ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್‌ಗಳ ಮೇಲೆ ಮರವೊಂದು ಉರುಳಿ ಬಿದ್ದಿದ್ದು, ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನ ನಾಮದ ಚಿಲುಮೆ ಬಳಿ ನಡೆದಿದೆ.
ಘಟನೆಯಲ್ಲಿ ತಾಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದ ರಾಮಯ್ಯ (45), ರಾಜಣ್ಣ (32) ಗಾಯಗೊಂಡಿದ್ದಾರೆ. ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅವರಿಬ್ಬರೂ ಗಾರೆ ಕೆಲಸಕ್ಕೆ ತೆರಳುತ್ತಿದ್ದಾಗ ಬುಡ ಸಮೇತ ಮರ ಉರುಳಿ ಬಿದ್ದಿದೆ. ರಸ್ತೆ ಮೇಲೆ ಮರ ಬಿದ್ದಿದ್ದರಿಂದ ಕೆಲವು ಸಮಯ ವಾಹನ ಸಂಚಾರ ವ್ಯತ್ಯವಾಗಿತ್ತು. ಬಳಿಕ ಅರಣ್ಯ ಸಿಬ್ಬಂದಿಗಳು ಮರ ತೆರವು ಮಾಡಿದ್ದಾರೆ.
“ಇದು ಮೊದಲ ಘಟನೆಯಲ್ಲ. ಪದೇ ಪದೇ ರಸ್ತೆ ಬದಿಯ ಮರಗಳು ಉರುಳಿ ಬೀಳುತ್ತಿವೆ. ಬೀಳುವ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ” ಎಂದು ತಿಮ್ಮನಾಯಕನಹಳ್ಳಿ ಆರೋಪಿಸಿದ್ದಾರೆ.




