ತುಮಕೂರು | ಸರ್ಕಾರಿ ಶಾಲೆಗಳಿಗೆ ಬೀಗಮುದ್ರೆ : ಪ್ರೊ. ಬರಗೂರು ರಾಮಚಂದ್ರಪ್ಪ ಕಳವಳ

Date:

ರಾಜ್ಯದಲ್ಲಿ ದಿನೇ ದಿನೇ ಸರ್ಕಾರಿ ಶಾಲೆಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಹಾಗೂ ನೂರಾರು ಶಾಲೆಗಳು ಮುಚ್ಚುವ ಭೀತಿ ಎದುರಾಗುತ್ತಿರುವ ಬಗ್ಗೆ ನಾಡಿನ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಕಳವಳ ವ್ಯಕ್ತಪಡಿಸಿದರು

ಸೋಮವಾರ ತುಮಕೂರಿನ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದ್ದ 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ನಡೆದ ವಿಶ್ವ ಮಾನವ ದಿನಾಚರಣೆಯ ಭಾಷಣ ಮಾಡಿ ಅವರು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯು ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಪಾಲಿನ ಆಶಾಕಿರಣವಾಗಿದ್ದು, ಅದನ್ನು ಉಳಿಸಿಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು. ಆದರೆ ಶಿಕ್ಷಕರು ಮಕ್ಕಳ ಕೊರತೆ ಕಾರಣ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ಇರಾದೆ ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು. 

ಖಾಸಗಿ ಶಾಲೆಗಳ ವ್ಯಾಮೋಹ ಮತ್ತು ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಕೊರತೆಯಿಂದಾಗಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದು ಶಾಲೆಗಳನ್ನು ಶೂನ್ಯ ದಾಖಲಾತಿ ಶಾಲೆಗಳನ್ನಾಗಿ ಮಾರ್ಪಡಿಸಿ, ಅಂತಿಮವಾಗಿ ಬೀಗ ಹಾಕುವ ಸಂದರ್ಭ ಉಂಟುಮಾಡುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಕ್ಕೆ ರಾಷ್ಟçಕವಿ ಕುವೆಂಪು ಅವರ ಮೇಲೆ ನಿಜವಾದ ಗೌರವವಿದ್ದರೆ, ಮೊದಲು ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಮತ್ತು ಅಭಿವೃದ್ಧಿಪಡಿಸಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಸರ್ಕಾರದ ನಡವಳಿಕೆಯನ್ನು ಪ್ರಶ್ನಿಸಿದ ಅವರು, ಕನ್ನಡ ಕೇವಲ ಭಾಷೆಯ ಪ್ರಶ್ನೆಯಲ್ಲ, ಬದಲಾಗಿ ನಮ್ಮ ಸಂಸ್ಕೃತಿ ಮತ್ತು ಪ್ರಜಾಪ್ರಭುತ್ವದ ಅಸ್ತಿತ್ವದ ಪ್ರಶ್ನೆಯಾಗಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳನ್ನು ಸೆಳೆಯುವಂತಾಗಲು ಕನಿಷ್ಠ ಮೂಲಸೌಕರ್ಯಗಳನ್ನು ಒದಗಿಸಬೇಕು. ಶಾಲೆಗಳು ನೋಡಲು ಆಕರ್ಷಕವಾಗಿರಬೇಕು. ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ವಿದ್ಯಾರ್ಥಿಗಳು ತಾವಾಗಿಯೇ ಬರುವಂತಹ ವಾತಾವರಣ ನಿರ್ಮಿಸಬೇಕು. ಕಡ್ಡಾಯ ಶಿಕ್ಷಣ ಕಾಯಿದೆಯಂತೆ ಪ್ರತಿ ಎರಡು ಕಿ.ಮೀ.ಗೆ ಕಿರಿಯ ಪ್ರಾಥಮಿಕ, 3 ಕಿ.ಮೀ.ಗೆ ಹಿರಿಯ ಪ್ರಾಥಮಿಕ ಹಾಗೂ 5 ಕಿ.ಮೀ. ವ್ಯಾಪ್ತಿಯಲ್ಲಿ ಪ್ರೌಢಶಾಲೆ ಇರುವಂತೆ ಮಾಡುವುದು ಸರ್ಕಾರದ ಕರ್ತವ್ಯ ಎಂದರು.

 ಕನ್ನಡ ಶಾಲೆಗಳು ಇಲ್ಲದಿದ್ದರೆ ಭವಿಷ್ಯದಲ್ಲಿ ಕನ್ನಡ ಪತ್ರಿಕೆಗಳನ್ನು ಓದುವವರು, ಕನ್ನಡ ನಾಟಕ ಹಾಗೂ ಸಿನಿಮಾಗಳನ್ನು ನೋಡುವವರ ಸಂಖ್ಯೆ ಕ್ಷೀಣಿಸುತ್ತದೆ. ಇದು ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಹೊಡೆತ ಎಂದ ಅವರು, ಸರ್ಕಾರಿ ಶಾಲೆಗಳಿಲ್ಲದಿದ್ದರೆ ಸ್ವಾತಂತ್ರ‍್ಯ ದಿನಾಚರಣೆ, ಗಣರಾಜ್ಯೋತ್ಸವ, ಅಂಬೇಡ್ಕರ್ ಹಾಗೂ ಗಾಂಧಿ ಜಯಂತಿಗಳಂತಹ ಪ್ರಜಾಸತ್ತಾತ್ಮಕ ಉತ್ಸವಗಳು ಕ್ಷೀಣಿಸುವ ಪ್ರಸಂಗಗಳು ಸಮೀಪಿಸುತ್ತಿವೆ ಎಂದರು. 

ಇಂಗ್ಲಿಷ್ ಮಾಧ್ಯಮದ ಅಬ್ಬರದ ನಡುವೆಯೂ ಕನ್ನಡವನ್ನು ಕಡ್ಡಾಯವಾಗಿ ಕಲಿಯುವಂತಾಗಬೇಕು ಎಂಬುದು ಕುವೆಂಪು ಅವರ ಆಶಯವನ್ನು ವ್ಯಕ್ತ ಪಡಿಸಿದ ಅವರು, ಕುವೆಂಪು ಗೌರವ ಶಾಲೆಗಳ ಉಳಿವಲ್ಲೇ ಇದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಆಧುನಿಕತೆಯ ಮುಖಪುಟವಾಗಿರುವ ಕುವೆಂಪು ಅವರು ಎಂದಿಗೂ ಪ್ರಭುತ್ವಕ್ಕೆ ತಲೆಬಾಗಿದವರಲ್ಲ. ಅವರು ಆತ್ಮಭಿಮಾನದ ಸಂಕೇತ. ಜಾತಿ ಪದ್ಧತಿಯನ್ನು ವಿರೋಧಿಸಿ, ಭಾರತೀಯ ಒಕ್ಕೂಟ ವ್ಯವಸ್ಥೆಯನ್ನು ಬಲವಾಗಿ ಪ್ರತಿಪಾದಿಸಿದವರು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...