ತುಮಕೂರು | ಎಸ್.ಎಸ್.ಎಲ್.ಸಿ ಪೂರ್ವ ಪರೀಕ್ಷೆ; ಶೇ.30 ಫಲಿತಾಂಶ ಪಡೆದ ಶಾಲಾ ಮುಖ್ಯಸ್ಥರಿಗೆ ನೋಟಿಸ್ : ಡಿಸಿ

Date:

 ಎಸ್.ಎಸ್.ಎಲ್.ಸಿ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಶೇ.30ಕ್ಕಿಂತ ಕಡಿಮೆ ಫಲಿತಾಂಶದ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್ ನೀಡುವಂತೆ ಶಾಲಾ ಶಿಕ್ಷಣ ಇಲಾಖೆಯ ಎರಡೂ ಜಿಲ್ಲೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.

ಮಾರ್ಚ್ 18ರಿಂದ ಎಸ್ಎಸ್ಎಲ್ ಸಿ ಪರೀಕ್ಷಾ ಸಿದ್ಧತೆ ಬಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಸಿ ಮಾತನಾಡಿದ ಅವರು, ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕನಿಷ್ಠ ಫಲಿತಾಂಶ ನೀಡದ ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

 ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಕುಸಿದರೆ ಡಿಡಿಪಿಐ ಹಾಗೂ ಬಿಇಒ ಗಳೆ ಹೊಣೆಯಾಗಿರುವುದಾಗಿ ಪ್ರಗತಿ ಪರಿಶೀಲನಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದಾಗ್ಯೂ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳದ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಇತ್ತೀಚಿಗೆ ನಡೆದ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ನೀಡಿದ ಮುಖ್ಯ ಶಿಕ್ಷಕರಿಗೆ ನೋಟಿಸ್ ನೀಡುವಂತೆ ಸೂಚಿಸಿದರು.

 ಇದೇ 23ರಿಂದ ಮೂರನೇ ಪೂರ್ವ ಸಿದ್ಧತಾ ಪರೀಕ್ಷೆ ಇರುವುದರಿಂದ ಮುಖ್ಯ ಪರೀಕ್ಷೆವರೆಗೆ ಪ್ರತಿ ದಿನವೂ ಬೆಳಗ್ಗೆ 6ಗಂಟೆಯಿಂದ ವಿಶೇಷ ತರಗತಿ ನಡೆಸುವಂತೆ ಸೂಚಿಸಿದರು.

 ಜಿಲ್ಲೆಯಲ್ಲಿ ಕಳೆದ ವರ್ಷದ ಫಲಿತಾಂಶಕ್ಕಿಂತ ಉತ್ತಮ ಫಲಿತಾಂಶದ ನಿರೀಕ್ಷೆ ಇದ್ದು ಶೇ.100ಫಲಿತಾಂಶದ ಗುರಿ ಇರಬೇಕು. ಅದಕ್ಕೆ ಪೂರಕವಾದ ತಯಾರಿಯನ್ನು ಮಕ್ಕಳಿಗೆ ನೀಡಬೇಕು ಎಂದರು.

 ಪರೀಕ್ಷಾ ಪದ್ಧತಿ ಅತ್ಯಂತ ಸುಲಭ ಇದೆ. ಈಗಲೂ ಮಕ್ಕಳನ್ನು ಪಾಸು ಮಾಡಿಸಲು ಆಗಲಿಲ್ಲ ಎಂದರೆ ತಾವು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

 ತುಮಕೂರು ನಗರ ಸೇರಿದಂತೆ ನಗರ ಪಟ್ಟಣ ಪ್ರದೇಶದಲ್ಲಿ ಶೂನ್ಯ ಫಲಿತಾಂಶದ ಶಾಲಾ ಮುಖ್ಯ ಶಿಕ್ಷಕರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

 ಇಂದಿನಿಂದ ಗುಣಮಟ್ಟದ ಫಲಿತಾಂಶಕ್ಕೆ ಚಟುವಟಿಕೆಗಳು ಆರಂಭವಾಗಬೇಕು ಎಂದ ಅವರು, ತಾವೂ ಅಚ್ಚರಿ ಭೇಟಿ ನೀಡಲಿದ್ದು ತಮ್ಮ ಕಾರ್ಯ ಚಟುವಟಿಕೆ ಪರಿಶೀಲಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

 ಶೇ.50ಕ್ಕಿಂತ ಕಡಿಮೆ ಫಲಿತಾಂಶದ ಶಾಲಾ ಮುಖ್ಯಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಎರಡೂ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...