ತುಮಕೂರು | ಸಂಕ್ರಾಂತಿ ಸಂಭ್ರಮಕ್ಕೆ ಬೆಲೆ ಏರಿಕೆ ಬಿಸಿ

Date:

 ಗ್ರಾಮೀಣ ಸೊಗಡಿನ ಪ್ರತೀಕವಾಗಿರುವ ಸುಗ್ಗಿಹಬ್ಬ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಿದ್ದತೆ ನಡೆಸಿರುವ ಜನಸಾಮಾನ್ಯರಿಗೆ ಹೂವು, ಹಣ್ಣು, ಕಡಲೆಕಾಯಿ, ಕಬ್ಬು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಆದರೂ ಕಂಗೆಡದೆ ಸುಗ್ಗಿ ಹಬ್ಬವನ್ನು ನಗರ, ಗ್ರಾಮೀಣ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲು ಭರದ ಸಿದ್ದತೆಗಳು ನಡೆದಿವೆ.

ಮಕರ ಸಂಕ್ರಾಂತಿ ಹಬ್ಬ ಅನ್ನದಾತರ ಸುಗ್ಗಿ ಕಾಲದ ಸಂಕೇತ. ಆದರೆ ಈ ಬಾರಿ ಕೊಂಚ ಮಳೆ ಕೊರತೆ ಉಂಟಾಗಿದ್ದು, ಈ ನಡುವೆಯೂ ರೈತರು ಸೇರಿದಂತೆ ಜನಸಾಮಾನ್ಯರು ಸುಗ್ಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸರ್ವ ಸನ್ನದ್ಧರಾಗಿದ್ದು, ಮಾರುಕಟ್ಟೆಯಲ್ಲಿ ಹೂವು, ಹಣ್ಣು, ಕಬ್ಬು, ಕಡ್ಲೆಕಾಯಿ, ಆವರೆಕಾಯಿ, ಗೆಣಸು ಬೆಲೆ ಗಗನಕ್ಕೇರಿದ್ದರೂ ಸಹ ಕಂಗೆಡದೆ ಎಲ್ಲವನ್ನು ಖರೀದಿಸಿ ಹಬ್ಬ ಆಚರಿಸುವ ಸಂಭ್ರಮದಲ್ಲಿದ್ದಾರೆ. 

ಹೊಸ ವರ್ಷದ ತಿಂಗಳ ಬರುವ ಮೊದಲನೇ ಹಬ್ಬ ಇದಾಗಿದ್ದು, ಈ ಸುಗ್ಗಿ ಹಬ್ಬ ಸಂಕ್ರಾಂತಿ ಗ್ರಾಮೀಣ ಸೊಗಡಿನ ಪ್ರತೀಕ. ಈ ಹಬ್ಬ ಬಂತೆಂದರೆ ಹಳ್ಳಿಗಳಲ್ಲಿ ಎಲ್ಲಿಲ್ಲದ ಸಂಭ್ರಮ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002676072

ಸುಗ್ಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಿದ್ದತೆ ನಡೆಸಿರುವ ಜನಸಾಮಾನ್ಯರು ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಅಗತ್ಯವಾಗಿ ಬೇಕಾಗಿರುವ ವಸ್ತುಗಳ ಬೆಲೆ ಎಷ್ಟೇ ಗಗನಕ್ಕೇರಿದ್ದರೂ ಲೆಕ್ಕಿಸದೆ ಖರೀದಿಸಲು ಮುಗಿ ಬೀಳುತ್ತಿರುವುದು ಕಂಡು ಬರುತ್ತಿದೆ.

ಎಳ್ಳು-ಬೆಲ್ಲ ತಿಂದು ಒಳ್ಳೆಯ ಮಾತನಾಡು ಎಂಬ ಗಾದೆ ಮಾತಿದೆ. ಈ ಗಾದೆ ಮಾತು ಸಂಕ್ರಾಂತಿ ಹಬ್ಬದಂದು ಪ್ರಚಲಿತಕ್ಕೆ ಬರುತ್ತದೆ. ಎಳ್ಳು-ಬೆಲ್ಲ ಸಂಕ್ರಾಂತಿ ಹಬ್ಬದ ಪ್ರತೀಕವಾಗಿದೆ. ಹಾಗಾಗಿ ಅಂಗಡಿ ಮುಂಗಟ್ಟುಗಳಲ್ಲಿ ಎಳ್ಳು-ಬೆಲ್ಲದ ಮಾರಾಟವೂ ಬಲು ಜೋರಾಗಿಯೇ ನಡೆದಿದೆ. 

1002676073

ಕಲ್ಪತರುನಾಡಿನ ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಜಿಲ್ಲೆಯ ಎಲ್ಲ ಮಾರುಕಟ್ಟೆಗಳಲ್ಲಿ ಜನಜಂಗುಳಿ ಕಂಡು ಬರುತ್ತಿದೆ. 

ಈ ಬಾರಿಯೂ ಬೆಲೆ ಏರಿಕೆಗೇನೂ ಕಡಿಮೆಯಾಗಿಲ್ಲ. ಮಾರುಕಟ್ಟೆಯಲ್ಲಿ ಒಂದು ಜತೆ ಕಬ್ಬಿನ ಜೊಲ್ಲೆ 100 ರಿಂದ 120 ರೂಪಾಯಿ, ಆವರೆ ಕಾಯಿ 1 ತೂಕ (ಎರಡೂವರೆ ಕೆ.ಜಿ.) 150 ರಿಂದ 200 ರೂ., ಗೆಣಸು ಕೆ.ಜಿ.ಗೆ 40 ರಿಂದ 60 ರೂ., ಬಾಳೆ ಹಣ್ಣು ಕೆ.ಜಿ.ಗೆ 80 ರಿಂದ 100 ರೂ., ಸೇವಂತಿಗೆ ಹೂವು ಮಾರು 100 ರಿಂದ 130 ರೂ., ಎಳ್ಳು, ಬೆಲ್ಲ ಹೀಗೆ ಹಬ್ಬಕ್ಕೆ ಅಗತ್ಯವಾಗಿರುವ ಸಾಮಗ್ರಿಗಳ ದರ ಏರಿಕೆಯಾಗಿದೆ. ಆದರೂ ಮಾರುಕಟ್ಟೆಯಲ್ಲಿ ಖರೀದಿಯ ಭರಾಟೆ ಜೋರಾಗಿದೆ.

ಹಳ್ಳಿಗಳಲ್ಲಿ ಕಾಣದ ಸಂಭ್ರಮ

ಸಂಕ್ರಾಂತಿ ಹಬ್ಬ ಬಂತೆಂದರೆ ಹಳ್ಳಿಗಳಲ್ಲಿ ಸಂಭ್ರಮ, ಸಡಗರ ಎದ್ದು ಕಾಣುತ್ತಿತ್ತು. ಎತ್ತುಗಳಿಂದ ಜಮೀನು ಉಳುಮೆ ಮಾಡಿ ಹದಗೊಳಿಸಿ ಬಿತ್ತನೆ ಮಾಡಿ ಕಳೆ ಕಿತ್ತು ಫಸಲು ಬಂದ ಮೇಲೆ ಒಕ್ಕಣೆ ಮಾಡಿ ಬೆಳೆ ರಾಶಿ ಹಾಕಿ ಪೂಜೆ ಸಲ್ಲಿಸಿ ಮನೆಗೆ ತರುವುದೇ ಒಂದು ಸಂಭ್ರಮ.

 ಆದರೆ ಆಧುನಿಕತೆ ಬೆಳೆದಂತೆ ಇತ್ತೀಚಿನ ದಿನಗಳಲ್ಲಿ ಎಲ್ಲವೂ ಯಂತ್ರಮಯವಾಗಿ ಬಿಟ್ಟಿದೆ. ಎತ್ತುಗಳಿಂದ ಜಮೀನು ಉಳುಮೆ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ಈಗ ಜಮೀನು ಉಳುಮೆ ಮಾಡುವುದರಿಂದ ಹಿಡಿದು ಮನೆಗೆ ರಾಗಿ ರಾಶಿ ತರುವವರೆಗೂ ಯಂತ್ರಗಳನ್ನೇ ಅವಲಂಬಿಸಿದ್ದಾರೆ. ಹಾಗಾಗಿ ಬೆಳೆದ ಬೆಳೆ ಒಕ್ಕಣೆ ಮಾಡಲು ಕಣವೂ ಇಲ್ಲ, ರಾಶಿಯೂ ಇಲ್ಲ, ಅದಕ್ಕೆ ಪೂಜೆನೂ ಮಾಡುವವರಿಲ್ಲದಂತಾಗಿದೆ.  

1002676068

ಗ್ರಾಮೀಣ ಪ್ರದೇಶಗಳಲ್ಲಿ ಈ ಹಿಂದೆ ಪ್ರತಿ ಮನೆಯಲ್ಲೂ ಒಂದು ಜತೆ ಎತ್ತುಗಳನ್ನು ಕಟ್ಟಲಾಗುತ್ತಿತ್ತು. ಇಂದು ಅಪ್ಪಟ ರೈತನಾಗಿದ್ದರೂ ಆತನ ಮನೆಯಲ್ಲೂ ಹುಡುಕಿದರೂ ಒಂದು ಜತೆ ಎತ್ತುಗಳು ಸಿಗುವುದು ದುರ್ಲಭ. ಕೆಲವರು ಮನೆತನದ ಗೌರವಕ್ಕೋ ಅಥವಾ ಪ್ರತಿಷ್ಠೆಗಾಗೋ ಸಾಕುವುದು ಮಾತ್ರ ಕಂಡು ಬರುತ್ತದೆ. ಆದರೆ ವ್ಯವಸಾಯ ಮಾಡುವ ಸಲುವಾಗಿ ಎತ್ತುಗಳನ್ನು ಕಟ್ಟುವರೇ ಇಲ್ಲದಂತಾಗಿದೆ. ಹಾಗಾಗಿ ಸಂಕ್ರಾಂತಿ ಹಬ್ಬದಂದು ಎತ್ತುಗಳ ಕಿಚ್ಚು ಹಾಯಿಸುವುದು ಕಣ್ಮರೆಯಾಗಿದೆ. 

ಆದರೆ ರಾಜ್ಯ ಸರ್ಕಾರ ಎಲ್ಲ ಜಿಲ್ಲಾ ಕೇಂದ್ರ ಹಾಗೂ ರಾಜಧಾನಿಯಲ್ಲಿ ಸಿರಿಧಾನ್ಯ ಮೇಳ ನಡೆಸುವ ಮೂಲಕ ಸುಗ್ಗಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಹಳ್ಳಿಗಳಲ್ಲಿ ರೈತರು ರಾಶಿ ಹಾಕುತ್ತಾರೋ, ಬಿಡುತ್ತಾರೋ, ಸಿರಿಧಾನ್ಯ ಮೇಳದ ನೆಪದಲ್ಲಾದರೂ ರಾಗಿ ರಾಶಿಗಳನ್ನು ನೋಡುವಂತಹ ಭಾಗ್ಯ ಜನರಿಗೆ ದೊರೆಯುತ್ತಿದೆ. 

ಅದೇನೆ ಇರಲಿ, ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ನಗರ, ಗ್ರಾಮೀಣ ಪ್ರದೇಶ ಸೇರಿದಂತೆ ನಾಡಿನ ಎಲ್ಲೆಡೆ ಸಂಭ್ರಮದಿಂದ ಆಚರಿಸಲು ಜನಸಾಮಾನ್ಯರು ಸಿದ್ದತೆಯಲ್ಲಿ ತೊಡಗಿದ್ದಾರೆ. ಮಾರುಕಟ್ಟೆಗಳು ಜನಜಂಗುಳಿಯಿAದ ಗಿಜಗುಡುತ್ತಿದ್ದು, ವ್ಯಾಪಾರ, ಖರೀದಿ ಭರಾಟೆ ಬಲು ಜೋರಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...