ತುಮಕೂರು | ಕನ್ನಡ ಮೀಸಲಾತಿಗೆ 25ರ ಸಂಭ್ರಮ :  ಬೆಳ್ಳಿ ಹಬ್ಬ ಆಚರಣೆಗೆ ಚಿಂತನೆ

Date:

 ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ವೃತ್ತಿ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ದೊರಕಿಸಿಕೊಟ್ಟ ಕನ್ನಡತನಕ್ಕೆ ಇದೀಗ 25 ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಜಿಲ್ಲಾಡಳಿತ ಸಜ್ಜಾಗಿದೆ. 

ಖ್ಯಾತ ಸಾಹಿತಿ ಹಾಗೂ ಬರಹಗಾರ ಡಾ.ಬರಗೂರು ರಾಮಚಂದ್ರಪ್ಪ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕೈಗೊಂಡ ಪ್ರಾಧಿಕಾರದ ಪ್ರಮುಖ ನಿರ್ಧಾರಗಳಲ್ಲಿ 2001 ಜೂನ್ 4ರಂದು ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ಆಯ್ಕೆಯಾಗುವ ರಾಜ್ಯದ ಅಭ್ಯರ್ಥಿಗಳಿಗೆ ಕನ್ನಡ ವ್ಯಾಸಂಗ ಮಾಡಿದಲ್ಲಿ ವಿಶೇಷ ಮೀಸಲಾತಿಯನ್ನು ಒದಗಿಸಿ ಸರ್ಕಾರ ಆದೇಶಿಸಿತ್ತು. ಇದರಿಂದ ರಾಜ್ಯದ ಹಲವಾರು ವಿದ್ಯಾರ್ಥಿಗಳು ಕನ್ನಡ ಮಾಧ್ಯಮ ವ್ಯಾಸಂಗ ಮಾಡಿ ವೃತ್ತಿಪರ ಕೋರ್ಸುಗಳಿಗೆ ಆಯ್ಕೆಯಾಗಿದ್ದರು. ಈ ಕ್ರಮಕ್ಕೆ ಇದೀಗ 25 ವರ್ಷಗಳು ಸಂದಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಮೀಸಲಾತಿಗೆ 25ರ ಸಂಭ್ರಮ ಕಾರ್ಯಕ್ರಮ ಆಯೋಜನೆಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ ಹಾಗೂ ತುಮಕೂರು ಜಿಲ್ಲಾಡಳಿತ ಚಿಂತನೆ ನಡೆಸಿದೆ. 

ಈ ಸಂಬಂಧ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ತಮ್ಮ ಕಚೇರಿಯಲ್ಲಿ ಡಾ: ಬರಗೂರು ರಾಮಚಂದ್ರಪ್ಪ ಅವರೊಂದಿಗೆ ಚರ್ಚೆ ನಡೆಸಿದ್ದು, ಕಾರ್ಯಕ್ರಮ ರೂಪುರೇಷೆಗಳು ಹಾಗೂ ದಿನಾಂಕದ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಸಧ್ಯದಲ್ಲೇ ತೀರ್ಮಾನಿಸಲು ನಿರ್ಧರಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002931580

ಈ ಸಂದರ್ಭದಲ್ಲಿ ಡಾ. ಬರಗೂರು ರಾಮಚಂದ್ರಪ್ಪ ಅವರು, ತಮ್ಮ ಅವಧಿಯಲ್ಲಿ 2001 ಜೂನ್ 4ರಂದು ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ಕನ್ನಡ ಮೀಸಲಾತಿ, 2002 ಅಕ್ಟೋಬರ್ 24ರಂದು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಕನ್ನಡ ಮೀಸಲಾತಿ ಆದೇಶವನ್ನು ಸರ್ಕಾರ ನೀಡಿದೆ. ಇದರಿಂದ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ರಾಜ್ಯದ ಅಪಾರ ಪ್ರಮಾಣದ ವಿದ್ಯಾರ್ಥಿಗಳು ಸೌಲಭ್ಯಗಳನ್ನು ಪಡೆದು ಉತ್ತಮ ಸ್ಥಾನ ಹೊಂದಲು ಅವಕಾಶವಾಯಿತು. ಇದಲ್ಲದೆ, ತಮ್ಮ ಅವಧಿಯಲ್ಲಿ ಸಾಕಷ್ಟು ಕನ್ನಡಪರ ನಿರ್ಧಾರಗಳನ್ನು ತೆಗೆದುಕೊಂಡು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಅಂತೆಯೇ ಸರ್ಕಾರವು ತಮ್ಮ ವರದಿಯನ್ನು ಅಂಗೀಕರಿಸಿ ಸರ್ಕಾರಿ ಆದೇಶಗಳನ್ನು ಹೊರಡಿಸಿ ಕನ್ನಡಿಗರಿಗೆ ನೆರವಾಗಿರುವುದನ್ನು ಅವರು ಸ್ಮರಿಸಿದರು.  

ವೃತ್ತಿಪರ ಕೋರ್ಸುಗಳಿಗೆ ಕನ್ನಡ ಮೀಸಲಾತಿ ಆದೇಶವನ್ನು ತಂದು 25 ವರ್ಷಗಳು ಸಂದಿರುವ ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತದಿಂದ ಕನ್ನಡ ಮೀಸಲಾತಿ ಬೆಳ್ಳಿ ಹಬ್ಬ ಆಚರಿಸಲು ಮುಂದಾಗುತ್ತಿರುವುದು ಪ್ರಶಂಸನೀಯ. ಇದು ಕನ್ನಡಿಗರ ಮುಂಬರುವ ಪೀಳಿಗೆಗೆ ಅತ್ಯಂತ ಸ್ಫೂರ್ತಿಯ ಗುರುತಾಗಲಿದೆ ಎಂದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...