ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

Date:

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು ಹಾಗೂ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ಜಲಕ್ರೀಡಾ ಕೇಂದ್ರಗಳನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.

ಜಿಲ್ಲಾಡಳಿತ, ಪಂಚಾಯತ್, ಯುವ ಸಬಲೀಕರಣ‌ ಮತ್ತು  ಕ್ರೀಡಾ ಇಲಾಖೆ, ತುಮಕೂರು ಮಹಾನಗರ ಪಾಲಿಕೆ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಉದ್ಘಾಟಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತುಮಕೂರಿನ ಯುವ ಸಮುದಾಯ ಹಾಗೂ ಕ್ರೀಡಾಸಕ್ತರಿಗೆ ಉತ್ತಮ ಸೌಲಭ್ಯಗಳಿರುವ ಕ್ರೀಡಾಂಗಣಗಳ ಅವಶ್ಯ ಇತ್ತು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯಗಳಿರುವ ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣ, ಟೆನ್ನಿಸ್ ಅಂಕಣಗಳನ್ನು ನುರಿತ ಕ್ರೀಡಾ ತಜ್ಞರ ಮಾರ್ಗದರ್ಶನದಲ್ಲಿ ನಿರ್ಮಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002984734

ಅಲ್ಲದೆ ಜಿಲ್ಲಾ ಕೇಂದ್ರದ ಹೃದಯಭಾಗದಲ್ಲಿ ಇಷ್ಟು ವಿಶಾಲವಾದ ಸುಂದರ ಕೆರೆ ಎಲ್ಲ ಜಿಲ್ಲೆಗಳಲ್ಲಿ ಇಲ್ಲ. ಇರುವ ಅವಕಾಶಗಳನ್ನು ಇಲ್ಲಿ ಬಳಸಿಕೊಂಡ ಜಲಕ್ರೀಡಾ ಸ್ಪರ್ಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ತರಬೇತಿ ಕೇಂದ್ರ ಆರಂಭಿಸಲಾಗಿದೆ ಎಂದರು.

 ಬೇಸಿಗೆ ರಜೆಗಳನ್ಮು ವ್ಯರ್ಥವಾಗಿ ಕಳೆಯದೆ ನಮ್ಮ ಜಿಲ್ಲೆಯ ಮಕ್ಕಳು ಅರ್ಥಪೂರ್ಣವಾಗಿ ಕಳೆಯಬೇಕು. ಪೋಷಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.

ತುಮಕೂರು ಇತ್ತೀಚಿನ ದಿನಗಳಲ್ಲಿ ಕ್ರೀಡಾ ಹಬ್ ಆಗಿದೆ. ಈಗಾಗಲೇ ಜಿಲ್ಲಾ ಕ್ರೀಡಾ ಹಾಸ್ಟೆಲ್ ಇದ್ದು ಮತ್ತೊಂದು ಕ್ರೀಡಾ ಹಾಸ್ಟೆಲ್ ಸ್ಥಾಪನೆಗೆ ಚಿಂತನೆ ಇದೆ ಎಂದರು.

ತುಮಕೂರು ಜಿಲ್ಲಾದ್ಯಂತ ವಿವಿಧ ತಾಲೂಕುಗಳಲ್ಲಿ ನಡೆಯುತ್ತಿರುವ ಜನಸಂಪರ್ಕ ಸಭೆ ಯಶಸ್ವಿಯಾಗುತ್ತಿದೆ. ಗುಬ್ಬಿ, ಶಿರಾ, ಕೊರಟಗೆರೆ ತಾಲೂಕುಗಳಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಇದನ್ನು ಆಧಾರ್ ಅದಾಲತ್ ರೀತಿಯಲ್ಲಿ ನಿರಂತರವಾಗಿ ಹಮ್ಮಿಕೊಳ್ಳಲು ಚಿಂತನೆ ಇದೆ. ಪೌತಿ ಖಾತೆ ಆಂದೋಲನ ಕೂಡ ಹಮ್ಮಿಕೊಳ್ಳಲಾಗುವುದು. ಈ ವಾರದಲ್ಲಿ 10 ಸಾವಿರ ಆನ್ ಲೈನ್ ನಲ್ಲಿ ಪೌತಿ ಖಾತೆ ಮಾಡಿದ್ದೇವೆ. ಜನಸಂಪರ್ಕ ಸಭೆಯಲ್ಲಿ ಸ್ಥಳದಲ್ಲೇ ಕೆಲವು ಪರಿಹಾರಗಳು ಆಗಿವೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಎಂಟಿಸಿ ನಿಗಮದ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎ.ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶೋಭ ಸಿ., ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಉಮೇಶ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...

ತುಮಕೂರು | ಪಾವನಭೂಮಿ ಆಶಯ ಈಡೇರಿಸಲು ಶ್ರಮಿಸೋಣ : ನುಡಿನಮನ

ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ...