ತುಮಕೂರು ವಿವಿ ಕುಲಪತಿ ವಿರುದ್ಧ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣಭಟ್ ನೇತೃತ್ವದ ಸಮಿತಿ ನೇಮಕ

Date:

ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು (ಆಡಳಿತ) ಆದೇಶ ಪಾಲಿಸದೆ ಮತ್ತೆಮತ್ತೆ ಸಮರ್ಥನೆ ಮಾಡಿಕೊಂಡು ಸರ್ಕಾರಕ್ಕೆ ಪತ್ರ ಬರೆದಿರುವುದು ಹಾಗೂ  ಕುಲಪತಿ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ 8 ಮಂದಿ ಬೋಧಕೇತರ ಸಿಬ್ಬಂದಿಗೆ ನೀಡಿದ್ದ ಬಡ್ತಿ ಪ್ರಕರಣದ ತನಿಖೆ ನಡೆಸಲು  ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣಭಟ್ ನೇತೃತ್ವದ ಸಮಿತಿ ರಚಿಸಿ ರಾಜ್ಯಪಾಲರು ಆದೇಶಿಸಿದ್ದಾರೆ. ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ರಾಜ್ಯಪಾಲರು ಆದೇಶದಲ್ಲಿ ತಿಳಿಸಿದ್ದಾರೆ. 

ಪ್ರಕರಣದ ಹಿನ್ನೆಲೆ: ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಗೆ ಪ್ರಥಮ ದರ್ಜೆ ಸಹಾಯಕರ 16 ಹುದ್ದೆಗಳ ನೇಮಕಾತಿಗೆ ಸರ್ಕಾರ ಒಪ್ಪಿಗೆ ನೀಡಿತ್ತು. ಅದರಲ್ಲಿ 8 ಹುದ್ದೆಗಳಿಗೆ ಬಡ್ತಿ ನೀಡುವುದು. ಇನ್ನುಳಿದ 8 ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಆದೇಶದಲ್ಲಿ ತಿಳಿಸಲಾಗಿದೆ.  ಈ ನಿಯಮವನ್ನು ವಿಶ್ವವಿದ್ಯಾನಿಲಯ 

ಪಾಲನೆ ಮಾಡಿಲ್ಲ. ಪ್ರಥಮ ದರ್ಜೆ ಸಹಾಯಕರ 8 ಹುದ್ದೆಗಳಿಗೆ ನೇರ ನೇಮಕಾತಿ ಮಾಡದೆ 01-02-2021 ರಂದು ಬಡ್ತಿ ನೀಡಿ ಆದೇಶಿಸಲಾಗಿತ್ತು. ಆ ಸಮಯದಲ್ಲಿ ಪ್ರೊ. ಕೆ. ಶಿವಚಿತ್ತಪ್ಪ ಆಡಳಿತ ವಿಭಾಗದ ಕುಲಸಚಿವರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣ ಬೆಳಕಿಗೆ ಬಂದ ತಕ್ಷಣ ಉನ್ನತ ಶಿಕ್ಷಣ ಇಲಾಖೆ ಹಂತದಲ್ಲಿ ನಡೆಸಿದ ತನಿಖೆಯಲ್ಲಿ ನಿಯಮ ಪಾಲನೆ ಮಾಡದೆ ಬಡ್ತಿ ನೀಡಿರುವುದು ಕಂಡು ಬಂದಿತ್ತು.  ಎಲ್ಲ 8 ಮಂದಿಗೂ ನೀಡಿದ್ದ ಬಡ್ತಿಯನ್ನು ರದ್ದುಪಡಿಸುವಂತೆ 2023 ಜನವರಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿತ್ತು. ಸರ್ಕಾರದ ಆದೇಶದಂತೆ ತಕ್ಷಣವೇ ಹಿಂಬಡ್ತಿ ನೀಡಿ, ಹೆಚ್ಚುವರಿಯಾಗಿ ಪಾವತಿಸಿದ್ದ ವೇತನವನ್ನು ವಾಪಸ್ ಪಡೆದುಕೊಳ್ಳಬೇಕಿತ್ತು. ಉನ್ನತ ಶಿಕ್ಷಣ ಇಲಾಖೆ ಆದೇಶವನ್ನು ಕುಲಪತಿ, ಕುಲಸಚಿವರು ಈವರೆಗೂ ಜಾರಿಗೆ ತಂದಿಲ್ಲ.

ತಾನು ನೀಡಿದ್ದ ಆದೇಶ ಪಾಲನೆಯಾಗದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿ ಇಲಾಖೆಯು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಿತ್ತು. ಇದರ ಆಧಾರದ ಮೇಲೆ ತನಿಖೆಗೆ ಸಮಿತಿ ರಚಿಸಿ ರಾಜ್ಯಪಾಲರು ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ

 ಬಡ್ತಿ ಪಡೆದ ನೌಕರರು

ನೌಕರರಾದ ಬಿ.ಎಸ್.ಗಾಯತ್ರಿಬಾಯಿ, ಪ್ರೇಮಾ ಪ್ಯಾಟಿಗೌಡರ್,ಎನ್.ಮಂಜುನಾಥ, ಆರ್.ಪರಪ್ಪ, ಎನ್.ರಾಘವೇಂದ್ರ, ಆಯಿಶಾತಜೀನ್. ಡಿ.ಎನ್. ರವಿ, ವಿ.ದಯಾನಂದ ಅವರು ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಬಡ್ತಿ ಪಡೆದುಕೊಂಡಿದ್ದರು

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...