ತುಮಕೂರು | ವಿಶೇಷಚೇತನರಿಗೆ ಸನ್ನೆ ನುಡಿಯಲ್ಲೇ ಪ್ರಚಾರ ಕೈಗೊಳ್ಳಲು ಡಿ.ಸಿ. ಸೂಚನೆ

Date:

 ಕಿವುಡ-ಮೂಕರಿಗೆ ಸರ್ಕಾರಿ ಯೋಜನೆಯನ್ನು ಸಿಗುವಂತೆ ಮಾಡಲು ಅಂತಹ ವಿಕಲಚೇತನರಿಗೆ ಅರ್ಥವಾಗುವ ಭಾಷೆಯಲ್ಲಿ ಅಂದರೆ ಸನ್ನೆ ನುಡಿಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಫಲಾನುಭವಿಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ. 

 ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಧಾರ್ ಯೋಜನೆ ಫಲಾನುಭವಿಗಳ ಆಯ್ಕೆ ಸಮಿತಿಯಲ್ಲಿ ಅವರು ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಅಭಿವೃದ್ಧಿ ಇಲಾಖೆ ಈಗಾಗಲೇ ಮಾಡಿರುವ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಮಾಧಾನ ತಂದಿರುವುದಿಲ್ಲ. ಅಂಧರು, ಕಿವುಡ, ಮೂಕರು ಸೇರಿದಂತೆ ವಿಕಲಚೇತನ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕ್ರಮ ಸರಿಯಿಲ್ಲ ಎಂದ ಅವರು, ವಿಶೇಷ ಚೇತನರ ಸ್ವ-ಉದ್ಯೋಗ ಇತರೆ ಸರ್ಕಾರಿ ಸೌಲಭ್ಯ ಅರ್ಹರಿಗೆ ಸಿಗಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆ ಅವರಿಗೆ ಅರ್ಥವಾಗುವ ರೀತಿಯಲ್ಲಿ ಅವರ ಭಾಷೆಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹರಿಗೆ ಸೌಲಭ್ಯ ಸಿಗುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು. 

 ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸ್ವಯಂ ಸೇವಕರನ್ನು ಇದಕ್ಕಾಗಿಯೇ ನೇಮಿಸಿಕೊಳ್ಳಲಾಗಿದೆ. ಅಲ್ಲದೆ, ವಿಶೇಷ ಚೇತನರ ಕಲ್ಯಾಣಕ್ಕಾಗಿಯೇ ಸರ್ಕಾರೇತರ ಸಂಸ್ಥೆಗಳು ಕೆಲಸ ನಿರ್ವಹಿಸುತ್ತಿವೆ. ಇವರ ಮೂಲಕ ಹಾಗೂ ಕಿವುಡ-ಮೂಕರಿಗೆ ಸನ್ನೆ ನುಡಿ, ಅಂಧರಿಗೆ ಶ್ರವ್ಯ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ಫಲಾನುಭವಿಗಳು ಪುನರಾವರ್ತನೆಯಾಗದಂತೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮವಹಿಸುವಂತೆ ಅವರು ಸೂಚಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಸಭೆಯಲ್ಲಿ ಜಿಲ್ಲಾ ವಿಕಲಚೇತನರ ಅಧಿಕಾರಿ ಚಿದಾನಂದಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಲೀಡ್ ಬ್ಯಾಂಕ್ ಮ್ಯಾನೇಜರ್ ಚೇತನ್ ಕಂಚಿಬೈಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...