ತುಮಕೂರು | ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಜಿಲ್ಲಾಸ್ಪತ್ರೆಗೆ ಭೇಟಿ : ಸ್ವಚ್ಛತೆ ಕಾಪಾಡಲು ಸೂಚನೆ

Date:

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಸೂತಿ ಕೊಠಡಿ, ಮಹಿಳಾ ವಾರ್ಡ್, ಮಕ್ಕಳ ವಾರ್ಡ್, ಎನ್.ಐ.ಸಿ ಕೊಠಡಿ, ಹೊರರೋಗಿ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯದ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದ ಅವರು, ಆಸ್ಪತ್ರೆ ಆವರಣ ಮತ್ತು ವಾರ್ಡ್ಗಳ ಸ್ವಚ್ಛತೆಯನ್ನು ಪರಿಶೀಲಿಸಿ ರೋಗಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕೆಂದು ಜಿಲ್ಲಾ ಶಸ್ತçಚಿಕಿತ್ಸಕ ಡಾ. ಅಜಗರ್ ಬೇಗ್ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಎಂ.ಎನ್, ಜಿಲ್ಲಾ ನಿರೂಪಣಾಧಿಕಾರಿ ದಿನೇಶ್ ಆರ್.ಎಂ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಆರ್.ಎಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್, ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...