ತುಮಕೂರು | ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

Date:

ಸುಪ್ರಿಂ ಕೋರ್ಟಿನ ಆದೇಶದಂತೆ ಹಾಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕು, ನೇರ ಪಾವತಿ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್‌ಷಎಂ.ಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಮಂಜುಳ ಅವರ ನೇತೃತ್ವದಲ್ಲಿ ನೂರಾರು ಹೊರಗುತ್ತಿಗೆ ನೌಕರರು ಜಿಲ್ಲಾಸ್ಪತ್ರೆ ಯಿಂದ ಟೌನ್‌ಹಾಲ್, ಅಶೋಕರಸ್ತೆ,ಚರ್ಚ್ ಸರ್ಕಲ್,ಗುಂಚಿ ಸರ್ಕಲ್, ಶ್ರೀರಾಮನಗರ ರಸ್ತೆ, ಡಿ.ಹೆಚ್.ಓಕಚೇರಿ ಮುಂಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ,ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್‌ ಎಂ.ಗೌಡ, ಅಯುಷ್ಮಾನ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನೌಕರರು ಕೆಲಸ ಮಾಡುತಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸರಕಾರ ನಮ್ಮ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಸೇವಾ ಭದ್ರತೆಯ ಅನುಮಾನ ಮೂಡುವಂತೆ ಮಾಡಿದೆ. ಸರಕಾರದ ಕೆಲಸ ಮಾಡುತ್ತಿರುವ ನಮ್ಮ ಸೇವೆಗೆ ಭದ್ರತೆ ನೀಡಬೇಕಾದ್ದು, ಆಳುವ ಸರಕಾರಗಳ ಜವಾಬ್ದಾರಿಯಾಗಿದೆ.ನಮಗೂ ಸಂಸಾರ, ಹೆಂಡತಿ, ಮಕ್ಕಳು, ಅವರಆರೋಗ್ಯ,ವಿದ್ಯಾಬ್ಯಾಸ, ಮನೆ ಖರ್ಚು, ವೆಚ್ಚಗಳನ್ನು ನೋಡಿಕೊಳ್ಳಬೇಕಾದ ಗುರುತರ ಜವಾಬ್ದಾರಿ ಇದೆ. ಹಾಗಾಗಿ ನಮ್ಮ ಸೇವೆಯನ್ನು ಖಾಯಂ ಗೊಳಿಸಬೇಕು.ಅಲ್ಲಿಯವರೆಗೆ ನಮ್ಮನ್ನು ನೇರ ಪಾವತಿಗೆ ಒಳಪಡಿಸಬೇಕು.ಹೊರಗುತ್ತಿಗೆ ನೌಕರರ ಬಗ್ಗೆ ಇರುವಗೊಂದಲವನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002863442

ಕರ್ನಾಟಕರಾಜ್ಯಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುಳ ಮಾತನಾಡಿ,ಇತ್ತೀಚಗೆ ತುಮಕೂರಿನಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಹಂತದ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿತ್ತು.ಅದರಂತೆ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ.ಸರಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಬೆಂಗಳೂರಿನ ಪ್ರಿಡಂ ಪಾರ್ಕಿನಲ್ಲಿ ಕೈಗೊಳ್ಳಲಾಗುವುದು ಎಂದರು.

ಪ್ರತಿಭಟನೆಗೆ ಬೆಂಬಲ ವ್ಯಕ್ತ ಪಡಿಸಿ ಮಾಜಿ ಸಚಿವ ಸೊಗಡು ಶಿವಣ್ಣ ಪಾಲ್ಗೊಂಡಿದ್ದರು.

 ಪ್ರತಿಭಟನೆಯಲ್ಲಿಕರ್ನಾಟಕರಾಜ್ಯಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದರಾಜ್ಯ ಪ್ರಧಾನಕಾರ್ಯದರ್ಶಿ ಮಂಜುಳ, ರಾಜ್ಯ ಸಮಿತಿ ಸದಸ್ಯರಾದ ಸಿದ್ದಪ್ಪ,ರವೀಶ್, ಯೋಗೀಶ್, ತುಮಕೂರುಜಿಲ್ಲಾಧ್ಯಕ್ಷ ಶಿವರಾಮ್, ಪ್ರಧಾನ ಕಾರ್ಯದರ್ಶಿ ಸತೀಶಕುಮಾರ್ ಸೇರಿದಂತೆ ನೂರಾರು ಹೊರಗುತ್ತಿಗೆ ನೌಕರರು ಪಾಲ್ಗೊಂಡಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...