ತುಮಕೂರು | ಕನ್ನಡ ಸಿನಿಮಾಗಳಿಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ: ಬರಗೂರು ರಾಮಚಂದ್ರಪ್ಪ

Date:

ಜನರನ್ನು ತಲುಪಲು, ನಿರ್ಮಾಪಕರಿಗೆ ಹಣ ಒದಗಿಸುವ ಉದ್ದೇಶದಿಂದ ಸಮುದಾಯದತ್ತ ಸಿನಿಮಾ ಚಿತ್ರಯಾತ್ರೆ ಆರಂಭಿಸಲಾಗಿದೆ ಎಂದು ನಿರ್ದೇಶಕ, ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ತಿಳಿಸಿದರು.

 ತುಮಕೂರಿನ ಕನ್ನಡ ಭವನದಲ್ಲಿ ಜನ ಮಿತ್ರ ಮೂವೀಸ್ ವತಿಯಿಂದ ಹಮ್ಮಿಕೊಂಡಿದ್ದ ‘ಸಮುದಾಯದತ್ತ ಸಿನಿಮಾ–ರಾಜ್ಯಾದ್ಯಂತ ಚಿತ್ರಯಾತ್ರೆ ಚಾಲನೆಯಲ್ಲಿ ಆಶಯ ನುಡಿಗಳನ್ನಾಡಿದರು. 

‘ಚಿತ್ರಯಾತ್ರೆ ಪರಿಕಲ್ಪನೆ ರೂಪಿಸಿ, ಜನರ ಹತ್ತಿರ ಸಿನಿಮಾ ತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ರಾಜ್ಯದ ಎಲ್ಲ ಕಡೆ ಈ ಯಾತ್ರೆ ನಡೆಯಲಿದೆ. ಜಿಲ್ಲೆಯಲ್ಲಿ ಮೊದಲ ಕಾರ್ಯಕ್ರಮ ಆಯೋಜಿಸಲಾಗಿದ್ದು, ‘ತಾಯಿ ಕಸ್ತೂರ್ ಗಾಂಧಿ’ ಸಿನಿಮಾ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬೇರೆ ಬೇರೆ ವಿಭಾಗದಲ್ಲಿ ಚಿತ್ರ ಪ್ರಶಸ್ತಿ ಪಡೆದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಪರ್ಯಾಯ ಸಿನಿಮಾ ಎದುರಿಸುವ ಸವಾಲು ದುಪ್ಪಟ್ಟಾಗಿದೆ. ಸಿನಿಮಾ ವೀಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಮಲ್ಟೆಪ್ಲೆಕ್ಸ್  ನಲ್ಲಿ ಒಂದು ವಾರ ಸಿನಿಮಾ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಕನ್ನಡ ಸಿನಿಮಾಗಳಿಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ. ಇದಕ್ಕಾಗಿ ಸರ್ಕಾರ ಮಿನಿ ಚಿತ್ರ ಮಂದಿರ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಚಿಂತಕ ಚ.ಹ.ರಘುನಾಥ ಚಿತ್ರಯಾತ್ರೆಗೆ ಚಾಲನೆ ನೀಡಿ ಮಾತನಾಡಿ ಸಾಹಿತಿ ಬರಗೂರು ರಾಮಚಂದ್ರಪ್ಪನವರು ತಾಯಿ ಕಸ್ತೂರ್ ಗಾಂಧಿ ಸಿನಿಮಾದ ಆಶಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸಿನಿಯಾತ್ರೆ ಆರಂಭಿಸಿರುವುದು ವಿಶೇಷ ಮನುಷ್ಯ ಸಂವೇಧನೆ ಸಂಬAಧಗಳನ್ನು ಬೆಸೆಯುವ ವಿಶೇಷ ಯಾತ್ರೆ ಸಹ. ಗಾಂಧಿಯನ್ನು ಜನರಿಗೆ ಹತ್ತಿರ ಮಾಡಿಸುವ ಯಾತ್ರೆ ಕೂಡ ಆಗಿದೆ. ಮನರೇಗಾದಿಂದ ಗಾಂಧಿ ಹೆಸರನ್ನು ತೆಗೆದು ವಿರೂಪಗೊಳಿಸಿರುವ ಸಂದರ್ಭದಲ್ಲಿ ಗಾಂಧಿ ನೆನಪುಗಳನ್ನು ತಾಯಿ ಕಸ್ತೂರ್ ಗಾಂಧಿ ಸಿನಿಮಾ ಯಾತ್ರೆ ಮೂಲಕ ಮತ್ತಷ್ಟು ಆಪ್ತಗೊಳಿಸುವ ಕೆಲಸ ನಡೆದಿರುವುದು ಗಮನಾರ್ಹ ಎಂದರು.

1002699627

ಗಾಂಧೀಜಿಯವರ ಬಗ್ಗೆ ಯುವಜನತೆಯಲ್ಲಿ ನಕರಾತ್ಮಕ ಅಂಶಗಳನ್ನು ಪ್ರಚುರಪಡಿಸಿ ಅಪ್ರಸ್ತುತಗೊಳಿಸಲು ಅವಣಿಸುತ್ತಿರುವ ಸಂದರ್ಭದಲ್ಲಿ ಗಾಂಧಿ ವ್ಯಕ್ತಿತ್ವವನ್ನು ಅನಾವರಣಗೊಳಿಸುವ ಈ ಸಿನಿಮಾ ಸಾಹಸ ಯಾತ್ರೆ ಬಹುಮುಖ್ಯ. ಗಾಂಧಿ ವ್ಯಕ್ತತ್ವದ ತುಣುಕು ಹಾಗೂ ಛಾಯೆ ಬರಗೂರರಲ್ಲಿದೆ. ಈ ಕಾರಣಕ್ಕಾಗಿ ಈ ಸಿನಿಮಾ ವಿಶೇಷ.  ಹೆಣ್ಣಿನ ಸಂವೇದನೆ, ತಾಯಿ ಕರುಳು ಇಲ್ಲದೆ ಜನಪರ ಲೇಖಕನಾಗಲು ಸಾಧ್ಯವಿಲ್ಲ. ಬರಗೂರರಲ್ಲಿ ಎರಡು ಅಂಶಗಳು ಇವೆ. ಬರಗೂರರು ಪ್ರಭುತ್ವ ಪ್ರಶಸ್ತಿ ನಿರಾಕರಿಸಿ ಸಿನಿಮಾವನ್ನು ಜನರ ಬಳಿಗೆ ಕೊಂಡೊಯ್ಯತ್ತಿರುವುದು ಬಹುಮುಖ್ಯ. ಗಾಂಧಿ ಎಂಬ ಮೇಷ್ಟçನ್ನು ಈ ನಿಮಾದ ಮೂಲಕ ಕನ್ನಡದ ಮೇಷ್ಟುç ಬರಗೂರರು ಜನತೆಗೆ ತಲುಪಿಸುತ್ತಿರುವುದು ಗಮನಾರ್ಹ ಎಂದರು.

ಅಧ್ಯಕ್ಷತೆ ವಹಿಸಿದ್ದ ಚಿಂತಕ ಕೆ.ದೊರೈರಾಜ್ ಮಾತನಾಡಿ, ಭಿನ್ನಾಭಿಪ್ರಾಯಗಳನ್ನು ವಿಷದ ಬೀಜಗಳನ್ನಾಗಿ ಪಸರಿಸಿ, ವ್ಯಕ್ತಿ ಮತ್ತು ವಿಚಾರಗಳ ಮಧ್ಯೆ ಹುಟ್ಟುಹಾಕಲಾಗುತ್ತಿದೆ. ವಿಭಜಕ ಚಿಂತನೆಗಳನ್ನು ಬೌದ್ದಿಕ ವಲಯದಲ್ಲಿ ಹುಟ್ಟುಹಾಕಿ ಸಾಮಾಜಿಕ ಸಂಘರ್ಷಗಳಿಗೆ ಕಾರಣವಾಗುತ್ತಿರುವ ಈ ಕಾಲ ಘಟ್ಟದಲ್ಲಿ ವಿಷ ಬೀಜ ತೆಗೆಯುವ ಸಾಹಸದ ಕೆಲಸವನ್ನು ಬರಗೂರು ಮೇಷ್ಟುç ಮಾಡುತ್ತಿರುವುದು ಪ್ರಶಂಸನೀಯ. ಜನಗಳನ್ನು ತಲುಪಬೇಕು ಎನ್ನುವ ಉದ್ದೇಶದಿಂದ ತಾಯಿ ಕಸ್ತೂರ್ ಗಾಂಧಿ ಸಿನಿಮಾ ನಿರ್ದೇಶಿಸಿ ಜನರೆಡೆಗೆ ರಾಜ್ಯಾದ್ಯಂತ ತೆಗೆದುಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು

ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ತಾಯಿ ಕಸ್ತೂರ್ ಗಾಂಧಿ’ ಚಲನಚಿತ್ರ ಪ್ರದರ್ಶಿಸಲಾಯಿತು.

 ಮಕ್ಕಳು, ಮಹಿಳೆಯರು, ಯುವಕರು, ಸಾಹಿತಿಗಳು, ಹೋರಾಟಗಾರರು ಸೇರಿದಂತೆ ಎಲ್ಲರು ಸಿನಿಮಾ ವೀಕ್ಷಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಡಿಡಿಪಿಐ ರಘುಚಂದ್ರ, ಪಿ.ಯು. ಡಿ.ಡಿ.ಪಿ.ಐ ಡಾ. ಬಾಲಗುರುಮೂರ್ತಿ, ಪ್ರಾಧ್ಯಾಪಕ ಜಿ.ಪ್ರಶಾಂತ ನಾಯಕ್ ಇತರರು ಹಾಜರಿದ್ದರು. ಡಾ. ಓ. ನಾಗರಾಜು ಸ್ವಾಗತಿಸಿ, ನಿವೃತ್ತ ಪ್ರಾಂಶುಪಾಲ ಡಿ.ಎಸ್.ಮುನೀಂದ್ರಕುಮಾರ್ ವಂದಿಸಿ ಕನ್ನಡ ಉಪನ್ಯಾಸಕ ಎ. ರಾಮಚಂದ್ರಪ್ಪ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...