ತುಮಕೂರು | ಅನಿಶ್ಚಿತತೆಯ ಯುಗದಲ್ಲಿ ಶ್ರೀಗಳ ಜೀವನ ನೈತಿಕ ದಿಕ್ಕನ್ನು ಸೂಚಿಸುವ ನಂದಾದೀಪ : ಉಪ ರಾಷ್ಟ್ರಪತಿ ರಾಧಾಕೃಷ್ಣನ್

Date:

 ಅನಿಶ್ಚಿತತೆ, ವಿಭಜನೆ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿರುವ ಈ ಯುಗದಲ್ಲಿ ಸಿದ್ಧಗಂಗೆಯ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ನೈತಿಕ ದಿಕ್ಕನ್ನು ಸೂಚಿಸುವ ಪ್ರಜ್ವಲಿಸುವ ನಂದಾದೀಪವಾಗಿದೆ ಎಂದು ಭಾರತದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.

ಬುಧವಾರ ಸಿದ್ದಗಂಗೆ ಮಠದಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸಂಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾಗಿ ಏಳು ವರ್ಷಗಳು ತುಂಬಿದರೂ ಶ್ರೀಗಳ ಸಾನಿಧ್ಯ ಒಂದಿಷ್ಟೂ ಕುಂದಿಲ್ಲ. ಬದಲಾಗಿ ಇನ್ನೂ ಪ್ರಕರವಾಗಿದೆ. ಅನಿಶ್ಚಿತತೆ, ಅಶಾಂತಿ ಸೃಷ್ಟಿಸುತ್ತಿರುವ ಈ ಯುಗದಲ್ಲಿ ಸ್ವಾಮೀಜಿಯವರ ಜೀವನ ನೈತಿಕ ದಿಕ್ಕನ್ನು ಸೂಚಿಸುವ ನಂದಾದೀಪವಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

19ನೇ ಶತಮಾನದಲ್ಲಿ ಅಟವಿ ಸ್ವಾಮೀಜಿಯವರ ಆದರ್ಶಗಳನ್ನು ಅನುಸರಿಸಿ ಶ್ರೀಮಠವು ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಗಳನ್ನು ಮಾಡುತ್ತಾ ಬಂದಿರುವುದು ಸಂತೋಷದ ವಿಷಯವಾಗಿದ್ದು, ಶ್ರೀ ಶಿವಕುಮಾರ ಸ್ವಾಮೀಜಿಯವರು ಮಠದ ಜವಾಬ್ದಾರಿವಹಿಸಿಕೊಂಡು ಶ್ರೀಮಠದಲ್ಲಿ ಕೇವಲ ಆಧ್ಯಾತ್ಮಿಕ ಕೇಂದ್ರವಾಗಿಸದೆ ಸಮಾಜಮುಖಿಯಾಗಿ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಾ ಮಾದರಿಯಾಗಿದ್ದಾರೆ. ಮುಂದುವರಿದು ಪ್ರಸ್ತುತ ಸ್ವಾಮೀಜಿಯವರು ತ್ರಿವಿಧ ದಾಸೋಹವನ್ನು ಮುಂದುವರಿಸುತ್ತಾ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ್ದಾರೆ ಎಂದರು.

1002710400

ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ಜಾತಿ ಮತಗಳನ್ನು ಮೀರಿ ತ್ರಿವಿಧ ದಾಸೋಹದಲ್ಲಿ ಸೇವೆ ಮಾಡುತ್ತಿರುವ ಶ್ರೀ ಸಿದ್ದಗಂಗಾ ಮಠವು ಐತಿಹಾಸಿಕ ಧಾರ್ಮಿಕ ಕೇಂದ್ರವಾಗಿದೆ. ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡುವುದೇ ನಮ್ಮ ದೇಶದ ಸಂಸ್ಕೃತಿಯಾಗಿದ್ದು ಶ್ರೀಮಠದ ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಪ್ರಸ್ತುತತೆ ಎಂದರು.

ಶ್ರೀ ಸಿದ್ದಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಮಾತನಾಡಿ, 89 ವರ್ಷಗಳ ಕಾಲ ಶ್ರೀಮಠದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ತಮ್ಮ ಹಿರಿಯ ಶ್ರೀಗಳು ಸದಾ ಕಾಯಕ ಭಾವನೆ ಜಾಗೃತವಾಗಿರಬೇಕು, ಶ್ರೀಮಠದಲ್ಲಿ ದಾಸೋಹ, ಮಕ್ಕಳ ಶಿಕ್ಷಣ ಎಂದೂ ನಿಲ್ಲಬಾರದು ಎಂದು ವಚನ ನೀಡಿದ್ದಾರೆ. ಇಂದಿಗೂ ಲಕ್ಷಾಂತರ ಮಕ್ಕಳಿಗೆ, ಭಕ್ತರಿಗೆ ದಾರಿದೀಪವಾಗಿದ್ದಾರೆ ಎಂದು ಹೇಳಿದರು.

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಮಾತನಾಡಿ, ಅನ್ನ, ಅಕ್ಷರ, ಆಶ್ರಯ ಎಷ್ಟು ಮುಖ್ಯ ಎಂಬುದೇ ಇಂದಿನ ಕಾರ್ಯಕ್ರಮದ ಸಂದೇಶ. ಜಾತಿ ವರ್ಗಗಳನ್ನು ಮೀರಿ ಸಮಾಜದಲ್ಲಿ ಸೇವೆ ಮಾಡುವ ಶ್ರೀಮಠದ ತತ್ವ ಸಿದ್ಧಾಂತವನ್ನು ಅಳವಡಿಸಿಕೊಳ್ಳುವ ಅನಿವಾರ್ಯತೆ ಭಾರತದ ಭವಿಷ್ಯದ ದೃಷ್ಟಿಯಿಂದ ಅಗತ್ಯವಿದೆ ಎಂದರು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಗಣ್ಯರನ್ನು ಸ್ವಾಗತಿಸಿದರು. 

ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಜಯವಿಭವಸ್ವಾಮಿ ಅವರು ವಂದಿಸಿದರು. ವಿ.ಸೋಮ ಶೇಖರ್ ನಿರೂಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...