ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

Date:

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ,  ಹಿಂದೂ ಮತ್ತು ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಾದ ಯುಗಾದಿ ಮತ್ತು ರಂಜಾನ್ ಒಟ್ಟೊಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಬಾಂಧವರು ಹಬ್ಬಕ್ಕೆ ಹೊಸ ಉಡುಪುಗಳನ್ನು ಖರೀದಿಸುವ ಭರಾಟೆಯಲ್ಲಿ ತೊಡಗಿದ್ದು, ಬಟ್ಟೆ ಅಂಗಡಿಗಳಲ್ಲಿ ವ್ಯಾಪಾರ ಬಲು ಜೋರಾಗಿ ನಡೆದಿದೆ.

ಬರುವ ಶನಿವಾರ ರಂಜನ್ ಹಬ್ಬ ಇರುವ ಹಿನ್ನೆಲೆಯಲ್ಲಿ ಕಳೆದ 15-20 ದಿನಗಳಿಂದಲೇ ನೆತ್ತಿ ಸುಡವ ಬಿಸಿಲಿನ ಝಳವನ್ನು ಲೆಕ್ಕಿಸದೆ ಮುಸ್ಲಿಂ ಬಾಂಧವರು ಬಟ್ಟೆ ಅಂಗಡಿಗಳಿಗೆ ಎಡತಾಕಿ ಖರೀದಿಯಲ್ಲಿ ತೊಡಗಿದ್ದಾರೆ.

1002984415

ನಗರದ ಪ್ರಮುಖ ವ್ಯಾಪಾರ ವಹಿವಾಟು ನಡೆಯುವ ಎಂ.ಜಿ. ರಸ್ತೆ, ಎಸ್‌ಐಟಿ ಮುಖ್ಯ ರಸ್ತೆ, ಮಂಡಿಪೇಟೆ ರಸ್ತೆ, ಬಿ.ಹೆಚ್. ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಇರುವ ಬಟ್ಟೆ ಅಂಗಡಿಗಳು ಜನರಿಂದ ತುಂಬಿ ಕಾಲಿಡಲು ಜಾಗವಿಲ್ಲದಷ್ಟರ ಮಟ್ಟಿಗೆ ಗಿಜಗುಡುತ್ತಿವೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲ ಬಟ್ಟೆ ಅಂಗಡಿಗಳಲ್ಲಿ ಮಾಮೂಲಿ ದಿನಗಳಲ್ಲಿ ನಾಲ್ಕೖದು ಮಂದಿ ವ್ಯಾಪಾರ ಮಾಡುತ್ತಿದ್ದರು. ಆದರೆ ರಂಜಾನ್ ಮತ್ತ ಯುಗಾದಿ ಹಬ್ಬದ ಭರಾಟೆ ಜೋರಾದ ಬಳಿಕ ಒಂದೊಂದು ಬಟ್ಟೆ ಅಂಗಡಿಯವರು 20 ರಿಂದ 30 ಜನರನ್ನು ಕರೆಸಿಕೊಂಡು ವ್ಯಾಪಾರದಲ್ಲಿ ತೊಡಗಿದ್ದಾರೆ. ಇದನ್ನು ಗಮನಿಸಿದರೆ ಕಲ್ಪತರುನಾಡು ತುಮಕೂರು ನಗರದಲ್ಲಿ ಎಷ್ಟರ ಮಟ್ಟಿಗೆ ಹಬ್ಬಕ್ಕೆ ಬಟ್ಟೆ ಖರೀದಿ ಭರಾಟೆ ನಡೆದಿದೆ ಎಂಬುದ ಗೊತ್ತಾಗುತ್ತದೆ.

1002984414

ನಗರದ ಎಂ.ಜಿ. ರಸ್ತೆಯಲ್ಲಿರುವ ಜ್ಯೋತಿಫ್ಯಾಷನ್ ಸೇರಿದಂತೆ ವಿವಿಧ ಬಟ್ಟೆ ಅಂಗಡಿಗಳಿಗೆ ನಗರ, ಗ್ರಾಮೀಣ ಪ್ರದೇಶ ಸೇರಿದಂತೆ ವಿವಿಧೆಡೆಯಿಂದ ಬಂದು ಜನತೆ ಬಟ್ಟೆ ಖರೀದಿಗೆ ಮುಗ್ಗಿ ಬೀಳುತ್ತಿರುವುದು ಸಾಮಾನ್ಯವಾಗಿದೆ.

1002984465

ಕೆಲ ಬಟ್ಟೆ ಅಂಗಡಿಗಳಲ್ಲಿ ಹಬ್ಬದ ಪ್ರಯುಕ್ತ ವಿಶೇಷ ರಿಯಾಯ್ತಿ, ಕೊಡುಗೆಗಳನ್ನು ನೀಡುತ್ತಿದ್ದರೆ, ಇನ್ನುಳಿದ ಅಂಗಡಿಗಳಲ್ಲಿ ಬೆಲೆ ಎಷ್ಟೇ ದುಪ್ಪಟ್ಟಾದರೂ ಜನ ಅದನ್ನು ಲೆಕ್ಕಿಸದೆ ಹೊಸ ಉಡುಪುಗಳ ಖರೀದಿಯನ್ನು ತೊಡಗಿರುವುದು ನಗರದ ಬಟ್ಟೆ ಅಂಗಡಿಗಳಲ್ಲಿ ಕಂಡು ಬರುತ್ತಿದೆ. 

ಬಟ್ಟೆ ಅಂಗಡಿಯವರು ಸಹ ಬಿಸಿಲಿನ ಝಳದಿಂದ ಬಳಲಿ ಬರುವ ಗ್ರಾಹಕರಿಗೆ ತಂಪು ಪಾನೀಯ ಕೊಡುವ ವ್ಯವಸ್ಥೆಯನ್ನು ಮಾಡಿಕೊಂಡು, ತಮ್ಮ ಅಂಗಡಿಗಳತ್ತ ಗ್ರಾಹಕರನ್ನು ಸೆಳೆಯುವ ತಂತ್ರಗಳನ್ನು ಅನುಸರಿಸುತ್ತಿರುವುದು ವಿಶೇಷವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...

ತುಮಕೂರು | ಪಾವನಭೂಮಿ ಆಶಯ ಈಡೇರಿಸಲು ಶ್ರಮಿಸೋಣ : ನುಡಿನಮನ

ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ...