ಶಿರಾ | ಮಾನಂಗಿಗೆ ಕುಡಿಯುವ ನೀರು ಸರಬರಾಜಿಗೆ ಡಿ.ಸಿ. ಸೂಚನೆ

Date:

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಶುಕ್ರವಾರ ಬೆಳಿಗ್ಗೆ ಶಿರಾ ತಾಲೂಕು ಭುವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಂಗಿ ಗ್ರಾಮಕ್ಕೆ ಭೇಟಿ ನೀಡಿ ತುರ್ತಾಗಿ ಕುಡಿಯುವ ನೀರು ಸರಬರಾಜು ಮಾಡಲು ಸೂಕ್ತ ಕ್ರಮವಹಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು

 ಜಿಲ್ಲಾಧಿಕಾರಿಗಳ ಭೇಟಿ ಸಮಯದಲ್ಲಿ ಪ್ರಸ್ತುತ ಮಾನಂಗಿ ಗ್ರಾಮದ ಕುಡಿಯುವ ನೀರು ಸರಬರಾಜು ಕೊಳವೆ ಬಾವಿ ವಿಫಲವಾಗಿದ್ದು, ಖಾಸಗಿ ಕೊಳವೆಬಾವಿ ಮೂಲಕ ನೀರು ಸರಬರಾಜು ಮಾಡುತ್ತಿರುವುದಾಗಿ ಗ್ರಾಮಸ್ಥರು ಮಾಹಿತಿ ನೀಡಿದರು. 

ಗ್ರಾಮದ ಮನೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಗ್ರಾಮ ನೈರ್ಮಲ್ಯ ಕುಡಿಯವ ನೀರು ಕುರಿತು ಚರ್ಚಿಸಿದರು ಹಾಗೂ ಗ್ರಾಮದ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಬೆಳಗಿನ ಸಾಯಿ ಶೂರ್ ಮಾಲ್ಟನ್ನು ತಾವು ಖುದ್ದು ಕುಡಿದು ಗುಣಮಟ್ಟ ಪರಿಶೀಲಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ಘಟಕ ಮಂಜೂರು ಮಾಡಲು ಮನವಿ ಮಾಡಿದರು ಹಾಗೂ ಆಹಾರ ಇಲಾಖೆಯಿಂದ ತಮ್ಮ ಗ್ರಾಮದಲ್ಲಿರುವ ಆಹಾರ ವಿತರಣೆಗೆ ಅನುಕೂಲ ಮಾಡಿಕೊಡಲು ಕೋರಿದರು. ಈ ಕುರಿತು ತ್ವರಿತವಾಗಿ ಸೂಕ್ತ ಕ್ರಮವಹಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. 

ಈ ಸಂದರ್ಭದಲ್ಲಿ ಮಧುಗಿರಿ ವಿಭಾಗದ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್, ಶಿರಾ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯ ಪಾಲಕ ಅಭಿಯಂತರರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರುಗಳು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ರಾಜಣ್ಣರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಿ: ಜಿ ಎನ್‌ ಮೂರ್ತಿ

ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನೆಲುಬಾದ ಹಾಗೂ ಅವರ ವಿರುದ್ಧ...

ಶಿರಾ | ನ್ಯಾಯಗೆರೆ ಕೆರೆ ಏರಿ ಮೇಲೆ ವಿಜಯ ನಗರ ಅರಸರ ಕಾಲದ ಶಾಸನ ಪತ್ತೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯ  ಕಾಲದ...

ಶಿರಾ | ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಪಡೆದು  ತಂದೆ ತಾಯಿಗಳಿಗೆ ಹೆಸರು...

ಹಾಸನ | ಗಸ್ತು ಅರಣ್ಯ ಪಾಲಕ ನವೀನ್ ಕುಮಾರ್ ಹೃದಯಾಘಾತದಿಂದ ನಿಧನ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ವಲಯ ದಸೂಡಿ ವ್ಯಾಪ್ತಿಯಲ್ಲಿ...