ತಿಪಟೂರು | ಡಿವಿಜಿ ಬದುಕು, ಬರಹ ಎಂದಿಗೂ ಆದರ್ಶ : ಎಂ.ಬಸವರಾಜಪ್ಪ

Date:

 ಮೆಟ್ರಿಕ್ ಫೇಲ್ ಆಗಿದ್ದ ಡಿ ವಿ ಗುಂಡಪ್ಪನವರು ಮುಂದೆ ಕನ್ನಡ ಸಾಹಿತ್ಯಕ್ಕೆ ಅಪಾರ ಸೇವೆ ಸಲ್ಲಿಸಿ ಆಧುನಿಕ ಸರ್ವಜ್ಞ ಎನಿಸಿಕೊಂಡರೆ, ಪತ್ರಿಕೋದ್ಯಮದಲ್ಲಿನ ಅವರ ಸಾಧನೆಗೆ ಕನ್ನಡ ಪತ್ರಿಕೋದ್ಯಮದ ಭೀಷ್ಮ ಎಂದು ಕರೆಸಿಕೊಳ್ಳುವಂತೆ ಬೆಳೆದದ್ದು ನಿಜಕ್ಕೂ ಆದರ್ಶನೀಯ ಎಂದು ತಿಪಟೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಬಸವರಾಜಪ್ಪ ತಿಳಿಸಿದರು.

ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮಂಗಳವಾರ ಕಾಲೇಜು ಪತ್ರಿಕೋದ್ಯಮ ವಿಭಾಗ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕ ತಿಪಟೂರು ಸಹಯೋಗದೊಂದಿಗೆ ನಡೆದ ಪತ್ರಕರ್ತರ ಸಂಘದ ಸಂಸ್ಥಾಪಕರಾದ ಡಿ ವಿ ಗುಂಡಪ್ಪನವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಿವಿಜಿ ಅವರ ಬದುಕು ಬರಹದ ಕುರಿತು ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಡುತ್ತ, ಗುಂಡಪ್ಪನವರು ಬಡತನ ಕುಟುಂಬದಿಂದ ಬಂದು, ಮೆಟ್ರಿಕ್ ಫೇಲ್ ಆಗಿಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸುವ ಮಟ್ಟಿಗೆ ಬೆಳೆದದ್ದು ವಿದ್ಯಾರ್ಥಿಗಳಿಗೆ ಮಾದರಿ. ಅವರ ಆದರ್ಶಗಳ ಮೇಲೆಯೇ ಇಂದು ತಿಪಟೂರು ಕಾನಿಪ ಕಾರ್ಯ ನಿರ್ವಹಿಸುತ್ತಿದೆ ಎಂದರು. 

         ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಿಪಟೂರು ಅಧ್ಯಕ್ಷ ದಯಾನಂದ್ ಟಿ.ಎಸ್ ಮಾತನಾಡಿ, ಪತ್ರಿಕೋದ್ಯಮ ಡಿವಿಜಿ ಅವರಿಗೆ ಕೇವಲ ವೃತ್ತಿಯಾಗಿರಲಿಲ್ಲ, ಅದು ಜನತೆಯಲ್ಲಿ ಜಾಗೃತಿ ಮೂಡಿಸುವ ಮಾರ್ಗವಾಗಿತ್ತು. ಆದರೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆಗಳು ನೈಜತೆಯ ಅರಿವಿರದೇ ಸುದ್ದಿ ಬಿತ್ತರಿಸಿ, ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿವೆ ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಶಶಿಕುಮಾರ್.ಎಚ್.ಸಿ ಅವರು, ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ನಿಮ್ಮ ಜ್ಞಾನವನ್ನು ವೃದ್ಧಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಹೆಚ್ಚು ಸಹಾಯವಾಗುತ್ತದೆ. ನಾನು ಕೂಡ ನಿತ್ಯ ಕೈಸಿಗುವ ಪತ್ರಿಕೆಗಳಲ್ಲಿನ ಸುದ್ದಿ ಮತ್ತು ಸಂಪಾದಕೀಯ ವಿಭಾಗ ಓದುತ್ತಿರುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ತಿಪಟೂರು ಕಾನಿಪ ಪ್ರಧಾನ ಕಾರ್ಯದರ್ಶಿ ಸಿದ್ದೇಶ್ವರ್, ಉಪಾಧ್ಯಕ್ಷ ಪ್ರಶಾಂತ್, ಖಜಾಂಚಿ ಕುಮಾರಸ್ವಾಮಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ‌.ಶಿವಕುಮಾರ.ಸಿ.ಜಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಹಣಮಂತ ಕಾಂಬಳೆ, ಕನ್ನಡ ವಿಭಾಗದ ಮುಖ್ಯಸ್ಥೆ ಸ್ಮಿತಾ, ಸಮಾಜ ಕಾರ್ಯ ವಿಭಾಗದ ಗಂಗಾಧರ್ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯನಿಗೆ ‘ಯಶಸ್ವಿನಿ ಟ್ರಸ್ಟ್‌’ನಲ್ಲಿ ಸ್ಥಾನ; ಕಾಂಗ್ರೆಸ್‌ ಕಾರ್ಯಕರ್ತರ ವಿರೋಧ

ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯನನ್ನು ಸರ್ಕಾರದ 'ಯಶಸ್ವಿನಿ...

ತಿಪಟೂರು | ಹೆರಿಗೆಯಲ್ಲಿ ರಕ್ತಸ್ರಾವ, ಗುದನಾಳದಲ್ಲಿ ಆಗುವ ಸಣ್ಣ ಗಾಯದ ಬಗ್ಗೆ ಅರಿವು ಕಾರ್ಯಾಗಾರ

ಹೆರಿಗೆಯಲ್ಲಿ ರಕ್ತಸ್ರಾವ ಮತ್ತು ಗುದನಾಳದಲ್ಲಿ ಆಗುವ ಸಣ್ಣ ಗಾಯದ ಬಗ್ಗೆ ಅರಿವು...

ತಿಪಟೂರು | ಜನ ಸ್ವಾತಂತ್ರ್ಯೋತ್ಸವ : ಶ್ರಮಿಕ ಸೇನಾನಿಗಳಿಗೆ ಗೌರವ ಸಮರ್ಪಣೆ

ಜನಸ್ಪಂದನಾ ಟ್ರಸ್ಟ್ ತಿಪಟೂರು, ಹಾಗೂ ಸಂವಿಧಾನ ಸಂರಕ್ಷಣಾ ಪಡೆ, ಸಹಯೋಗದಲ್ಲಿ ಆಗಸ್ಟ್...

ತಿಪಟೂರು | ಕುಪ್ಪಾಳು ಪಂಚಾಯಿತಿಯಲ್ಲಿ  ಅವ್ಯವಹಾರ : ತನಿಖೆಗೆ ಗ್ರಾಪಂ ಅಧ್ಯಕ್ಷೆ ಗಾಯಿತ್ರಿ ಮೈಲಾರಸ್ವಾಮಿ  ಒತ್ತಾಯ

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ...