ತುಮಕೂರು | ಸಿದ್ದರಾಮಯ್ಯ ಬಳಿಕ ದಲಿತರಿಗೆ ಸಿಎಂ ಸ್ಥಾನ ನೀಡಿ: ಜ್ಞಾನಪ್ರಕಾಶ್ ಸ್ವಾಮೀಜಿ

Date:

ಸಿದ್ದರಾಮಯ್ಯನವರ ಬಳಿಕ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ಒತ್ತಾಯಿಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕು ಛಲವಾದಿ ಮಹಾಸಭಾದಿಂದ ಆಯೋಜಿಸಿದ್ದ ಶ್ರೀಜ್ಞಾನಪ್ರಕಾಶ್ ಸ್ವಾಮೀಜಿ ಅವರಿಗೆ ಅಭಿನಂದನಾ ಸಮಾರಂಭ ಮತ್ತು ಚಲವಾದಿ ಮಹಾಸಭಾ ಪದಾಧಿಕಾರಿಗಳ ಪದಗ್ರಹಣ  ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಜನತೆಗೆ ಸಮುದಾಯಕ್ಕನುಗುಣವಾಗಿ ಜಾತಿವಾರು ಜನಸಂಖ್ಯೆ ತಿಳಿಯಬೇಕಿದೆ. ಜಾತಿಗಣತಿ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕು ಸಂವಿಧಾನದ ಆಶಯದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾಭಿಮಾನಿ ಸಮುದಾಯದ ಹಿತಕ್ಕಾಗಿ ಬದುಕಿರುತ್ತಾನೆ, ಸ್ವಾರ್ಥಿ ತನಗಾಗಿ ಬದುಕಿರುತ್ತಾನೆ. ಚಲವಾದಿ ಸಮುದಾಯಕ್ಕೆ ಅತ್ಯಂತ ಸ್ವಾಭಿಮಾನಿ ಪರಂಪರೆ ಇದೆ. ಅಂಬೇಡ್ಕರ್ ಅವರು ಮನಸ್ಮೃತಿಯನ್ನು ಸುಡುವ ಮೂಲಕ ಎಲ್ಲ ಸಮುದಾಯಗಳಿಗೂ ಬದುಕುವ ಹಕ್ಕನ್ನು ನೀಡಿದ್ದಾರೆ ಎಂದರು.

ಈ ದೇಶದಲ್ಲಿ ದಲಿತ ಸಮುದಾಯಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ದಲಿತ ಸಮುದಾಯಗಳು ಸಂಘಟಿತರಾದರೆ ಈ ದೇಶದಲ್ಲಿ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಬಹುದು. ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಆಗ ಮಾತ್ರ ಅಂಬೇಡ್ಕರ್ ವಾದಿಗಳಾಗಲು ಸಾಧ್ಯ ಎಂದು ತಿಳಿಸಿದರು.

ವೈದ್ಯ  ಡಾ. ನಾಗಭೂಷಣ್ ಮಾತನಾಡಿ ಭೀಮವಾದ ಸೋಲುವ ಆತಂಕ ಎದುರಾಗಿದೆ ಮನುಸ್ಮೃತಿ ವಿಜೃಂಭಿಸುತ್ತಿದೆ, ನಾವೆಲ್ಲಾ ವಿದ್ಯಾವಂತರು, ಪ್ರಜ್ಞಾವಂತರು ಈ ವಿಚಾರವನ್ನು ಗ್ರಹಿಸಬೇಕು ಗ್ರಹಿಸಿ ಜಾಗೃತರಾಗಿ ಹೋರಾಟ ಮಾಡಬೇಕು ಮುಂದಿನ ತಲೆಮಾರಿಗೆ ಹಾದಿ ಸುಗಮ ಮಾಡಿಕೊಡಬೇಕು ಮತ್ತು ಈ ದೇಶದ ಮೂಲ ನಿವಾಸಿಗಳಿಗೆ ಸಂವಿಧಾನಬದ್ಧವಾಗಿ ದೊರಕಬಹುದಾದ ಹಕ್ಕುಗಳಿಗಾಗಿ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀಬಸವವಾನಂದ ಸ್ವಾಮೀಜಿ, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಈರಣ್ಣ, ಗೌರವಾಧ್ಯಕ್ಷ ಲೋಕೇಶ್, ಯುವ ಘಟಕದ ಅಧ್ಯಕ್ಷ ಎಚ್ ಕೆ ಮಧು, ಡಾ ನಾಗಭೂಷಣ್, ಶ್ವೇತ ಜಗದೀಶ್, ಸಾತೇನಹಳ್ಳಿ ರಮೇಶ್, ನಾಗರಾಜು, ವತ್ಸಲ,  ಹಾಗೂ ಚಲವಾದಿ ಮಹಾಸಭಾ ಪದಾಧಿಕಾರಿಗಳು ಮತ್ತು ಸಮುದಾಯದ ಜನರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...