ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

Date:

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಿಂಗ ಸೂಕ್ಷ್ಮತೆಯಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕಿವಿಮಾತು ಹೇಳಿದ್ದಾರೆ. 

ಜಿಲ್ಲೆಯ ಬಾಲಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಹಿಳೆಯರ ದೂರು ಹಾಗೂ ಅಹವಾಲುಗಳನ್ನು ಆಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ಅವರು, ದೌರ್ಜನ್ಯಕ್ಕೊಳಗಾದ ಮಹಿಳೆಯರು ಪೊಲೀಸ್ ಠಾಣೆಗಳಿಗೆ ಹೋದ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಮಹಿಳೆಯರಿಗೆ ಸೌಜನ್ಯದ ಮಾತುಗಳನ್ನಾಡದೆ ಅಗೌರವದಿಂದ ನಡೆಸಿಕೊಂಡ ಬಗ್ಗೆ ಸಭೆಯಲ್ಲಿ ಕೆಲವು ಪ್ರಕರಣಗಳನ್ನು ಗಮನಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಥವಾ ಯಾವುದೇ ಸರ್ಕಾರಿ ಇಲಾಖೆ ವ್ಯವಹರಿಸುವಾಗ ಲಿಂಗ ಸೂಕ್ಷ್ಮತೆಯನ್ನು ಅರಿಯಬೇಕು ಎಂದು  ಹೇಳಿದರು. 

ಮಹಿಳೆಯರಿಗೆ ಸರಿಯಾದ ಸ್ಪಂದನೆ ಸಿಗಬೇಕೆಂಬ ಹಿನ್ನೆಲೆಯಲ್ಲಿ ಹಾಗೂ ಸಂಬಂಧಿಸಿದ ಅಧೀನ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡುವಂತೆ ತಿಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002969045

ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಅಥವಾ ಇನ್ನಿತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರಿಯಾದ ಸ್ಪಂದನೆ ಸಿಗದಿದ್ದರೆ ಇಲಾಖೆ ಬಗ್ಗೆ ಜನರಲ್ಲಿ ವಿಶ್ವಾಸ ಹೋಗುತ್ತದೆ. ಅಂತಹ ಕಳಂಕವನ್ನು ತರದಂತೆ ಅಧೀನ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು. 

ಇಂದಿನ ಅಹವಾಲು ಸ್ವೀಕಾರ ಸಭೆಯಲ್ಲಿ ಮಹಿಳೆಯರ ಸಾಕಷ್ಟು ಸಮಸ್ಯೆಗಳಿಗೆ ಸ್ಪಂದನೆ ಸಿಕ್ಕಿದೆ ಎಂಬ ವಿಶ್ವಾಸ ನನಗಿದೆ. ಸಂಬಂಧಿಸಿ ಇಲಾಖೆಗಳ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಅಹವಾಲುಗಳಿಗೆ ಉತ್ತರ ನೀಡಿದ್ದಾರೆ ಹಾಗೂ ಸಮಸ್ಯೆಗೆ ಸ್ಪಂದನೆ ನೀಡಿದ್ದಾರೆ ಎಂದ ಅವರು, ಪ್ರತಿ ಬಾರಿ ಮಹಿಳಾ ಆಯೋಗವೇ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಮನಸ್ಥಿತಿಯನ್ನು ಅಧಿಕಾರಿಗಳು ಬದಿಗಿರಿಸಿ ತಮ್ಮ ವ್ಯಾಪ್ತಿಯಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ ಹಾಗೂ ಅವರ ಸಮಸ್ಯೆಗೆ ಸ್ಪಂದನೆಯನ್ನು ನೀಡಬೇಕಿದೆ ಎಂದರು. 

ತಿಂಗಳಿಗೊಮ್ಮೆಯಾದರೂ ಪಂಚಾಯ್ತಿ ಮಟ್ಟದಲ್ಲಿ ಮಹಿಳೆಯರ ಗ್ರಾಮ ಸಭೆ ನಡೆಸಿದಲ್ಲಿ ಮಹಿಳೆಯರ ಎಷ್ಟೋ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದ ಅವರು, ಈ ಸಂಬಂಧ ಸರ್ಕಾರಕ್ಕೂ ಹಾಗೂ ಜಿಲ್ಲಾಡಳಿತಕ್ಕೂ ಪತ್ರ ಬರೆಯುವುದಾಗಿ ಡಾ. ನಾಗಲಕ್ಷ್ಮೀ ಚೌದರಿ ಅವರು ತಿಳಿಸಿದರು. 

ಜಿಲ್ಲಾ ಸಾಂತ್ವನ ಕೇಂದ್ರ ಹಾಗೂ ಸಖಿ ಕೇಂದ್ರಗಳಿಂದ ಮಹಿಳೆಯರಿಗೆ, ತಾಯಂದಿರಿಗೆ ಸಹಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚದಂತೆ ಆಯೋಗವು ಸರ್ಕಾರಕ್ಕೆ ಪತ್ರ ಬರೆಯಲಿದೆ ಎಂದರು. 

ರಾಜ್ಯದಾದ್ಯಂತ 29 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ರಾಯಚೂರು ಬಿಟ್ಟರೆ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮಹಿಳಾ ಸಮಸ್ಯೆಗಳನ್ನು ಹಾಗೂ ದೂರುಗಳನ್ನು ಸ್ವೀಕರಿಸಲಾಗಿದೆ. ಬಾಣಂತಿಯರನ್ನೂ ಊರಿಂದ ಹೊರಗಿಡುವ ಅನಿಷ್ಠ ಪದ್ಧತಿ ಈ ಜಿಲ್ಲೆಯಲ್ಲಿ ಇದ್ದು, ಈ ಮೌಢ್ಯವನ್ನು ತೊಡೆದು ಹಾಕಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಕಾನೂನನ್ನು ನಿರ್ಧಾಕ್ಷಿಣ್ಯವಾಗಿ ಜಾರಿಗಳಿಸಿದಾಗ ಮಾತ್ರ ಮೌಢ್ಯತೆಯ ಜನರಲ್ಲಿ ಜಾಗೃತಿ ಮೂಡಲಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ತಕ್ಷಣ ಕ್ರಮ ವಹಿಸಬೇಕಿದೆ ಎಂದರು. 

1002969046

ಪ್ರಸಕ್ತ ವಿಶ್ವ ಮಹಿಳಾ ದಿನಾಚರಣೆಯ ಘೋಷವಾಕ್ಯ “ಹಕ್ಕು, ನ್ಯಾಯ ಮತ್ತು ಕ್ರಮ” ಎಂಬುದೇ ಆಗಿದೆ. ಮಹಿಳೆಯರು ಈ ನಿಟ್ಟಿನಲ್ಲಿ ತಮ್ಮ ಹಕ್ಕಿಗಾಗಿ, ನ್ಯಾಯ ಪಡೆಯುವುದಕ್ಕಾಗಿ ಹಾಗೂ ತಮ್ಮ ಬದುಕಿನಲ್ಲಿ ನೆಮ್ಮದಿ ತಂದುಕೊಳ್ಳುವುದಕ್ಕಾಗಿ ಕಾನೂನಿನ ಜ್ಞಾನ ಪಡೆಯಬೇಕು ಎಂಬುದು ಆಯೋಗದ ಆಶಯ ಎಂದು ಹೇಳಿದರು. 

ಇದಕ್ಕೂ ಮುನ್ನ ಬೆಳಿಗ್ಗೆ 11 ಗಂಟೆಯಿಂದ ಆರಂಭವಾದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಹಾಗೂ ವಿಕಲಚೇತನರು ವಿವಿಧ ಸಮಸ್ಯೆಗಳನ್ನು ಮುಂದಿರಿಸಿಕೊಂಡು ಅಧ್ಯಕ್ಷರ ಮುಂದೆ ತಮ್ಮ ಅಹವಾಲುಗಳನ್ನು ಇಟ್ಟರು. ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಹಲವಾರು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಯಿತು. 

ಕೌಟುಂಬಿಕ ಕಲಹಗಳು, ಆಸ್ತಿ ವಿವಾದಗಳು, ವಂಚನೆ ಹಾಗೂ ಮಹಿಳಾ ದೌಜ್ಯನ್ಯ ಪ್ರಕರಣಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅಹವಾಲುಗಳು ಸಭೆಯಲ್ಲಿ ವ್ಯಕ್ತವಾದವು. 

ತುಮಕೂರಿನ ಹನುಮಂತಪುರದ ನಾಗಮಣಿ ಎಂಬ ಮಹಿಳೆ ತಮ್ಮ 3 ತಿಂಗಳ ಮಗುವಿನೊಂದಿಗೆ ಆಗಮಿಸಿ ಮಹಿಳೆಯರ ಕ್ಷೇಮಾಭಿವೃದ್ದಿಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಮಹಿಳೆಯರಿಗೆ ಶಕ್ತಿಯಾಗಿರುವ ಆಯೋಗದ ಅಧ್ಯಕ್ಷರಾದ ತಾವು ತಮ್ಮ ಮಗುವಿಗೆ ನಾಮಕರಣ ಮಾಡಬೇಕೆಂದು ಕೋರಿಕೆಯಿಟ್ಟಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಚಿರಾಗ್ ಎಂದು ನಾಮಕರಣ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಈಶ್ವರಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ತುಮಕೂರು ಮಹಾನಗರಪಾಲಿಕೆ ಆಯುಕ್ತೆ ಶುಭ ಬಿ., ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ. ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಪಾವನಭೂಮಿ ಆಶಯ ಈಡೇರಿಸಲು ಶ್ರಮಿಸೋಣ : ನುಡಿನಮನ

ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ...