಾ | ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಪಡೆದು  ತಂದೆ ತಾಯಿಗಳಿಗೆ ಹೆಸರು...

ಹಾಸನ | ಗಸ್ತು ಅರಣ್ಯ ಪಾಲಕ ನವೀನ್ ಕುಮಾರ್ ಹೃದಯಾಘಾತದಿಂದ ನಿಧನ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ವಲಯ ದಸೂಡಿ ವ್ಯಾಪ್ತಿಯಲ್ಲಿ...