ಒಲಿಂಪಿಕ್ ಕ್ರೀಡಾಕೂಟ ತುಮಕೂರಿನ ಹೊಸ ಇತಿಹಾಸ : ಸಚಿವ ಡಾ: ಜಿ. ಪರಮೇಶ್ವರ

Date:

 ಜನವರಿ 16 ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಒಲಿಂಪಿಕ್ ಕ್ರೀಡಾಕೂಟ ತುಮಕೂರಿನ ಐತಿಹಾಸಿಕ ಕಾರ್ಯಕ್ರಮ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

ಮಂಗಳವಾರ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟದ ಪೂರ್ವೋತ್ಸವ ಹಾಗೂ ಒಳಾಂಗಣ ಕ್ರೀಡಾಂಗಣದ ನಾಮಫಲಕ ಅನಾವರಣ ಹಾಗೂ ನವೀಕೃತ ಕ್ರೀಡಾಂಗಣದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿರುವುದು ತುಮಕೂರು ಜಿಲ್ಲೆಗೆ ಐತಿಹಾಸಿಕ ಕ್ಷಣವಾಗಿದೆ. ಈ ಹಿಂದೆ ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನಡೆದಿಲ್ಲ, ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜಿಸಲು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರನ್ನು ಒಪ್ಪಿಸಿ ಈ ಅವಕಾಶ ಪಡೆದಿದ್ದು, ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಆಗದಂತಹ ಅದ್ದೂರಿ ಕ್ರೀಡಾಕೂಟ ಇದಾಗಲಿದೆ. ಈ ಮೂಲಕ ತುಮಕೂರು ಮತ್ತೊಂದು ಇತಿಹಾಸ ಬರೆಯಲಿದೆ ಎಂದು ಅವರು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಕ್ರೀಡಾಕೂಟದಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದು, ಜನವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಜನವರಿ 22ರಂದು ರಾಜ್ಯಪಾಲರು ಸಮಾರೋಪ ಭಾಷಣ ಮಾಡಲಿದ್ದಾರೆ. ಕ್ರೀಡಾಕೂಟ ವಿಜೃಂಭಣೆಯಿಂದ ನಡೆಸಲು ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಪ್ರತಿ ವರ್ಷ 5 ರಿಂದ 10ಸಾವಿರ ಕ್ರೀಡಾಪಟುಗಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಏಷ್ಯ ಮಟ್ಟದಲ್ಲಿ 500 ಕ್ರೀಡಾಪಟುಗಳನ್ನು ತಯಾರಿಸಿ ಕ್ರೀಡೆಯಲ್ಲಿ ಸಾಧನೆ ಮಾಡುವ ಗುರಿಯನ್ನು ರಾಜ್ಯ ಒಲಿಂಪಿಕ್ ಸಂಸ್ಥೆ ಹೊಂದಿದೆ. ಈ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯ ಕ್ರೀಡಾಪಟುಗಳಿಗೆ ಹಾಗೂ ಯುವ ಸಮುದಾಯಕ್ಕೆ ಕ್ರೀಡಾಕ್ಷೇತ್ರದಲ್ಲಿ ಹೊಸ ಶಕೆ ಆರಂಭವಾಗಲಿದೆ ಎಂದು ಹೇಳಿದರು. 

ತುಮಕೂರು ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಒಂದು ವರ್ಷದೊಳಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಪೂರ್ಣಗೊಳಿಸಿ ಅಂತರ್ ರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ನಮ್ಮ ಜಿಲ್ಲೆಯಲ್ಲಿ ರೂಪಿಸುವ ಉದ್ದೇಶವಿದೆ ಎಂದು ಅವರು ಹೇಳಿದರು.

ಇನ್ನೂ ಒಳಾಂಗಣ ಕ್ರೀಡಾಂಗಣಕ್ಕೆ ನನ್ನ ಹೆಸರನ್ನು ಇಟ್ಟಿರುವುದಕ್ಕೆ ಕೆಲವು ವಿರೋಧಗಳಿದ್ದರೂ, ನಾನು ಒಬ್ಬ ಕ್ರೀಡಾಪಟುವಾಗಿದ್ದು, ಜಿಲ್ಲೆಗೆ ನಾನು ನೀಡಿರುವ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಈ ಒಳಾಂಗಣ ಕ್ರೀಡಾಂಗಣಕ್ಕೆ ನನ್ನ ಹೆಸರನ್ನು ಇಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಡಾ: ಕೆ. ಗೋವಿಂದರಾಜ್  ಮಾತನಾಡಿ, ಕ್ರೀಡಾಕೂಟದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಕಳೆದ 25 ವರ್ಷಗಳಿಂದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅಪಾರವಾಗಿದೆ. ತುಮಕೂರಿನಲ್ಲಿ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಿರುವುದರಿಂದ ಜಿಲ್ಲೆಯ ಕ್ರೀಡಾ ಉತ್ಸಾಹಿಗಳು ಹಾಗೂ ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಹಾಗೂ ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, 2026–27ರ ಆಯವ್ಯಯದಲ್ಲಿ ಆ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳು ಮಂಡನೆ ಮಾಡುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಅವರು ಮಾತನಾಡಿ, ಬೆಂಗಳೂರಿಗೆ ಸಮೀಪದಲ್ಲಿರುವ ತುಮಕೂರಿನಲ್ಲಿ ಕರ್ನಾಟಕ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಿರುವುದು ಮೆಚ್ಚುಗೆಯ ವಿಷಯವಾಗಿದ್ದು, ತುಮಕೂರಿನಲ್ಲಿ ಎಲ್ಲ ರೀತಿಯ ಕ್ರೀಡೆಗಳನ್ನು ನಡೆಸಲು ಅಗತ್ಯವಾದ ಸೌಲಭ್ಯಗಳಿರುವುದರಿಂದ ಇಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟವನ್ನು ತುಮಕೂರಿನ ಯುವಕ–ಯುವತಿಯರಿಗೆ ಹೆಚ್ಚು ಅನುಕೂಲವಾಗುವ ರೀತಿಯಲ್ಲಿ ರೂಪಿಸಲಾಗಿದ್ದು, ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಗುರುತಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...