ತುಮಕೂರು | ಗಾಜಿನಮನೆ ನವೀಕರಣಕ್ಕೆ 3 ಕೋಟಿ : ಅಮಾನಿಕೆರೆಯಲ್ಲಿ ಜಲಕ್ರೀಡಾ ಅಕಾಡೆಮಿ ಸ್ಥಾಪನೆ

Date:

ಅಮಾನಿಕೆರೆಯಲ್ಲಿರುವ ಗಾಜಿನಮನೆ ನವೀಕರಣಕ್ಕೆ 3 ಕೋಟಿ ರೂ., ಅಮಾನಿಕೆರೆಯಲ್ಲಿ ಜಲಕ್ರೀಡಾ ಅಕಾಡಮಿ ಸ್ಥಾಪನೆ, ಊರ್ಡಿಗೆರೆ ಹೋಬಳಿ ಮಾಚನಹಳ್ಳಿಯಲ್ಲಿ ಸುಸಜ್ಜಿತ ಬಡಾವಣೆ ಸೇರಿದಂತೆ 2026-27ನೇ ಸಾಲಿನಲ್ಲಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ ಹಮ್ಮಿಕೊಂಡಿರುವ ಯೋಜನೆಗಳ ಆಯವ್ಯಯಕ್ಕೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ಅನುಮೋದನೆ ನೀಡಲಾಯಿತು. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ 2026-27ನೇ ಸಾಲಿನ ಆಯವ್ಯಯ ಕುರಿತ ಸಭೆ ನಡೆಯಿತು. 

ಅಮಾನಿಕೆರೆಯಲ್ಲಿರುವ ಗಾಜಿನಮನೆಯಲ್ಲಿ ವರ್ಷವಿಡೀ ಒಂದಿಲ್ಲೊಂದು ಪ್ರಮುಖ ಕಾರ್ಯಕ್ರಮಗಳು ಜರುಗುತ್ತಿರುತ್ತವೆ. ಆದರೆ ಮಳೆಗಾಲದಲ್ಲಿ ಗಾಳಿ-ಮಳೆಗೆ ಗಾಜುಗಳು ಒಡೆದು ಅಸ್ತವ್ಯಸ್ತವಾಗುತ್ತಿರುತ್ತವೆ. ಅಲ್ಲದೆ, ಬೃಹತ್ ಗಾಜಿನಮನೆಯಲ್ಲಿ ಪ್ರತಿಧ್ವನಿ ನಿಯಂತ್ರಣ ವ್ಯವಸ್ಥೆ ಇಲ್ಲದಿರುವುದರಿಂದ ಪ್ರಸ್ತುತ ಮೀಸಲಿಟ್ಟಿರುವ 1.50 ಕೋಟಿ ರೂ. ಸಾಲುವುದಿಲ್ಲ ಎಂದು ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಅವರು ತಿಳಿಸಿದ ಹಿನ್ನೆಲೆಯಲ್ಲಿ, ಗಾಜಿನಮನೆಯ ಪೂರ್ಣ ಪ್ರಮಾಣದಲ್ಲಿ ಸುಸಜ್ಜಿತ ಸಭಾಂಗಣ ನವೀಕರಣಕ್ಕಾಗಿ 3 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಯಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ಜಲಕ್ರೀಡಾ ಅಕಾಡೆಮಿ ಸ್ಥಾಪಿಸುವ ಪ್ರಸ್ತಾವನೆಗೆ ಇಂದಿನ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಇದರಿಂದಾಗಿ ತುಮಕೂರಿನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಇಂಬುನೀಡಿದಂತಾಗಿದೆ. 

ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್ ಜಮೀನು ಭೂಸ್ವಾಧೀನಪಡಿಸಿಕೊಂಡು ಸುಮಾರು 56 ಎಕರೆ ಜಮೀನಿನಲ್ಲಿ ವಿಶಾಲ ರಸ್ತೆ, ಉದ್ಯಾನ ಸೇರಿದಂತೆ ಸುಸಜ್ಜಿತ ಬಡಾವಣೆ ನಿರ್ಮಿಸುವ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. 

ಈ ಯೋಜನೆ ವ್ಯಾಪ್ತಿಯ ಭೂಸ್ವಾಧೀನ ಪ್ರಕ್ರಿಯೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ಅಥವಾ 50:50 ಅನುಪಾತದ ಪಾಲುದಾರಿಕೆ ಸಂಬಂಧ ಯೋಜನೆ ರೂಪುರೇಷೆ ಸಿದ್ಧಗೊಂಡಿದ್ದು, ರೈತರು ಒಪ್ಪಿದಲ್ಲಿ ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆ ಮಾಡಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು. 

ತುಮಕೂರು ನಗರ ರಿಂಗ್ ರಸ್ತೆಯಲ್ಲಿರುವ ದಿಬ್ಬೂರು ವೃತ್ತವು ಅಪಘಾತಗಳ ಸ್ಥಳವಾಗಿದ್ದು, ಇದನ್ನು ಪೊಲೀಸ್ ಇಲಾಖೆ ಸಲಹೆಯಂತೆ ಅಭಿವೃದ್ಧಿಪಡಿಸುವುದು, ಈಗಾಗಲೇ ಅನುಮೋದನೆಗೊಂಡಿರುವ ಯೋಜನೆಗಳ ಟೆಂಡರ್‌ಗಳ ಅನುಮೋದನೆ, ಮಹಾ ಯೋಜನೆ ನಕ್ಷೆಯಂತೆ ಎಪಿಎಂಸಿ ಮತ್ತು ಇಸ್ರೋ ಮಧ್ಯಭಾಗದಲ್ಲಿ ಹಾದುಹೋಗಿರುವ 40 ಅಡಿ ಮಹಾಯೋಜನೆ ರಸ್ತೆಯನ್ನು ಇಸ್ರೋ ಸಂಸ್ಥೆಯಿಂದ ಅಭಿವೃದ್ಧಿಪಡಿಸಲು ಅವರೊಂದಿಗೆ ವ್ಯವಹರಿಸುವ ತೀರ್ಮಾನ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ವಿವಿಧ ಭೂಮಿಯ ಅದಲು ಬದಲು ಸಂಬಂಧಿಸಿದ ತೀರ್ಮಾನಗಳು ಸೇರಿದಂತೆ ಮಹತ್ತರ ತೀರ್ಮಾನಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು. 

ಅಲ್ಲದೆ, ತುಮಕೂರು ನಗರದ ಗೆದ್ದಲಹಳ್ಳಿ ಗ್ರಾಮದ ಅಂಕಿತ ಎಜುಕೇಷನ್ ಟ್ರಸ್ಟ್ ಬೆಂಗಳೂರು ಇವರಿಗೆ ಹಂಚಿಕೆಯಾಗಿರುವ ನಾಗರಿಕ ಸೌಕರ್ಯ ನಿವೇಶನದ ಉದ್ದೇಶ ಬದಲಾವಣೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸುವ ಸಂಬಂಧ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಉಮೇಶ್‌ಚಂದ್ರ ಆಯವ್ಯಯ ಪ್ರಸ್ತಾವನೆಯನ್ನು ಮಂಡಿಸಿದರು. ಶಾಸಕ ಜಿ.ಬಿ. ಜ್ಯೋತಿಗಣೇಶ್, ತುಮಕೂರು ಮಹಾನಗರಪಾಲಿಕೆ ಆಯುಕ್ತೆ ಶುಭ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು...