ತುಮಕೂರು | ಆಗ್ನೆಯ ಪದವೀಧರ ಕ್ಷೇತ್ರ ಚುನಾವಣೆ : ಶಶಿಹುಲಿಕುಂಟೆ ಮಠ್ ಕಾಂಗ್ರೆಸ್ ಅಭ್ಯರ್ಥಿ

Date:

ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆಯ ಅಭ್ಯಾರ್ಥಿಯಾಗಿ ಕಾಂಗ್ರೆಸ್ ತುಮಕೂರು ಜಿಲ್ಲಾ ಯುವ ಘಟಕದ ಅಧ್ಯಕ್ಷ, 39 ವರ್ಷದ ಶಶಿಹುಲಿಕುಂಟೆ ಮಠ್ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷದ ಹೈಕಮಾಂಡ್ ಘೋಷಿಸಿದೆ.  ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಈ ಬಾರಿ ಯುವಕರಿಗೆ ಆದ್ಯತೆ ನೀಡಿರುವುದು ವಿಶೇಷ.

ಶಶಿಹುಲಿಕುಂಟೆ ಮಠ್  ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದು, ಪ್ರಸ್ತುತ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವ-ಹಿಸುತ್ತಿದ್ದಾರೆ. ಯುವ ನಾಯಕರಾಗಿ ಪಕ್ಷ ಸಂಘಟನೆ, ಹೋರಾಟ, ನಾಯಕತ್ವ ಗುಣವನ್ನು ಪರಿಗಣಿಸಿ ಟಿಕೆಟ್ ನೀಡಲಾಗಿದೆ. ‘ಯುವ ಪಡೆ’ ನಿರ್ಮಾಣಕ್ಕೆ ಮುಂದಾಗಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದಲ್ಲೂ ಯುವಕರಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಯುವಕರಿಗೆ ಅವಕಾಶ, ಆದ್ಯತೆ ಸಿಗುತ್ತಿಲ್ಲ ಎಂಬ ಅಸಮಾಧಾನದ ನಡುವೆ ಯುವ ಕಾರ್ಯಕರ್ತರನ್ನು ಪಕ್ಷ ಗುರುತಿಸಿ, ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಅವಕಾಶ ಮಾಡಿಕೊಟ್ಟಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬಂದಿವೆ.

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆ (ಹರಿಹರ, ದಾವಣಗೆರೆ, ಜಗಳೂರು ತಾಲ್ಲೂಕು ಮಾತ್ರ) ಆಗ್ನಿಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಬರಲಿವೆ. ಈ ಕ್ಷೇತ್ರದ ವ್ಯಾಪ್ತಿಗೆ 34 ವಿಧಾನಸಭಾ ಕ್ಷೇತ್ರಗಳು ಒಳಪಡಲಿದ್ದು, ಅದರಲ್ಲಿ ಕಾಂಗ್ರೆಸ್‌ನ 26, ಬಿಜೆಪಿಯ 4 ಹಾಗೂ ಜೆಡಿಎಸ್‌ 4 ಶಾಸಕರು ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗ್ನೆಯ ಪದವೀಧರ ಕ್ಷೇತ್ರದ ಪ್ರಸ್ತುತ ಅವಧಿ 2026ರ ನವೆಂಬರ್‌ಗೆ ಮುಕ್ತಾಯಗೊಳ್ಳಲಿದೆ. ಈಗ ಬಿಜೆಪಿಯ ಚಿದಾನಂದ ಎಂ.ಗೌಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಚೌಡರೆಡ್ಡಿ ತೂಪಲ್ಲಿ, ಕಾಂಗ್ರೆಸ್‌ನಿಂದ ರಮೇಶ್ ಬಾಬು ಬಂಡಾಯವಾಗಿ ಡಿ.ಟಿ.ಶ್ರೀನಿವಾಸ್ (ಈಗ ಕಾಂಗ್ರೆಸ್ ವಿಧಾನ ಪರಿಷತ್ತು ಸದಸ್ಯ), ಹಾಲೇನೂರು ಲೇಪಾಕ್ ಸ್ಪರ್ಧಿಸಿದ್ದರು. ಚಿದಾನಂದಗೌಡ ಆಯ್ಕೆ ಆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...