ತುಮಕೂರು | ಔಟರ್ ರಿಂಗ್ ರಸ್ತೆ ಡಿಪಿಆರ್ ಸುಟ್ಟು ರೈತರಿಂದ ಪ್ರತಿಭಟನೆ

Date:

ಪ್ರಸ್ತಾಪಿತ ಔಟರ  ರಿಂಗ್ ರಸ್ತೆ  ಡಿ.ಪಿಆರ್. ತಯಾರು ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ರೈತರನ್ನು ಸಂಪರ್ಕಿಸಿಲ್ಲ. ಶೇ. 80 ಭೂಮಿಯಲ್ಲಿ ತೋಟ, ತುಡಿಕೆ ಇದ್ದರೂ ಶೇ70ರಷ್ಟು ಭೂಮಿ ಒಣ ಭೂಮಿ ಎಂದು ಸುಳ್ಳು ಮಾಹಿತಿ ನೀಡಿರುವುದು,ಪಂಚಾಯಿತಿಗಳಿಂದ ಎನ್.ಒಸಿ. ಪಡೆಯದೆ, ಪಡೆಯಲಾಗಿದೆ ಎಂದು ಡಿಪಿಆಅರ್‌ನಲ್ಲಿ ನಮೂದಿಸಿರುವ ಹಲವಾರು ತಪ್ಪು ಅಂಶಗಳನ್ನು ಜನರ ಮುಂದಿಟ್ಟ ಪರಿಣಾಮ, ಭೂಮಿ ಕಳೆದುಕೊಳ್ಳುತ್ತಿರುವ ಸುಮಾರು 26 ಹಳ್ಳಿಗಳ ಜನರು ಡಿಪಿಆರ್‌ನ್ನು ಸುಟ್ಟು ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.  

ಸರಕಾರದ ಪ್ರಸ್ತಾಪಿತ ಔಟರ್ ರಿಂಗ್ ರಸ್ತೆಗೆ ಭೂಮಿ ಕಳೆದುಕೊಳ್ಳುತ್ತಿರುವ 26 ಹಳ್ಳಿಗಳ ಎಲ್ಲ ಜನರು ಜಾತಿ, ಧರ್ಮ, ಭಾಷೆ, ತತ್ವ ಸಿದ್ದಾಂತಗಳನ್ನು ಬದಿಗಿಟ್ಟು, ಒಗ್ಗೂಡಿ ತಮಗೆ ಆಗುತ್ತಿರುವ ಅನ್ಯಾಯದ ವಿರುದ್ದ ಗಾಂಧೀಯ ಸತ್ಯ, ಅಹಿಂಸೆ ಮಾರ್ಗದಲ್ಲಿ ಹೋರಾಟ ನಡೆಸಿದರೆ ನಿಜವಾಗಿಯೂ ಗೆಲುವು ಸಾಧಿಸಬಹುದು ಎಂದು ಏಕತಾ ಪರಿಷತ್‌ನ ಸಂಸ್ಥಾಪಕರು ಹಾಗೂ ಗಾಂಧಿ ಪ್ರತಿಷ್ಠಾನದ ಅಧ್ಯಕ್ಷ ಪಿ.ಬಿ.ರಾಜಗೋಪಾಲ್ ತಿಳಿಸಿದರು

ತುಮಕೂರು ತಾಲೂಕು ಶೂಲದ ಆಂಜನೇಯ ದೇವಾಲಯದ ಬಳಿ ಭೂ ಬಳಕೆ ಮತ್ತು ಭೂ ಹೊದಿಕೆ ನೀತಿಗೆ ಒತ್ತಾಯಿಸಿ, ಅವೈಜ್ಞಾನಿಕ ರಿಂಗ್ ರಸ್ತೆ ವಿರೋಧಿಸಿ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ  ಅವರು, ಒಂದು ಯೋಜನೆಯಿಂದ ಜನರ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಸಾಮಾಜಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸದೆ, ರೈತರೊಂದಿಗೆ ಸಮಾಲೋಚನೆ ನಡೆಸದೆ ರಚಿಸಿರುವ ಡಿಪಿಆರ್ ಅತ್ಯಂತ ಅವೈಜ್ಞಾನಿಕವಾಗಿದ್ದು,ಇದರ ವಿರುದ್ದದ ಹೋರಾಟ ನ್ಯಾಯಯುತವಾಗಿದೆ. ಹಾಗಾಗಿ ನಿಮ್ಮ ಹೋರಾಟದ ಜೊತೆಗೆ ನಾನು ಸದಾ ಇದ್ದೇ ಇರುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002799088

ವಿದ್ಯಾವಂತ ಯುವಜನರು ಈ ರೀತಿಯ ಅನ್ಯಾಯಕ್ಕೆ ಒಳಗಾದ ರೈತರು, ಕಾರ್ಮಿಕರು ಹಾಗೂ ಜನರ ದ್ವನಿಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸವನ್ನು ಮಾಡಬೇಕಿದೆ. ಈ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಪ್ರಶ್ನಿಸುವ, ಅದರ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಡಾ.ಮಂಜುನಾಥ್ ಮಾಡಿದ್ದಾರೆ.ಡಿಪಿಆರ್‌ನಲ್ಲಿರುವ ಎಲ್ಲಾ ತಪ್ಪುಗಳನ್ನು ಎತ್ತಿ ತೋರಿಸುವ ಮೂಲಕ ನಿಮ್ಮ ಹೋರಾಟಕ್ಕೆ ಮತ್ತಷ್ಟು ಪುಷ್ಠಿ ನೀಡಿದ್ದಾರೆ. ಹಾಗಾಗಿ ವ್ಯವಸ್ಥೆಯ ವಿರುದ್ದ ನಾವೆಲ್ಲರೂ ಹೋರಾಟಕ್ಕೆ ಮುಂದಾಗಬೇಕಿದೆ. ನಿಮ್ಮ ದ್ವನಿಯನ್ನು, ಪ್ರತಿರೋಧವನ್ನು ಆಳುವವರ ಮಟ್ಟಕ್ಕೆ ತಲುಪಿಸಲು ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದು ಪಿ.ವಿ.ರಾಜಗೋಪಾಲ್ ಆಭಯ ನೀಡಿದರು.

ಚಿತ್ರನಟ ಹಾಗೂ ಪರಿಸರವಾದಿ ಸುರೇಶ ಹೆಬ್ಲಿಕರ್ ಮಾತನಾಡಿ, ರೈತರ ಕೃಷಿ ಭೂಮಿಯನ್ನು ಭೂ ಸ್ವಾಧೀನ ಪಡಿಸಿಕೊಂಡು ನಡೆಸುವ ಯಾವುದೇ ಅಭಿವೃದ್ದಿ ಯೋಜನೆಯೂ ಪರಿಸರ ಸ್ನೇಹಿಯಾಗಿರಲು ಸಾಧ್ಯವಿಲ್ಲ. ಮುಂದೊಂದು ದಿನ ನಾವು ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಬಹುದು.ಇದರ ಬಗ್ಗೆ ಯುವಜನರಿಗೆ ಪರಿಜ್ಞಾನವೇ ಇಲ್ಲದಂತಾಗಿದೆ. ಔಟರ್ ರಿಂಗ್ ರಸ್ತೆಯಿಂದ ಈ ಭಾಗದ ಲಕ್ಷಾಂತರ ಜನರು ಊಟ ಕಳೆದುಕೊಳ್ಳುವುದರ ಜೊತೆಗೆ, ಜನರ ಬದುಕು ಬೀದಿಗೆ ಬೀಳಲಿದೆ. ನಿಮ್ಮ ಹೋರಾಟ ಪ್ರಜಾಸತ್ತಾತ್ಮಕವಾಗಿ ಇದ್ದರೆ ಎಂತಹ ಸರಕಾರಗಳು ಮಣಿಯಲೇ ಬೇಕು. ನಮ್ಮ ಮುಂದೆ ಅನೇಕ ಉದಾಹರಣೆಗಳಿವೆ ಎಂದರು.

1002799084

ಗಾಂಧಿ ಸಹಜ ಬೇಸಾಯ ಆಶ್ರಮದ ಸಂಸ್ಥಾಪಕ ಡಾ.ಮಂಜುನಾಥ್ ಮಾತನಾಡಿ,ಒಂದು ಯೋಜನೆಯ ಕುರಿತ ವಿಸೃತ ವರದಿ(ಡಿಪಿಆರ್), ಈ ಯೋಜನೆಗೆ ಭೂಮಿ ಕಳೆದುಕೊಳ್ಳುವ ರೈತರಿಗೆ ತಿಳಿದಿರಬೇಕು.ಆದರೆ ಈ ಯೋಜನೆ ಕುರಿತು ಭೂಮಿ ಕಳೆದುಕೊಳ್ಳುವ ರೈತರಷ್ಟೇ ಅಲ್ಲ,ರೈತ ಸಂಘಟನೆಗಳು, ಹೋರಾಟಗಾರರನ್ನು ಎಲ್ಲರನ್ನು ಕತ್ತಲೆಯಲ್ಲಿ ಇಡಲಾಗಿದೆ. ರೈತರೊಂದಿಗೆ ಚರ್ಚೆ ನಡೆಸದೆ,ಪಂಚಾಯಿತಿಗಳಿಂದ ಎನ್.ಓ.ಸಿ. ಪಡೆಯದೆ,ವಿವಿಧ ಇಲಾಖೆಗಳೊಂದಿಗೆ, ರೈತರೊಂದಿಗೆ ಚರ್ಚೆ ನಡೆಸದೆ, ಡಿಪಿಆರ್. ತಯಾರಿಸಿ, ಎಲ್ಲ ರೀತಿಯ ಕಾನೂನು ನಿಯಮಗಳನ್ನು ಗಾಳಿಗೆ ತೂರಿ, ಕೇಂದ್ರ ಸರಕಾರಕ್ಕೆ ತಪ್ಪು ಮಾಹಿತಿ ನೀಡಿ,ಅನುಮೋದನೆ ಪಡೆಯಲಾಗಿದೆ.ಹಾಗಾಗಿ ಇದೊಂದು ಜನವಿರೋಧಿ, ರೈತವಿರೋಧಿ, ಪರಿಸರ ವಿರೋಧಿ ಡಿಪಿಆರ್ ಆಗಿದೆ ಎಂಬ ಆಂಶವನ್ನು ಸಂತ್ರಸ್ಥ ರೈತರ ಮುಂದಿಟ್ಟರು.

ಪರಿಸರವಾದಿ ಹಾಗೂ ಸಂಯುಕ್ತ ಹೋರಾಟ-ಕರ್ನಾಟಕದ ಸಂಚಾಲಕ ಸಿ.ಯತಿರಾಜು ಮಾತನಾಡಿ,ಜಗತ್ತಿನಲ್ಲಿ ಬದುಕಿರುವ ಜನಸಂಖ್ಯೆಗೂ,ಲಭ್ಯವಿರುವ ಭೂಮಿಗೆ ಅಜಗಜಾಂತರ ವೆತ್ಯಾಸವಿದೆ.ಅಲ್ಲದೆ ಲಭ್ಯ ವಿರುವ ಭೂಮಿಯ ಶೇ.40ರಷ್ಟು ಭೂಮಿ ಬಂಜರು ಬಿದ್ದಿದೆ.ಹಾಗಾಗಿ ಭೂಮಿಯ ಬೆಲೆ ಗಗನಕ್ಕೇರುತ್ತಿದ್ದು, ಸರಕಾರದ ಯೋಜನೆಗಳಿಗೆ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಇದರ ವಿರುದ್ದ ನಾವೆಲ್ಲರೂ ನಿರ್ಣಾಯಕ ಹೋರಾಟಕ್ಕೆ ಮುಂದಾಗಬೇಕಿದೆ ಎಂದರು.

1002799086

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಚಿಂತಕ ಕೆ.ದೊರೆರಾಜು ಮಾತನಾಡಿ, ಗಾಂಧಿ ಮಾರ್ಗದಲ್ಲಿ ನಡೆದರೆ, ನಮ್ಮ ಹೋರಾಟ ನಿಜಕ್ಕೂ ಸತ್ಯದಿಂದ ಕೂಡಿದ್ದರೆ ಗೆಲುವು ನಮ್ಮದೆ. ಆಳುವ ಸರಕಾರಗಳು ನಮ್ಮನ್ನು ಬೆದರಿಸುವ, ಹಿಬ್ಬಾಗಿಸುವ ಕೆಲಸವನ್ನು ಮಾಧ್ಯಮಗಳು, ಪೊಲೀಸ್ ಮೂಲಕ ಮಾಡುತ್ತಲೇ ಬಂದಿವೆ.ಹಾಗಾಗಿ ಈ ಎಚ್ಚರಿಕೆಯನ್ನು ಇಟ್ಟುಕೊಂಡೇ ಹೋರಾಟ ರೂಪಿಸಬೇಕಾಗಿದೆ ಎಂದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ವಿಭಾಗೀಯ ಕಾರ್ಯದರ್ಶಿ ದೊಡ್ಡಮಾಳಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ, ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ಎಐಕೆಕೆಎಂಎಸ್‌ನ ಎಸ್.ಎನ್ ಸ್ವಾಮಿ,ಎಐಕೆಎಸ್ ಕಂಬೇಗೌಡ, ಪಂಡಿತ್ ಜವಹರ್, ದೊಡ್ಡನಂಜಯ್ಯ, ಲೋಕೇಶ್.ಬಿ., ರವೀಶ್ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...