ತುಮಕೂರು | ದಲಿತ ಚಳವಳಿಯ ನೇತಾರ ಬಂದಕುಂಟೆ ನಾಗರಾಜಯ್ಯ ನಿಧನ

Date:

 ತುಮಕೂರು ಜಿಲ್ಲೆಯ ದಲಿತ ಸಂಘರ್ಷ ಸಮಿತಿಯ ಸಂಚಾಲರು ಹಾಗೂ ದಲಿತ ಹೋರಾಟಗಾರ ನಾಗರಾಜು ಬಂದಕುಂಟೆ (70 ವರ್ಷ) ಇಂದು ಬೆಳಿಗ್ಗೆ 9 ಗಂಟೆಯಲ್ಲಿ ನಿಧನ ಹೊಂದಿದ್ದಾರೆ.

ದಸಂಸ ಹೋರಾಟದ ಸಂದರ್ಭದಲ್ಲಿ ಗೂಳೂರು ಸಮೀಪದ ಹೊನ್ನೇನಹಳ್ಳಿ ಭೂ ಹೋರಾಟದಲ್ಲಿ ನಾಗರಾಜು ಅವರನ್ನು ಹೊಡೆದು ಸುಡಲು ಹುಲ್ಲು ಹಾಕಿ ಮುಚ್ಚಿ ಬೆಂಕಿ ಹಚ್ಚಬೇಕು ಅನ್ನುವ ವೇಳೆಯಲ್ಲಿ ದಸಂಸನ ಹೋರಾಟಗಾರರು, ಮಂಡಿಪೇಟೆ ಮಂಡಿ ಕೂಲಿಕಾರರು, ಹಮಾಲಿಗಳು, ಎನ್.ಆರ್.ಕಾಲೋನಿಯ ದಸಂಸ ಮುಖಂಡರು ಲಾರಿಯಲ್ಲಿ ಬಂದು ಉಳಿಸಿದ್ದರು.

ದಸಂಸ ದಿಂದ ಹಲವಾರು ಭೂ ಹೋರಾಟ, ಅಸ್ಪೃಶ್ಯ ವಿರೋಧಿ, ಹೆಂಡಬೇಡ ಶಾಲೆಬೇಕು ಹೋರಾಟದಲ್ಲಿ ರಂಗಸ್ವಾಮಿ ಬೆಲ್ಲದಮಡು ಸೇರಿ ಹೋರಾಟವನ್ನು ನಡೆಸಿದ್ದರು. ಹೇಮಾವತಿ ಯ ಹೋರಾಟದ ‘ಕಾವೇರಿ ಉಳಿಯಲಿ ಹೇಮಾವತಿ ಹರಿಯಲಿ’ ನೀರಾವರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರು ಕುಣಿಗಲ್ ತಾಲ್ಲೂಕಿನ ಯಲ್ಲಿಯೂರು ಮತ್ತು ಕಗ್ಗೆರೆಯಲ್ಲಿ ಅನುದಾನಿತ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿದ್ದರು, ಮುಖ್ಯ ಶಿಕ್ಷಕರಾಗಲು ಡಿಡಿಪಿಐ ಮತ್ತು ಶಿಕ್ಷಣ ಇಲಾಖೆಯ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡಿದರೂ ಮುಖ್ಯ ಶಿಕ್ಷಕ ಹುದ್ದೆ ದಕ್ಕಿಸಿಕೊಳ್ಳಲಾಗಲಿಲ್ಲ.

1002587450

ಬಂದಕುಂಟೆ ನಾಗರಾಜು ಅವರು ನಿವೃತ್ತಿ ಯ ನಂತರ ‘ಬಿತ್ತನೆ ಬೀಜ’ ಎಂಬ ತಮ್ಮ ಹೋರಾಟದ ಬದುಕಿನ ಪುಸ್ತಕವನ್ನು ಬರೆದು ಪ್ರಕಟಿಸಿದ್ದರು.

ಕಳೆದ 9 ವರ್ಷಗಳ ಹಿಂದೆ ಪಾರ್ಶ್ವವಾಯು ಗೆ ಒಳಗಾಗಿ ದ್ದ ನಾಗರಾಜು ಅವರು, ಚೇತರಿಸಿಕೊಂಡಿದ್ದರು, ಇಂದು ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಹೃದಯಾಘಾತದಿಂದ ಮೃತ ಪಟ್ಟಿ ರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

ಮೃತರು ಪತ್ನಿ, ಮೂವರು ಗಂಡು ಮಕ್ಕಳನ್ನ ಅಗಲಿದ್ದಾರೆ.

ಗೆಳೆಯರಾದ ಕೆ.ದೊರೈರಾಜ್, ನರಸೀಯಪ್ಪ, ನರಸಿಂಹಯ್ಯ, ಕುಂದೂರು ತಿಮ್ಮಯ್ಯ, ಹೆಚ್.ಕೆಂಚಮಾರಯ್ಯ,  ಸಾಹಿತಿಗಳಾದ ತುಂಬಾಡಿ ರಾಮಯ್ಯ, ವಡ್ಡಗೆರೆ ನಾಗರಾಜಯ್ಯ, ಡಾ.ಡಿ.ಅರಂಧತಿ, ಡಾ.ಹೆಚ್.ವಿ ರಂಗಸ್ವಾಮಿ,  ಚರಕ ಆಸ್ಪತ್ರೆಯ ಡಾ.ಬಸವರಾಜು, ಒಳಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರಾದ ವೈ.ಕೆ.ಬಾಲಕೃಷ್ಣಪ್ಪ, ವಿರುಪಾಕ್ಷ ಡ್ಯಾಗೇರಹಳ್ಳಿ, ಎಂ.ಸಿ.ನರಸಿಂಹಮೂರ್ತಿ  ಮುಂತಾದವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ, ಒಂದು ನಿಮಿಷದ ಮೌನ ಆಚರಿಸಿದರು.

ಮೃತರ ಅಂತ್ಯ ಸಂಸ್ಕಾರ ಶಿರಾ ತಾಲ್ಲೂಕು ಬಂದಕುಂಟೆಯಲ್ಲಿ ಸಂಜೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...