ತುಮಕೂರು | ವೈಭವದ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ

Date:

 ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. 

ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸೋಮವಾರ ಮಧ್ಯಾಹ್ನ 12ಕ್ಕೆ ಸರಿಯಾಗಿ ಶುಭ ಅಭಿಜಿನ್ ಲಗ್ನದಲ್ಲಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಶ್ರೀಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. 

ರಥೋತ್ಸವದಲ್ಲಿ ಶ್ರೀಕ್ಷೇತ್ರದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್, ಪಾಲಿಕೆ ಆಯುಕ್ತೆ ಶುಭ, ವಿವಿಧ ಮಠಾಧೀಶರುಗಳು ಸೇರಿದಂತೆ ಅನೇಕ ಗಣ್ಯರು, ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ರಥವನ್ನು ಮುಂದಕ್ಕೆ ಎಳೆದು ಭಕ್ತಿ ಸಮರ್ಪಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002838374

ಇದಕ್ಕೂ ಮುನ್ನ ರಥಕ್ಕೆ ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಃ, ಕಳಸಗಳ ಆರಾಧನೆ, ರಥಾಂಗ ಪೂಜೆ ಸೇರಿದಂತೆ ವಿವಿಧ ಪೂಜೆ ಸಲ್ಲಿಸಿ ಶ್ರೀಕ್ಷೇತ್ರದ ಆರಾಧ್ಯ ದೈವ ಸಿದ್ದಲಿಂಗೇಶ್ವರಸ್ವಾಮಿಯನ್ನು ರಥಕ್ಕೆ ಕೂರಿಸಿ ರಾಜೋಪಚಾರ ಮತ್ತು ಅಷ್ಟೋತ್ತರ ಪೂಜೆ ನೆರವೇರಿಸಲಾಯಿತು. ರಥದ ಮುಂಭಾಗದಲ್ಲಿ ಜಯಾದಿ ಹೋಮ, ಗಣ ಹೋಮ, ಮೃತ್ಯುಂಜಯ ಹೋಮ ಸಹ ಮಾಡಲಾಯಿತು. 

ರಥವನ್ನು ಅಭೂತಪೂರ್ಣ ವಸ್ತçಗಳಿಂದ ಸುವರ್ಣ ಕಲಶಗಳಿಂದ ಧಾರ್ಮಿಕ ಲಾಂಛನಗಳಾದ ಮಕರ, ತೋರಣ, ಕಲಶ, ಕನ್ನಡಿ ವಿವಿಧ ಬಗೆಯ ಪುಷ್ಪ ಮಾಲೆಗಳಿಂದ ಅಲಂಕರಿಸಲಾಗಿತ್ತು. 

ರಥ ಸಾಗಿದ ದಾರಿಯುದ್ದಕ್ಕೂ ನಂದಿಧ್ವಜ, ಕರಡಿ ಮಜಲು, ನಾಗಸ್ವರ, ವೀರಗಾಸೆ, ಪಟಕುಣಿತ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೆರೆದಿದ್ದ ಭಕ್ತ ಸಮೂಹವನ್ನು ಆಕರ್ಷಿಸಿದವು.

1002838380 1

ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸುಡು ಬಿಸಿಲನ್ನೂ ಲೆಕ್ಕಿಸದೆ ರಥೋತ್ಸವದಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಮಾಡಿಕೊಂಡಿದ್ದ ಹರಕೆ ತೀರಿಸಲು ರಥಕ್ಕೆ ಬಾಳೆಹಣ್ಣು, ಹೂವು, ದವನ ಎಸೆದು ಭಕ್ತಿ ಸಮರ್ಪಿಸಿದರು.

ಶಿವರಾತ್ರಿ ಪ್ರಯುಕ್ತ ಜಾಗರಣೆಗಾಗಿ ನಾಡಿನಾದ್ಯಂತ ಸಹಸ್ರಾರು ಭಕ್ತಾದಿಗಳು ರಾತ್ರಿಯೇ ಶ್ರೀಮಠಕ್ಕೆ ಆಗಮಿಸಿದ್ದು ಇಂದು ನಡೆದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. 

ಶ್ರೀಕ್ಷೇತ್ರದಲ್ಲಿಂದು ಸುಡುವ ಬಿಸಿಲನ್ನೂ ಲೆಕ್ಕಿಸದೆ ಭಕ್ತಾದಿಗಳು ಶ್ರೀಮಠದ ಶಾಲಾ ಕಟ್ಟಡಗಳ ಮೇಲೆ ಹತ್ತಿ ರಥೋತ್ಸವವನ್ನು ವೀಕ್ಷಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 

ರಥೋತ್ಸವದ ಪ್ರಯುಕ್ತ ಭಕ್ತಾದಿಗಳಿಗೆ ಹಲವು ಸಂಘ ಸಂಸ್ಥೆಗಳಿಂದ ಪಾನಕ, ಮಜ್ಜಿಗೆ, ಹೆಸರು ಬೇಳೆಯನ್ನು ವಿತರಿಸಲಾಯಿತು.

ರಥೋತ್ಸವದಲ್ಲಿ ನಾಡಿನ ವಿವಿಧೆಡೆಯಿಂದ ಪಾಲ್ಗೊಂಡಿದ್ದ ಸಹಸ್ರಾರು ಮಂದಿ ಭಕ್ತಾದಿಗಳಿಗೆ ವಿಶೇಷ ಪ್ರಸಾದ, ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ರಥೋತ್ಸವದಲ್ಲಿ ಸಿದ್ದಗಂಗಾ ಆಸ್ಪತ್ರೆಯ ನಿರ್ದೇಶಕ ಡಾ. ಎಸ್. ಪರಮೇಶ್ ಸೇರಿದಂತೆ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...