ತುಮಕೂರು | ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸುವವರ ವಿರುದ್ಧ ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

Date:

 ಭೂಮಿಗೆ ಬಂಗಾರದ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಕೂಡಲೇ ಪೊಲೀಸ್ ದೂರು ದಾಖಲಿಸುವುದರ ಜೊತೆಗೆ ಅರಣ್ಯ ಅಪರಾಧ ಕಾಯಿದೆಯಡಿಲ್ಲಿಯೂ ಪ್ರಕರಣ ದಾಖಲಿಸುವಂತೆ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತç ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ತುಮಕೂರಿನಲ್ಲಿ ಡಿಸೆಂಬರ್ 26ರ ಸಂಜೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಬಯಲು ಸೀಮೆ ಇಲ್ಲಿ ಇರುವ ಅರಣ್ಯ ಪ್ರದೇಶವೇ ಕಡಿಮೆ. ಇದರಲ್ಲಿ ಒತ್ತುವರಿಯೂ ಆಗಿದೆ. ಜೊತೆಗೆ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯದ ಮೇಲೆ ಹಕ್ಕು ಚಲಾಯಿಸುತ್ತಿದ್ದರೆ, ಇನ್ನು ಕೆಲವು ಕಡೆ ಅಕ್ರಮ ಮಂಜೂರಾತಿ ಆಗಿದೆ ಈ ಬಗ್ಗೆ ಅರಣ್ಯಾಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ತುಮಕೂರು ಜಿಲ್ಲೆಯ 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಚಿರತೆ–ಮಾನವ ಸಂಘರ್ಷವಿದ್ದು ಜನ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಈಶ್ವರ ಖಂಡ್ರೆ ಕೂಡಲೇ 31 ಹೊಸ ಬೋನುಗಳನ್ನು ಖರೀದಿಸಲು ಸಮ್ಮತಿ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಗ್ರಾಮದ ಬಳಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಬಂದರೆ ಕೂಡಲೇ ವನ್ಯಜೀವಿ ವಿಭಾಗದ ಸಿಬ್ಬಂದಿ ಕಳಿಸಿ, ಪರಿಶೀಲಿಸಿ ಚಿರತೆ ಸಂಚಾರ ಖಚಿತವಾದರೆ, ಬೋನುಗಳನ್ನು ಇಡಲು ತುರ್ತು ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು.

ಕ್ಷೀಣಿಸಿದ ಅರಣ್ಯಗಳಲ್ಲಿ ಬರುವ ಮುಂಗಾರಿನಲ್ಲಿ ಸಸಿ ನೆಟ್ಟು ಅರಣ್ಯ ಸಂವರ್ಧನೆ ಮಾಡಲೂ ಸೂಚಿಸಿದ ಅವರು ನಗರ ಪ್ರದೇಶಗಳ ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲು ಕ್ರಮ ವಹಿಸಬೇಕು, ರಸ್ತೆ ಬದಿಯ ಸಸಿಗಳ ಸುತ್ತ ಕನಿಷ್ಠ 3 ಅಡಿ ಮಣ್ಣಿಸುವಂತೆ ನಿಗಾ ವಹಿಸಬೇಕು, ಎಷ್ಟು ಸಸಿ ಬದುಕಿ ಉಳಿದಿವೆ ಎಂಬ ಬಗ್ಗೆ ಆಡಿಟ್ ಮಾಡಿಸಬೇಕು ಹಾಗೆ ತಿಪಟೂರಿನಲ್ಲಿ ಕಮಾಂಡ್ ಸೆಂಟರ್ ತೆರೆಯಲು ಕ್ರಮ ವಹಿಸುವಂತೆಯೂ ಸಚಿವರು ತಿಳಿಸಿದರು.

ಸಭೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕೊಂಡಲ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...