ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ : ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ

Date:

 ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ವ ಸಿದ್ಧತಾ ಕಾರ್ಯದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಉತ್ತಮ ಸಾಧನೆ ಮಾಡಿದ ಸಂಬಂಧ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ಆನ್‌ಲೈನ್ ಸಭೆ ನಡೆಸಿದ ಅವರು, ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಶೇ. 80ಕ್ಕಿಂತ ಅತಿ ಹೆಚ್ಚು ಸಾಧನೆ ಮಾಡಿದ ರಾಜ್ಯದ 16 ಜಿಲ್ಲೆಗಳಲ್ಲಿ ತುಮಕೂರು ಜಿಲ್ಲೆ ಶೇ.91.19ರಷ್ಟು ಸಾಧನೆ ಮಾಡಿ ಪ್ರಥಮ ಸ್ಥಾನದಲ್ಲಿದೆ. ಮತದಾರರ ಪಟ್ಟಿ ಮ್ಯಾಪಿಂಗ್ ಮತ್ತು ಕುಟುಂಬ ಸದಸ್ಯರ ಜೋಡಣೆ ಕಾರ್ಯದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಮ್ಮ ತಂಡದೊಂದಿಗೆ ಉತ್ತಮ ಕಾರ್ಯ ನಿರ್ವಹಿಸಿದ್ದು, ಅವರಿಗೆ ಆಯೋಗದ ಪರವಾಗಿ ಶುಭಾಶಯ ಕೋರುತ್ತೇನೆ ಎಂದು ತಿಳಿಸಿದರು. 

15 ದಿನಗಳಿಗೊಮ್ಮೆ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದ್ದು, ಕಳೆದ ಸಭೆಯಲ್ಲಿ ತುಮಕೂರು ಜಿಲ್ಲೆಯ ಶೇಕಡಾವಾರು ಪ್ರಗತಿ 4.45 ಆಗಿದ್ದು, ಈ ವಿಷಯದಲ್ಲೂ ತುಮಕೂರು ಜಿಲ್ಲೆ ಅಗ್ರಸ್ಥಾನದಲ್ಲಿದೆ ಎಂದು  ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಜಿಲ್ಲೆಯ ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕೊರಟಗೆರೆ, ತಿಪಟೂರು, ಗುಬ್ಬಿ, ಮಧುಗಿರಿ ಮತ್ತು ತುಮಕೂರು ತಾಲ್ಲೂಕುಗಳಲ್ಲಿಯೂ ಕೂಡ ಉತ್ತಮ ಸಾಧನೆಯಾಗಿದ್ದು, ಸಂಬಂಧಿಸಿದ ತಾಲ್ಲೂಕುಗಳ ತಹಶೀಲ್ದಾರರು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಆಯೋಗದಿಂದ ಶುಭ ಕಾಮನೆಗಳನ್ನು ತಿಳಿಸಲು ಬಯಸುತ್ತೇನೆ ಎಂದರು. 

ಮುಂದಿನ ಸಭೆಯ ಹೊತ್ತಿಗೆ ರಾಜ್ಯದ ಎಲ್ಲಾ ಜಿಲ್ಲೆಗಳು ಶೇ.95ರಷ್ಟು ಪ್ರಗತಿಯನ್ನು ಸಾಧಿಸಬೇಕು ಎಂದ ಅವರು, ಪರಿಷ್ಕರಣೆ ಕಾರ್ಯ ಕುಂಠಿತವಾಗಿರುವ ತಾಲ್ಲೂಕುಗಳ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು. 

ಆನ್‌ಲೈನ್ ಸಭೆಯ ನಂತರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮುಂದಿನ ಸಭೆಯ ಹೊತ್ತಿಗೆ ಜಿಲ್ಲೆ ಶೇ. 95ರಷ್ಟು ಪ್ರಗತಿ ಸಾಧನೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತುಮಕೂರು ಮಹಾನಗರಪಾಲಿಕೆ ಆಯುಕ್ತೆ ಶುಭ, ಜಿಲ್ಲಾ ಚುನಾವಣಾ ತಹಶೀಲ್ದಾರ್ ನಾಗಭೂಷಣ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು. 

 

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...