ತುಮಕೂರು | ಒಳಮೀಸಲಾತಿ ನೀಡದೆ ಕಾಂಗ್ರೆಸ್ ಪಕ್ಷದಿಂದ ವಂಚನೆ : ಡಾ.ವೈ.ಕೆ.ಬಾಲಕೃಷ್ಣಪ್ಪ

Date:

ಪ್ರಪಂಚದಲ್ಲಿ ಯಾರು ಮಾಡದಷ್ಟು ಹೋರಾಟವನ್ನು ಮಾದಿಗ ಸಮುದಾಯ ಮಾಡುತ್ತಿದ್ದರು  ಆಡಳಿತ ಪಕ್ಷ ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು   ವಂಚಿಸುತ್ತಿವೆ ಎಂದು ಡಾ.ವೈ.ಕೆ.ಬಾಲಕೃಷ್ಣಪ್ಪ ತಿಳಿಸಿದರು.

ತುಮಕೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ಸದಾಶಿವ ಆಯೋಗದ ವರದಿ ಜಾರಿಯಾಗಲಿಲ್ಲ, ವಿಧಾನಸಭೆ ಚುನಾವಣೆ ನಂತರ ಒಳ ಮೀಸಲಾತಿ ಜಾರಿಗೆ ತರುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿ ಈಗ ಯೂಟರ್ನ್ ಹೊಡೆದಿದೆ ಎಂದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಅನ್ವಯ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಿ, ಕಾಯ್ದೆಗೆ ರಾಜ್ಯಪಾಲರು ಅಂಕಿತವಾದ ನಂತರ ನ್ಯಾಯಾಲಯದ ನೆಪ ಹೇಳಿ ಒಳ ಮೀಸಲಾತಿ ನೀಡದೇ ವಂಚಿಸುತ್ತಿದೆ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರದ ಸರ್ಕಾರ ನೇಮಕಾತಿಗೆ ಮುಂದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರುದ್ಯೋಗಿ ಪದವೀಧರರ ಒಂದು ದಿನದ ಹೋರಾಟಕ್ಕೆ ಮಣಿದಿರುವ ಸರ್ಕಾರ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾವಂತರಿಗೆ ವಿಷವಿಕ್ಕಿದೆ. ಮಾ.12ರಂದು ಬೆಂಗಳೂರು ಚಲೋದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿರುವ ಎಲ್ಲ ಸಂಘಟನೆಗಳು, ಮುಖಂಡರು ಸ್ವಯಂಪ್ರೇರಿರಾಗಿ ಭಾಗವಹಿಸಲಿದ್ದಾರೆ ಎಂದರು.

ಚಿಂತಕ ಪ್ರೊ.ದೊರೈರಾಜು ಮಾತನಾಡಿ ಕಾಂಗ್ರೆಸ್ ಪಕ್ಷ ಒಳ ಮೀಸಲಾತಿ ಜಾರಿಗೆ ತರುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿ ಈಗ ನಂಬಿಸಿ ಕತ್ತು ಕುಯ್ಯುವ ಕೆಲಸವನ್ನು ಮಾಡುತ್ತಿದೆ. ಒಳ ಮೀಸಲಾತಿ ನೀಡಿ, ಒಳ ಮೀಸಲಾತಿ ನೀಡದೇ ನೇಮಕ ಮಾಡಲು ಹೊರಟಿರುವುದು ಸರ್ಕಾರದ ಇಬ್ಬಗೆಯ ನೀತಿ ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಷೆಡ್ಯೂಲ್ 9ಕ್ಕೆ ಸೇರಿಸಲು ಒತ್ತಡ ಹಾಕಬೇಕಾದ ರಾಜ್ಯ ಸರ್ಕಾರ ಅದರ ಬಗ್ಗೆ ಉಸಿರೆತ್ತುತ್ತಿಲ್ಲ, ಕುದುರೆಗೆ ಹುಲ್ಲು ತೋರಿಸುವಂತೆ ಕಾಂಗ್ರೆಸ್ ಮಾದಿಗರಿಗೆ ಒಳ ಮೀಸಲಾತಿ ಜಾರಿ ಮಾಡುತ್ತದೆ ಎಂದು ಹೇಳುತ್ತಲೇ ವಂಚಿಸುತ್ತಿದೆ. ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಒಳ ಮೀಸಲಾತಿ ನೀಡದಿದ್ದರೆ ಜನವಿರೋಧಿ ಸರ್ಕಾರದ ವಿರುದ್ಧ ಅಂತಿಮ ಹೋರಾಟಕ್ಕೆ ತಯಾರಾಗಿದೆ ಎಂದರು.

ಒಳ ಮೀಸಲಾತಿ ಇರುವುದು ಅಂಬೇಡ್ಕರ್ ಚಿಂತನೆಯಲ್ಲಿದೆ. ಎಲ್ಲ 101 ಜಾತಿಗಳಿಗೂ ಮೀಸಲಾತಿ ದಕ್ಕಲಿ ಎನ್ನುವುದಷ್ಟೇ ನಮ್ಮ ಬೇಡಿಕೆ, ನಮಗಿಂತ ಹಿಂದುಳಿದಿರುವ ಅಲೆಮಾರಿಗಳಿಗೂ ಮೀಸಲಾತಿ ಪಾಲು ಸಿಗಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದರು.

ಜಿ.ಪಂ.ಮಾಜಿ ಸದಸ್ಯ ಕೆಂಚಮಾರಯ್ಯ ಮಾತನಾಡಿ ಸರ್ಕಾರ ಮಾಡಿದ ಆಯೋಗದ ವರದಿಯನ್ನು ಸರ್ಕಾರದ ಪ್ರತಿನಿಧಿಗಳು ಅವೈಜ್ಞಾನಿಕ ಎನ್ನುತ್ತಾರೆ. ಮಾದಿಗ ಸಮುದಾಯದ ಯುವಕರ ಶಾಪ ಒಳ ಮೀಸಲಾತಿ ವಿರೋಧಿಗಳಿಗೆ ತಟ್ಟದೇ ಬಿಡುವುದಿಲ್ಲ ಎಂದರು.

ಜಿಲ್ಲಾ ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಮಾತನಾಡಿ ಮಾ.12ರಂದು ಒಳ ಮೀಸಲಾತಿಗೆ ಗಡುವು ಇದೆ. ಸಂಜೆ ಸಚಿವ ಸಂಪುಟದಲ್ಲಿ ಸಮಾನತೆಗೆ ವಿರುದ್ಧ ತೀರ್ಮಾನ ಕೈಗೊಂಡರೆ, ಭೀಕರ ಪರಿಣಾಮ ಕಾಂಗ್ರೆಸ್ ಎದುರಿಸಲಿದೆ ಎಂದು ಎಚ್ಚರಿಕೆ ನೀಡಿದರು.

ಜನಸಂಖ್ಯೆಗೆ ಅನುಗುಣವಾಗಿ ಶೇ.24ರಷ್ಟು ಅನುದಾನವನ್ನು ಸರ್ಕಾರ ನೀಡಿದೆ. ಮೀಸಲಾತಿ ಪ್ರಮಾಣದಲ್ಲಿ ಇಡಬ್ಲೂಎಸ್ ಗೆ ನೀಡಿರುವ ಶೇ.10ರಷ್ಟು ಮೀಸಲಾತಿಯನ್ನು ಕಡಿತಗೊಳಿಸಿ, ಪರಿಶಿಷ್ಟರ ಮೀಸಲಾತಿಯನ್ನು ಏಕೆ ಕಡಿತ ಗೊಳಿಸುತ್ತೀರಾ? ಬೇರೆ ಸಮುದಾಯಗಳಿಗೆ ನೀಡಿರುವ ಮೀಸಲಾತಿ ಕಡಿತಗೊಳಿಸಲು ಏಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ವೇಳೆ ಚಿಂತಕ ಕೊಟ್ಟಶಂಕರ್, ನರಸೀಯಪ್ಪ, ಶಿವನಂಜಪ್ಪ, ನರಸಿಂಹಯ್ಯ, ರಂಜನ್, ಗಂಗಾಧರ್, ಹೊಳಕಲ್ಲು ಆಂಜಿನಪ್ಪ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...