ತುಮಕೂರು | ವಿವಿ ಘಟಕವಾಗಿ ಪರಿಗಣಿಸಿ ರೋಸ್ಟರ್ ರೂಪಿಸುವ ನಿರ್ಧಾರ ಅಸಂವಿಧಾನಿಕ: ರಾಜ್ಯಾದ್ಯಂತ ಕ್ರಾಂತಿಕಾರಿ ಹೋರಾಟ

Date:

ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾನಿಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ರೋಸ್ಟರ್ (ಮೀಸಲಾತಿ) ರೂಪಿಸಲು ರಾಜ್ಯ ಸಚಿವ ಸಂಪುಟದ ಉಪಸಮಿತಿಯು ನೀಡಿರುವ ತಾತ್ವಿಕ ಒಪ್ಪಿಗೆಯು ಅಸಂವಿಧಾನಿಕ ಹಾಗೂ ಮೀಸಲಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರವಾಗಿದೆ ಎಂದು ‘ತುಮಕೂರು ವಿಶ್ವವಿದ್ಯಾನಿಲಯದ ಸಾಮಾಜಿಕ ನ್ಯಾಯ ಪರ ವಿದ್ಯಾರ್ಥಿಗಳ ಒಕ್ಕೂಟ’ ತೀವ್ರವಾಗಿ ಖಂಡಿಸಿದೆ. ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ಕ್ರಾಂತಿಕಾರಿ ಪ್ರತಿಭಟನೆ ರೂಪಿಸಲಾಗುವುದು ಎಂದು ಒಕ್ಕೂಟ ಎಚ್ಚರಿಸಿದೆ.

 ತುಮಕೂರು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ದುಂಡುಮೇಜಿನ ತುರ್ತು ಸಭೆ’ಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯಲ್ಲಿ ವಿಷಯ ಮಂಡಿಸಿ ಮಾತನಾಡಿದ ವಕೀಲ ರಂಗಧಾಮಯ್ಯ, “ನೇಮಕಾತಿಯಲ್ಲಿ ವಿಶ್ವವಿದ್ಯಾನಿಲಯವನ್ನು ಘಟಕವನ್ನಾಗಿ ಮಾಡುವುದು ಸಂವಿಧಾನದ ವಿಧಿ ೧೪(೧) ಮತ್ತು ೧೬(೪)ರ ಸ್ಪಷ್ಟ ಉಲ್ಲಂಘನೆಯಾಗಿದೆ. ೨೦೧೭ರಲ್ಲಿ ಅಲಹಾಬಾದ್ ಹೈಕೋರ್ಟ್ ಹಾಗೂ ತದನಂತರ ಸುಪ್ರೀಂಕೋರ್ಟ್ ಕೂಡ ವಿಶ್ವವಿದ್ಯಾನಿಲಯಗಳನ್ನು ಘಟಕವಾಗಿ ಪರಿಗಣಿಸಬಾರದು, ಇದು ಅಸಂವಿಧಾನಿಕ ಎಂದು ತೀರ್ಪು ನೀಡಿವೆ. ಸುಪ್ರೀಂಕೋರ್ಟ್ ಆದೇಶಕ್ಕೂ ಬೆಲೆಕೊಡದೆ ಇಂತಹ ನಿರ್ಧಾರ ಕೈಗೊಳ್ಳುವುದು ಸಾಮಾಜಿಕ ನ್ಯಾಯಕ್ಕೆ ಬಗೆಯುವ ದ್ರೋಹವಾಗಿದೆ,” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002860705

ಒಳ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ವೈ.ಕೆ. ಬಾಲಕೃಷ್ಣ ಮಾತನಾಡಿ, “ಸಂವಿಧಾನದ ಆಶಯಗಳಿಗೆ ಬದ್ಧವಾಗಿರಬೇಕಾದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರೇ ಇಂತಹ ಮೀಸಲಾತಿ ವಿರೋಧಿ ಕಾನೂನು ರೂಪಿಸಲು ಉತ್ಸುಕರಾಗಿರುವುದು ದುರಂತ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮಾನತೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಸರ್ಕಾರದ ಈ ನಿರ್ಧಾರದ ವಿರುದ್ಧ ಶೋಷಿತ ಹಾಗೂ ಹಿಂದುಳಿದ  ವರ್ಗಗಳು ಎಚ್ಚೆತ್ತುಕೊಳ್ಳಬೇಕಿದೆ,” ಎಂದು ಕರೆ ನೀಡಿದರು.

ವಿದ್ಯಾರ್ಥಿ ಒಕ್ಕೂಟದ ಮುಖಂಡ ಗಂಗಾಧರ್ ಬಾಣಸಂದ್ರ, ನವೀನ್ ಕುಮಾರ್ ಪಿ.ಆರ್., ಧರ್ಮಣ್ಣ ಎಂ.ರಂಗನಾಥ್,ಭೀಮ್ ಶಿ ರಮೇಶ್ ಎಂ.ಟಿ., ಮಾರುತೇಶ್ ಹಾಗೂ ಸುರೇಶ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ, ಸರ್ಕಾರ ಸಾಮಾಜಿಕ ನ್ಯಾಯದ ವಿರುದ್ಧ ಯಾವುದೇ ತೀರ್ಮಾನ ಕೈಗೊಳ್ಳಬಾರದು ಎಂದು ಆಗ್ರಹಿಸಲಾಯಿತು.

ಸಭೆಯಲ್ಲಿ ಹಿರಿಯ ಹೋರಾಟಗಾರರಾದ ಪ್ರೊ. ದೊರೈರಾಜು, ಡಾ. ಬಸವರಾಜು, ಕೊಟ್ಟ ಶಂಕರ್, ವೈ.ಹೆಚ್. ಹುಚ್ಚಯ್ಯ ಹಾಗೂ ಚಿಂತಕ ಡಾ. ರವಿಕುಮಾರ್ ನೀಹ, ಪಿ ರಾಮಯ್ಯ, ಹೆತ್ತೇನಹಳ್ಳಿ ಮಂಜುನಾಥ್,ಪವನ್ , ಶಿವಣ್ಣ ತಿಮ್ಮಲಾಪುರ ,ಆದಂ ಖಾನ್,ಜಯರಾಮ್ ,ನಟರಾಜ್, ಶ್ರೀನಿವಾಸ್, ಮುಂತಾದವರು ಪಾಲ್ಗೊಂಡು, ವಿದ್ಯಾರ್ಥಿಗಳ ಈ ನ್ಯಾಯಸಮ್ಮತ ಹೋರಾಟಕ್ಕೆ ತಮ್ಮ ಸಂಪೂರ್ಣ ನೈತಿಕ ಬೆಂಬಲ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...